ರಾಜ್ಯ ಕಚೇರಿಗಳು ಅಬಾಧಿತ; ಕಾರ್ಮಿಕರು ನಿರಾಳ


Team Udayavani, Dec 8, 2017, 11:53 AM IST

esi.jpg

ಮಂಗಳೂರು : ಇಎಸ್‌ಐಸಿ (ಕಾರ್ಮಿಕರ ರಾಜ್ಯ ವಿಮಾ ನಿಗಮ) ಮಂಗಳೂರು ಉಪ ಪ್ರಾದೇಶಿಕ ಕಚೇರಿಯನ್ನು ಮುಚ್ಚುವ ಪ್ರಸ್ತಾವನೆಯನ್ನು ಇಎಸ್‌ ಐಸಿ ನಿಗಮವು ಕೊನೆಗೂ ಕೈಬಿಟ್ಟಿದೆ. ಈ ಮೂಲಕ, ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯ ಸುಮಾರು ಎರಡು ಲಕ್ಷಕ್ಕೂ ಅಧಿಕ ಕಾರ್ಮಿಕರು ಹಾಗೂ 5000ಕ್ಕೂ ಅಧಿಕ ಉದ್ಯೋಗಿಗಳಲ್ಲಿ ಆವರಿಸಿದ್ದ ಆತಂಕ ದೂರವಾಗಿದೆ.

ಹೊಸದಿಲ್ಲಿಯಲ್ಲಿ ಡಿ.6ರಂದು ಜರುಗಿದ ಇಎಸ್‌ಐಸಿ ನಿಗಮದ ನಿರ್ದೇಶಕರ ಸಭೆಯಲ್ಲಿ ಉಪ ಪ್ರಾದೇಶಿಕ ಕಚೇರಿಗಳನ್ನು ಮುಚ್ಚುವ ಪ್ರಸ್ತಾವನೆ ಚರ್ಚೆಗೆ ಬಂದಿದ್ದು, ದೇಶಾದ್ಯಂತ ಕಾರ್ಮಿಕರು ಮತ್ತು ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಪ್ರಸ್ತಾವನೆಯನ್ನು ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆಡಳಿತಾತ್ಮಕ ಸಮಸ್ಯೆಗಳನ್ನು ಮುಂದಿಟ್ಟು ಇಎಸ್‌ಐಸಿ ನಿಗಮ ದೇಶಾದ್ಯಂತ ಒಟ್ಟು 18 ಉಪ ಪ್ರಾದೇಶಿಕ
ಕಚೇರಿಗಳನ್ನು ಮುಚ್ಚಲು ತೀರ್ಮಾನಿಸಿತ್ತು. ರಾಜ್ಯದಲ್ಲಿ ಮಂಗಳೂರು. ಮೈಸೂರು, ಬೊಮ್ಮಸಂದ್ರ, ಪೀಣ್ಯ, ಹುಬ್ಬಳ್ಳಿ, ಗುಲ್ಬರ್ಗಾ ಸೇರಿ ಒಟ್ಟು ಇಎಸ್‌ ಐಸಿ ಉಪಪ್ರಾದೇಶಿಕ ಕಚೇರಿಗಳಿದ್ದು, ಇವುಗಳಲ್ಲಿ ಮಂಗಳೂರು, ಮೈಸೂರು, ಬೊಮ್ಮಸಂದ್ರ, ಪೀಣ್ಯ ಉಪಕೇಂದ್ರಗಳನ್ನು ಮುಚ್ಚಲು ನಿರ್ಧರಿಸಲಾಗಿತ್ತು. ಮಂಗಳೂರು ಉಪಕಚೇರಿಯನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಪ್ರಸ್ತಾವನೆ ರೂಪಿಸಲಾಗಿತ್ತು. ಹೊಸದಿಲ್ಲಿಯಲ್ಲಿ ಬುಧವಾರ ಜರಗಿದ ನಿಗಮದ ನಿರ್ದೇಶಕರ ಸಭೆಯಲ್ಲಿ ಉಪಪ್ರಾದೇಶಿಕ ಕಚೇರಿಗಳನ್ನು ಮುಚ್ಚಿ ಸಮೀಪದ ಉಪ ಪ್ರಾದೇಶಿಕ ಕಚೇರಿ ಹಾಗೂ ಪ್ರಾದೇಶಿಕ ಕಚೇರಿಯೊಂದಿಗೆ ವಿಲೀನಗೊಳಿಸುವ ಪ್ರಸ್ತಾವನೆಯನ್ನು ಮಂಡಿಸಲಾಗಿದ್ದು, ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಕೇಂದ್ರ ಕಾರ್ಮಿಕ ಸಚಿವರು ಕೂಡ ನಿಗಮದ ಪ್ರಸ್ತಾವನೆಗೆ ವಿರೋಧ ಸೂಚಿಸಿದ್ದರು. ಈ
ಹಿನ್ನೆಲೆಯಲ್ಲಿ ಪ್ರಸ್ತಾವನೆಯನ್ನು ಕೈಬಿಡಲಾಗಿದೆ ಎಂದು ಕಾರ್ಮಿಕ ಇಲಾಖೆ ಮೂಲಗಳು “ಉದಯವಾಣಿ’ಗೆ
ಸ್ಪಷ್ಟಪಡಿಸಿವೆ.

ಪ್ರಬಲ ವಿರೋಧಕ್ಕೆ ಮಣಿದ ನಿಗಮ ಬೆಂಗಳೂರು ಇಎಸ್‌ಐಸಿ ಪ್ರಾದೇಶಿಕ ಕಚೇರಿಯ ಮೇಲಿರುವ ಒತ್ತಡವನ್ನು ಪರಿಗಣಿಸಿ ಬಹಳಷ್ಟು ಬೇಡಿಕೆ, ಮನವಿಯ ಹಿನ್ನೆಲೆಯಲ್ಲಿ 2013ರಲ್ಲಿ ಇಎಸ್‌ಐಸಿ ಉಪಪ್ರಾದೇಶಿಕ ಕಚೇರಿ ಮಂಗಳೂರಿನ ನವಭಾರತ ವೃತ್ತದಲ್ಲಿ ಕಾರ್ಯಾರಂಭ ಮಾಡಿತ್ತು. ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕಾರ್ಮಿಕರು ಮತ್ತು ಉದ್ಯೋಗದಾತರಿಗೆ ಆಪತ್ಬಾಂಧವನಂತಿದ್ದ ಈ ಕಚೇರಿಯ ವ್ಯಾಪ್ತಿಯಲ್ಲಿ ಎರಡು ಲಕ್ಷಕ್ಕೂ ಅಧಿಕ
ಕಾರ್ಮಿಕರು ಹಾಗೂ ಸುಮಾರು 5200 ಮಂದಿ ಉದ್ಯೋಗದಾತರಿದ್ದಾರೆ. ತಮ್ಮ ಸಮಸ್ಯೆಗಳು, ಆವಶ್ಯಕತೆಗಳಿಗಾಗಿ ವೈಯಕ್ತಿಕವಾಗಿ ಕಚೇರಿಗೆ ಬಂದು ಒಂದೇ ದಿನದಲ್ಲಿ ಪರಿಹಾರ ಕಂಡುಕೊಳ್ಳುತ್ತಿದ್ದಾರೆ.

ಕಚೇರಿಯನ್ನು ಮುಚ್ಚಿ ಇಲ್ಲಿನ ವ್ಯವಹಾರವನ್ನು ಬೆಂಗಳೂರಿಗೆ ಸ್ಥಳಾಂತರಿಸಿದರೆ ಬೆಂಗಳೂರು ಕಚೇರಿಯನ್ನು ಆಶ್ರಯಿಸಬೇಕಾಗುತ್ತದೆ. ನಿಗಮದ ಈ ಪ್ರಸ್ತಾವಿತ ಕ್ರಮದಿಂದ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಯ ಲಕ್ಷಾಂತರ ಕಾರ್ಮಿಕರು ಹಾಗೂ ಸಾವಿರಾರು ಉದ್ಯೋಗದಾತರು ಆತಂಕಕ್ಕೆ ಒಳಗಾಗಿದ್ದರು. ನಿಗಮದ ನಿರ್ಧಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲು ಕಾರ್ಮಿಕರು ಹಾಗೂ ಉದ್ಯೋಗಿಗಳು ಮುಂದಾಗಿದ್ದರು. ಕಚೇರಿ ಮುಚ್ಚುಗಡೆ ಪ್ರಸ್ತಾವನೆ
ಅವೈಜ್ಞಾನಿಕ ಮತ್ತು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾದದ್ದು ಎಂದು ಇಂಟಕ್‌, ಸಿಐಟಿಯು, ಎಐಟಿಯುಸಿ, ಬಿಎಂಎಸ್‌, ಎಚ್‌ಎಂಎಸ್‌ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು, ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಪ್ರಬಲ ವಿರೋಧ ವ್ಯಕ್ತಪಡಿಸಿದ್ದವು. 

ಗಮನ ಸೆಳೆದ ಉದಯವಾಣಿ ವರದಿ ಇಎಸ್‌ಐಸಿ ಮಂಗಳೂರು ಉಪಪ್ರಾದೇಶಿಕ ಕಚೇರಿಯನ್ನು ಮುಚ್ಚಿ ರಾಜ್ಯ ರಾಜಧಾನಿಗೆ ಸ್ಥಳಾಂತರಿಸುವ ನಿಗಮದ ಪ್ರಸ್ತಾವನೆಯ ಬಗ್ಗೆ ಉದಯವಾಣಿ ನ.28ರಂದು ವಿಸ್ತೃತ ವರದಿ ಪ್ರಕಟಿಸಿತ್ತು. ನಿಗಮದ ಪ್ರಸ್ತಾವನೆ ಕಾರ್ಯರೂಪಕ್ಕೆ ಬಂದರೆ ಕಾರ್ಮಿಕರು ಹಾಗೂ ಉದ್ಯೋಗದಾತರಿಗೆ ಎದುರಾಗುವ ಸಮಸ್ಯೆಗಳ
ಬಗ್ಗೆ ವರದಿಯಲ್ಲಿ ಗಮನ ಸೆಳೆದಿತ್ತು. ಕಾರ್ಮಿಕ ಸಂಘಟನೆಗಳು, ಮುಖಂಡರು ಎಚ್ಚೆತ್ತು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಮಂಗಳೂರು ಇಎಸ್‌ಐಸಿ ಉಪಪ್ರಾದೇಶಿಕ ಕಚೇರಿಯ ಮುಚ್ಚುಗಡೆ ನಡೆಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಕೇಂದ್ರ ಕಾರ್ಮಿಕ ಸಚಿವರಿಗೆ ಮನವಿ ಮಾಡಿ ಕಚೇರಿಯನ್ನು ಮಂಗಳೂರಿನಲ್ಲಿ
ಉಳಿಸಿಕೊಳ್ಳುವುದಾಗಿ ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದರು. ಇದೆಲ್ಲವನ್ನೂ ವರದಿ ಉಲ್ಲೇಖೀಸಿತ್ತು. 

ಇಎಸ್‌ಐ ಮಂಗಳೂರು ಉಪ ಪ್ರಾದೇಶಿಕ ಕಚೇರಿಯನ್ನು ಮುಚ್ಚುವ ಪ್ರಸ್ತಾವನೆಯಿಂದ ಲಕ್ಷಾಂತರ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದರು. ಕಾರ್ಮಿಕ ಸಂಘಟನೆಗಳು ಕೂಡ ವಿರೋಧ ವ್ಯಕ್ತಪಡಿಸಿದ್ದವು. ಈ ಬಗ್ಗೆ ಕೇಂದ್ರ ಕಾರ್ಮಿಕ ಸಚಿವರನ್ನು ಭೇಟಿಯಾಗಿ ಯಾವುದೇ ಕಾರಣಕ್ಕೂ ಮಂಗಳೂರು ಕಚೇರಿ ಮುಚ್ಚದಂತೆ ಮನವರಿಕೆ ಮಾಡಿದ್ದೆ. ಮನವಿಗೆ ಸ್ಪಂದಿಸಿರುವುದಕ್ಕೆ ಸಚಿವರಿಗೆ ಕೃತಜ್ಞತೆ.
ನಳಿನ್‌ ಕುಮಾರ್‌ ಕಟೀಲು, ಸಂಸದ ದ.ಕ

„ ಕೇಶವ ಕುಂದರ್‌

ಟಾಪ್ ನ್ಯೂಸ್

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

3

Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ

2

Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು

4-aryabhata

ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.