ಲಕ್ಷ ದೀಪೋತ್ಸವದಲ್ಲಿ ಗಮನ ಸೆಳೆಯುತ್ತಿದೆ ಪ್ಲಾಸ್ಟಿಕ್ ವಿರುದ್ಧ ಸಮರ ಸಾರುವ ಬೀದಿ ನಾಟಕ


Team Udayavani, Nov 25, 2019, 12:20 AM IST

Street-Play-730

ಅಕ್ಕಪಕ್ಕದ ಎರಡು ಊರು ಆ ಎರಡೂ ಊರಿನಲ್ಲಿ ವಿಪರೀತ ಎನ್ನುವಂತಹ ಕಸ ವಿಲೇವಾರಿ ಸಮಸ್ಯೆ. ಒಂದು ದಿನ ಎರಡೂ ಊರಿನ ಜನರೆಲ್ಲಾ ಭೇಟಿಯಾಗಿ ಇದೇ ಸಮಸ್ಯೆಯ ಬಗ್ಗೆ ಚರ್ಚಿಸುತ್ತಾರೆ. ಪ್ಲಾಸ್ಟಿಕ್ ಎಂಬ ಮಾರಿಯನ್ನು ಹೊಡೆದೋಡಿಸಲು ಪಣತೊಟ್ಟಾಗ, ಅದೇ ಪ್ಲಾಸ್ಟಿಕ್ ಅವರನ್ನು ಇನ್ನಿಲ್ಲದಂತೆ ಕಾಡುತ್ತದೆ. ಇದರಿಂದ ಅವರು ಹೇಗೆ ಪಾರಾಗುತ್ತಾರೆ?

ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕಾದರೆ ನೀವೊಮ್ಮೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಬೀದಿ ನಾಟಕವನ್ನೊಮ್ಮೆ ನೋಡಬೇಕು. ಅದಕ್ಕಾಗಿ ಒಮ್ಮೆ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದಲ್ಲಿ ಪಾಲ್ಗೊಳ್ಳಬೇಕು. ಪ್ಲಾಸ್ಟಿಕ್ ಎಂಬ ಬೃಹದ್ ರಾಕ್ಷಸ ಹಿಡಿತದಿಂದ ಜೀವಸಮೂಹ ವಿಮುಕ್ತಗೊಳ್ಳುವ ಮಾರ್ಗ ಗೊತ್ತಾಗುತ್ತದೆ.

ಪ್ಲಾಸ್ಟಿಕ್ ಈಗ ಕೇವಲ ಒಂದು ನಿರ್ದಿಷ್ಟ ಊರಿಗೆ ಮಾತ್ರ ಸೀಮಿತವಾಗಿ ಉಳಿದಿಲ್ಲ. ಅದು ಈಗ ಇಡೀ ಜಗತ್ತನ್ನು ಕಾಡುತ್ತಿದೆ. ಅದನ್ನು ಬಗ್ಗು ಬಡಿಯು ಅಸ್ತ್ರವೂ ನಮ್ಮಲ್ಲೇ ಇದೆ ಎಂಬುದನ್ನು ತಿಳಿಸುವ ಪ್ರಯತ್ನ ಈ ಬೀದಿ ನಾಟಕದ್ದು. ಇದು ಯಶಸ್ವಿಯಾಗಿ ಪ್ರದರ್ಶನ ಕಂಡಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವದಲ್ಲಿ!

ಪ್ಲಾಸ್ಟಿಕ್ ಸಮಸ್ಯೆಯಿಂದ ಗ್ರಾಮಸ್ಥರು ಬಳಲುತ್ತಿರುವಾಗ ಕಸ ವಿಲೇವಾರಿ, ಸ್ವಚ್ಛತೆಯ ಕುರಿತು ಅರಿವಿನ ಮಾರ್ಗವನ್ನು ಜಾಗೃತ ವ್ಯಕ್ತಿಯೊಬ್ಬರು ತಿಳಿಸಿಕೊಡುತ್ತಾರೆ. ಈ ಪ್ರಸಂಗವನ್ನು ಮನೋಜ್ಞವಾಗಿ ಈ ಬೀದಿನಾಟಕ ಬಿಂಬಿಸಿದೆ.


ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವ ಎಂದರೆ ಜನಸಾಗರವೇ ಸೇರಿರುತ್ತದೆ. ಅಂದ ಮೇಲೆ ಸ್ವಚ್ಛತೆ ಕಡೆಗೆ ಗಮನ ನೀಡಲೇಬೇಕು. ಒಂದಿಷ್ಟು ಜನರನ್ನು ನೇಮಿಸಿ ಗಮನ ನೀಡಿ ಎನ್ನುವುದರ ಬದಲಾಗಿ ಜನರಲ್ಲೇ ಜಾಗೃತಿ ಮೂಡಿಸಿದರೆ ಹೇಗೆ? ಈ ಭಿನ್ನ ಆಲೋಚನೆ ಹೊಳೆದಿದ್ದೇ ತಡ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ. ಹೆಗ್ಗಡೆ ಅವರ ಪರಿಕಲ್ಪನೆಯಲ್ಲಿ ಬೀದಿನಾಟಕವೊಂದು ರೂಪುಗೊಂಡಿತು. ಅದುವೇ ’ನಾವು ಮತ್ತು ನಮ್ಮ ಪರಿಸರ’.

ಲಕ್ಷ ದೀಪಗಳ ಸಂಗಮಕ್ಕೆ ಇನ್ನಷ್ಟು ಮೆರುಗು ತುಂಬಲು ದಿನಾಂಕ 22ರಿಂದ 26ರವರೆಗೆ ’ನಾವು ಮತ್ತು ನಮ್ಮ ಪರಿಸರ’ ಬೀದಿನಾಟಕವನ್ನು ಎಸ್.ಕೆ.ಡಿ.ಆರ್.ಡಿ.ಪಿ.ಯ ಕಲಾವಿದರ ತಂಡ ಪ್ರದರ್ಶಿಸಲಿದೆ. ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಇರುವ ’ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ’ಯ ಕಾರ್ಯಕರ್ತರೇ ಪಾತ್ರಧಾರಿಗಳು. 15 ಜನರ ಈ ತಂಡ ಪ್ಲಾಸ್ಟಿಕ್ ನಿರ್ಮೂಲನೆ ಹಾಗೂ ಪರಿಸರ ಸಂರಕ್ಷಣೆ ಕುರಿತಾಗಿ ಜಾಗೃತಿ ಮೂಡಿಸಲಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯ ಶಿಕ್ಷಕ ಚಂದ್ರಹಾಸ ನಾಟಕ ರಚಿಸಿ ನಿರ್ದೇಶಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಎಲ್ಲಾ ಕ್ಷೇತ್ರಗಳಿಂದ ಒಬ್ಬೊಬ್ಬ ಸಿಬ್ಬಂದಿಯನ್ನು ಆಯ್ಕೆಮಾಡಿ, ಪುಟ್ಟ ತಂಡ ಕಟ್ಟಿಕೊಂಡು ಪರಿಸರ ರಕ್ಷಣೆಗೆ ತಮ್ಮ ಅಳಿಲು ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಪ್ಲಾಸ್ಟಿಕ್‌ನಿಂದ ಆಗುವ ದುಷ್ಪರಿಣಾಮ, ಭೂಮಿಗೆ ಆಗುವ ಹಾನಿಗಳು, ಹಾಗೂ ಮಾನವರ ಜೀವಕ್ಕೆ ಆಗುವ ನಷ್ಟಗಳನ್ನು ಸರಳವಾಗಿ ಪ್ರಸ್ತುತಪಡಿಸಿದ್ದಾರೆ.

ನಾಟಕದ ಕಥಾವಸ್ತು ಮಾತ್ರವಲ್ಲ, ನಾಟಕದ ಪರಿಕರವೂ ವಿಶೇಷವಾಗಿದೆ. ಅನುಪಯುಕ್ತ ಪ್ಲಾಸ್ಟಿಕ್ ಬಾಲ್, ಚೊಂಬು, ಇವುಗಳನ್ನೇ ಉಪಯೋಗಿಸಿ, ಕಿರೀಟ, ಹಾರ ಇವುಗಳನ್ನು ತಯಾರಿಸಲಾಗಿತ್ತು. ಇವುಗಳನ್ನು ವಿನ್ಯಾಸ ಮಾಡಿದವರು ಮಹೇಶ್‌ಆಚಾರ್ಯ. ಇವರೂ ಗ್ರಾಮಾಭಿವದ್ಧಿ ಯೋಜನಾ ಸಿಬ್ಬಂದಿ.

ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ಯಾವುದೇ ನಡೆಯಲಿ, ಅಲ್ಲಿ ಈ ತಂಡ ಹಾಜರಿದ್ದು ಜನರು ಜವಾಬ್ದಾರಿಮರೆಯದಂತೆ ನೆನಪಿಸುತ್ತದೆ. ಲಕ್ಷದೀಪೋತ್ಸವದ ಅಷ್ಟೂ ದಿನಗಳ ಕಾಲ ಸಂಜೆ 04ರಿಂದ ರಾತ್ರಿ 10 ಗಂಟೆಯವರೆಗೆ ಎಲ್ಲಾ ಕಡೆ ಸಂಚರಿಸಿ, ನಾಟಕದ ಜೊತೆಗೆ ಜಾಥಾ ನಡೆಯಲಿದೆ.

ವರದಿ: ಟಿ. ವರ್ಷಾ ಪ್ರಭು ; ಚಿತ್ರಗಳು: ಶಿವಪ್ರಸಾದ್ ಹಳುವಳ್ಳಿ

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

23-balindra

Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ

22-bantwala-5

Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ

21-ptr

Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!

20-kadaba

ಮರ ಬಿದ್ದು ಸವಾರ ಸಾವು; ಅಪಾಯಕಾರಿ ಮರ ತೆರವಿಗೆ ಅಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.