ಒಟ್ಟು 201 ಸಾಕ್ಷಿಗಳಿಂದ ಹೇಳಿಕೆ ಸಲ್ಲಿಕೆ: ಜಗದೀಶ್
ಮಂಗಳೂರು ಗೋಲಿಬಾರ್; ಮ್ಯಾಜಿಸ್ಟೀರಿಯಲ್ ತನಿಖೆ
Team Udayavani, Feb 7, 2020, 6:13 AM IST
ಮಂಗಳೂರು: ನಗರದಲ್ಲಿ ಡಿಸೆಂಬರ್ 19ರಂದು ನಡೆದ ಅಹಿತಕರ ಘಟನೆ ಮತ್ತು ಪೊಲೀಸ್ ಗೋಲಿಬಾರ್ ಕುರಿತು ನಡೆಯುತ್ತಿರುವ ಮ್ಯಾಜಿಸ್ಟೀರಿಯಲ್ ತನಿಖೆಯ ಭಾಗವಾಗಿ ಗುರುವಾರ ಮಂಗಳೂರು ಸಹಾಯಕ ಅಯುಕ್ತರ ಕೋರ್ಟ್ ಹಾಲ್‌ನಲ್ಲಿ ಸಾರ್ವಜನಿಕರಿಂದ ಅಹವಾಲು ಆಲಿಸಲಾಯಿತು.
ಗುರುವಾರ 75 ಮಂದಿ ಪ್ರಮಾಣಪತ್ರ ಸಮೇತ ಅಹವಾಲು ಸಲ್ಲಿಸಿದರು. ಗೋಲಿಬಾರ್‌ನಿಂದ ಸಾವನ್ನಪ್ಪಿದ ಜಲೀಲ್‌ನ ಸಂಬಂಧಿಕರು (ಮಹಿಳೆಯರು) ಕೂಡ ಸಾಕ್ಷಿ ಹೇಳಿಕೆಗಳನ್ನು ಮ್ಯಾಜಿಸ್ಟ್ರೇಟರಿಗೆ ಸಲ್ಲಿಸಿದರು. ಮ್ಯಾಜಿಸ್ಟೀರಿಯಲ್ ತನಿಖೆಗೆ ನೇಮಕಗೊಂಡಿರುವ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಅವರು ಅಹವಾಲುಗಳನ್ನು ಸ್ವೀಕರಿಸಿ ದಾಖಲಿಸಿಕೊಂಡರು.
201 ಸಾಕ್ಷಿಗಳ ಹೇಳಿಕೆ
ಇದು ಮ್ಯಾಜಿಸ್ಟೀರಿಯಲ್ ತನಿಖೆಯ ಭಾಗವಾಗಿ ನಡೆದ 5ನೇ ಬೈಠಕ್ ಆಗಿದ್ದು, ಇಂದು 75 ಜನರ ಸಾಕ್ಷಿ ಸೇರಿದಂತೆ ಈವರೆಗೆ ಒಟ್ಟು 201 ಸಾಕ್ಷಿಗಳು ಹೇಳಿಕೆಗಳನ್ನು ನೀಡಿದಂತಾಗಿದೆ ಎಂದು ಜಗದೀಶ್ ಅವರು ಸುದ್ದಿಗಾರರಿಗೆ ತಿಳಿಸಿದರು.
ಫೆ. 13ರಂದು ಪೊಲೀಸರ ಸಾಕ್ಷ್ಯ ಸಲ್ಲಿಸಲು ಸೂಚನೆ
ಇಂದು ಅಂತಿಮ ಅಹವಾಲು ಸಲ್ಲಿಕೆ ಎಂದು ಈ ಹಿಂದೆ ತಿಳಿಸಿದ್ದರೂ ಇದೀಗ ಹೈಕೋರ್ಟ್‌ನ ಸೂಚನೆಯಂತೆ ಫೆ. 13ರಂದು ಇನ್ನೊಂದು ಬೈಠಕ್ ನಡೆಸಲಾಗುವುದು. ಇಂದು ಮೌಖೀಕವಾಗಿ ಸಾಕ್ಷಿ ಹೇಳಿಕೆ ನೀಡಲು ಬಂದಿದ್ದ 8 ಮಂದಿಗೆ ಫೆ. 13ರಂದು ಅಫಿದವಿತ್ ಸಮೇತ ಬಂದು ಸಾಕ್ಷಿ ಹೇಳಿಕೆ ನೀಡಲು ಅವಕಾಶ ಕಲ್ಪಿಸಲಾಗಿದೆ.
ಪೊಲೀಸರು ತಮ್ಮ ಬಳಿ ಇರುವ ವೀಡಿಯೋ ಮತ್ತು ಸಿಸಿ ಕೆಮರಾದ ಸಾಕ್ಷಿಗಳನ್ನು ಅಂದು ಹಾಜರು ಪಡಿಸುವಂತೆ ಸೂಚಿಸಲಾಗಿದೆ. ಮಾಧ್ಯಮದವರು ಮತ್ತು ಇತರ ಸಾರ್ವಜನಿಕರು ಕೂಡ ವೀಡಿಯೋ ಸಾಕ್ಷ್ಯಗಳಿದ್ದರೆ ಸಲ್ಲಿಸಬಹುದು ಎಂದು ಜಗದೀಶ್ ವಿವರಿಸಿದರು. ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ಕೆ.ಯು. ಬೆಳ್ಳಿಯಪ್ಪ ಉಪಸ್ಥಿತರಿದ್ದರು.
ನಿರಪರಾಧಿಗಳಿಗೆ ಅನ್ಯಾಯ ಆಗದಿರಲಿ
ಗಲಭೆ ಪ್ರಕರಣದಲ್ಲಿ ನಿರಪರಾಧಿಗಳಿಗೆ ಅನ್ಯಾಯ ಆಗಬಾರದು. ಆದರೆ ಅಪರಾಧಿಗಳನ್ನು ಯಾವುದೇ ಕಾರಣಕ್ಕೂ ಬಿಡಬಾರದು. ಘಟನೆ ಏಕೆ ನಡೆಯಿತು ಎನ್ನುವ ವಿಷಯ ಬೆಳಕಿಗೆ ಬರಬೇಕು ಎಂದು ಮುಸ್ಲಿಂ ಮುಖಂಡ ಡಿ.ಎಂ. ಅಸ್ಲಾಂ ಸುದ್ದಿಗಾರರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.