ರಾಜ್ಯಮಟ್ಟದ ಈಜು ಸ್ಪರ್ಧೆ: ಪುತ್ತೂರು ಬಾಲಕಿಗೆ ಬೆಳ್ಳಿ ಪದಕ
Team Udayavani, Jun 6, 2018, 12:42 PM IST
ಪುತ್ತೂರು: ಪುತ್ತೂರು ಅಕ್ವೆಟಿಕ್ ಕ್ಲಬ್ನ ಸದಸ್ಯೆ, 8 ವರ್ಷದ ಬಾಲಕಿ ಮೋನ್ಯಾ ಕೌಸುಮಿ ಅವರು ಮೈಸೂರಿನಲ್ಲಿ ಕರ್ನಾಟಕ ಸ್ವಿಮ್ಮಿಂಗ್ ಅಸೋಸಿಯೇಶನ್ ಆಯೋಜಿಸಿದ ಜೂನಿಯರ್ ಹಾಗೂ ಸಬ್ ಜ್ಯೂನಿಯರ್ ರಾಜ್ಯ ಅಕ್ವೆಟಿಕ್
ಚಾಂಪಿಯನ್ಶಿಪ್ನ 50 ಮೀ. ಫ್ರೀ ಸ್ಟೈಲ್ ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.
ಕಡಿಮೆ ವಯಸ್ಸಿನಲ್ಲೇ ಜ್ಯೂನಿಯರ್ ಸ್ಟೇಟ್ ಮೀಟ್ನಲ್ಲಿ ಭಾಗವಹಿಸಿ ಪದಕ ಪಡೆದ ಸಾಧನೆಯೊಂದಿಗೆ ಪುಣೆಯಲ್ಲಿ ಜೂ. 26ರಂದು ನಡೆಯುವ ರಾಷ್ಟ್ರೀಯ ಅಕ್ವೆಟಿಕ್ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ. ಇದರ ಜತೆಗೆ ಪುತ್ತೂರು ಅಕ್ವೆಟಿಕ್ ಕ್ಲಬ್ನ ನೀಲ್ ಮಸ್ಕರೇನಸ್ (14 ವರ್ಷ) 200 ಮೀ. ಬ್ರೆಸ್ಟ್ಸ್ಟ್ರೋಕ್ನಲ್ಲಿ ಕಂಚಿನ ಪದಕ ಪಡೆದುಕೊಂಡಿದ್ದಾರೆ. ಇವರಿಬ್ಬರೂ ಸಂತ ಫಿಲೋಮಿನಾ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ಡಾ| ಶಿವರಾಮ ಕಾರಂತ ಬಾಲವನ ಈಜುಕೊಳದ ಪಾರ್ಥ ವಾರಣಾಸಿ, ನಿರೂಪ್ ಜಿ.ಆರ್. ಹಾಗೂ ರೋಹಿತ್ ಅವರಿಂದ ತರಬೇತಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.