ಒಣಕಸ-ಹಸಿಕಸ ಪ್ರತ್ಯೇಕಿಸದಿದ್ದರೆ ಕಠಿನ ಕ್ರಮ’

ಮನಪಾದಿಂದ ಹೊಟೇಲ್, ವ್ಯಾಪಾರಿಗಳ ಸಭೆ

Team Udayavani, Jul 4, 2019, 5:27 AM IST

0307MLR37-MCC

ಮಹಾನಗರ: ನಗರದಲ್ಲಿ ದಿನನಿತ್ಯ ಉತ್ಪತ್ತಿಯಾಗುವ ತ್ಯಾಜ್ಯವನ್ನು ಹಸಿ ಹಾಗೂ ಒಣಕಸ ಎಂಬ ರೀತಿಯಲ್ಲಿ ವಿಂಗಡನೆಗೆ ಮುಂದಾಗಿರುವ ಮಂಗ ಳೂರು ಮಹಾನಗರ ಪಾಲಿಕೆ ಬುಧವಾರ ನಗರದ ಹೊಟೇಲ್ಗಳು, ಬಾರ್‌ ಆ್ಯಂಡ್‌ ರೆಸ್ಟೋರೆಂಟ್, ಕಲ್ಯಾಣ ಮಂಟಪಗಳು, ವಿವಿಧ ವ್ಯಾಪಾರಿಗಳ ಸಂಘದವರಿಗೆ ವಿಶೇಷ ಸಭೆ ಕರೆದು ಕಸ ವಿಂಗಡನೆಯ ಅರಿವು ಮೂಡಿಸಿದೆ.

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಮೊಹಮ್ಮದ್‌ ನಝೀರ್‌ ಮಾತನಾಡಿ, ಹಲವು ವರ್ಷಗಳಿಂದ ಚರ್ಚೆಯಾಗುತ್ತಿದ್ದ ಹಸಿ, ಒಣ ಕಸ ವಿಂಗಡಣೆಗೆ ನಿಯಮ ಜಾರಿಗೆ ಪಾಲಿಕೆ ಈ ಬಾರಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ನಗರದ ಪ್ರತಿ ಮನೆ, ಕಟ್ಟಡ, ಹೊಟೇಲ್ಗಳಲ್ಲೂ ಈ ನಿಯಮವನ್ನು ಪಾಲಿಸಬೇಕು ಎಂದರು.

ನಿತ್ಯ 100 ಕೆ.ಜಿ. ಗಿಂತಲೂ ಅಧಿಕ ತ್ಯಾಜ್ಯ ಸಂಗ್ರಹಿಸುವ ಹೊಟೇಲ್ಗಳು ಅವರದ್ದೇ ಆದ ತ್ಯಾಜ್ಯ ಸಂಸ್ಕರಣಾ ವ್ಯವಸ್ಥೆಯನ್ನು ಮಾಡಬಹುದು. ಇದು ಪಾಲಿಕೆಗೆ ತೆರುವ ಘನತ್ಯಾಜ್ಯ ಶುಲ್ಕಕ್ಕಿಂತ ಕಡಿಮೆಯಾಗಲಿದೆ ಎಂದು ಹೇಳಿದರು.

ಮಂಗಳೂರನ್ನು ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಗೊಳಿಸಲು ಜಿಲ್ಲಾಡ ಳಿತ, ಪ್ರವಾಸೋದ್ಯಮ ಇಲಾಖೆ, ಸ್ಥಳೀಯಾಡಳಿತ ಕ್ರಮಕ್ಕೆ ಮುಂದಾಗಿದೆ. ಆ ಹಿನ್ನೆಲೆಯಲ್ಲಿ ಹೊಟೇಲ್ಗಳು, ಬಾರ್‌ ಆ್ಯಂಡ್‌ ರೆಸ್ಟೋರೆಂಟ್ ಮಾಲಕರು ತಮ್ಮ ಉದ್ದಿಮೆಯಲ್ಲಿ ಗುಣಮಟ್ಟವನ್ನು ಕಾಯ್ದು ಕೊಳ್ಳುವುದರ ಜತೆಗೆ ಸ್ಥಳೀಯಾಡಳಿತ ಜಾರಿಗೊಳಿಸುವ ನಿಯಮಗಳೊಂದಿಗೆ ಕೈ ಜೋಡಿಸಬೇಕು ಎಂದರು.

ಪಾಲಿಕೆಗೆ ಮಾಹಿತಿ ನೀಡಿ
ಪರಿಸರ ಅಭಿಯಂತರ ಮಧು ಮಾತನಾಡಿ, ಹೊಟೇಲ್, ಬಾರ್‌ ಆ್ಯಂಡ್‌ ರೆಸ್ಟೋರೆಂಟ್, ಕಲ್ಯಾಣ ಮಂಟಪಗಳಲ್ಲಿ ಹಸಿ, ಒಣ ಕಸ ಪ್ರತ್ಯೇಕಿಸಿ ನೀಡಬೇಕಾಗುತ್ತದೆ. ಈ ಕುರಿತಂತೆ ಎಲ್ಲರಿಗೂ ಈಗಾಗಲೇ ಮಾಹಿತಿ ನೀಡಲಾಗಿದೆ.

ಇನ್ನುಳಿದಂತೆ ಮನೆಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಾಗ 100ಕ್ಕಿಂತ ಅಧಿಕ ಮಂದಿ ಭಾಗವಹಿಸುವುದಾದರೆ ಮೂರು ದಿನಗಳ ಮುಂಚೆ ಪಾಲಿಕೆಗೆ ಮಾಹಿತಿ ನೀಡಬೇಕು. ಆ ಮೂಲಕ ಅಲ್ಲಿನ ಹಸಿ ತ್ಯಾಜ್ಯಗಳನ್ನು ಸಂಗ್ರಹಿಸಲು ಸುಲಭವಾಗಲಿದೆ ಎಂದು ಹೇಳಿದರು.

ಮನಪಾ ನೈರ್ಮಲೀಕರಣ ಮತ್ತು ಘನತ್ಯಾಜ್ಯ ವಸ್ತುಗಳ ಬೈಲಾ 2018ರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಎಸೆದ್ದಲ್ಲಿ 100 ರೂ. ನಿಂದ 25, 000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಬೀದಿ ಬದಿ ವ್ಯಾಪಾರಸ್ಥರು ಡಸ್ಟ್‌ಬಿನ್‌ಗಳನ್ನು ಅಳವಡಿಸಿ ಕಸ ವಿಂಗಡಿಸಿ ನೀಡಬೇಕು. ನಿಷೇಧಿತ ಪ್ಲಾಸ್ಟಿಕ್‌ ಮಾರಾಟ, ಬಳಕೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಪ್ಲಾಸ್ಟಿಕ್‌ ಬ್ಯಾಗ್‌, ಚಮಚ, ಗ್ಲಾಸ್‌ಗಳ ಬಳಕೆ ಮಾಡಬಾರದು. ನಿಮ್ಮ ವ್ಯಾಪ್ತಿಯಲ್ಲಿ ಕ್ರಮ ಜರಗಿಸದೆ ಇದ್ದಲ್ಲಿ ದಾಳಿ, ದಂಡ ಮಾಡಲಾಗುತ್ತದೆ. ಮತ್ತೂ ಮುಂದುವರಿದರೆ ಪರವಾನಿಗೆ ರದ್ದು ಮಾಡುವ ಬಗ್ಗೆಯೂ ಪಾಲಿಕೆ ಚಿಂತನೆ ನಡೆಸಿದೆ ಎಂದು ಅವರು ತಿಳಿಸಿದರು.

ನಗರದ ಎಲ್ಲ ಕ್ಯಾಟರಿಂಗ್‌ನವರಿಗೆ ಒಂದು ಸಾಮಾನ್ಯ ಸ್ಥಳವನ್ನು ಗುರುತಿಸಿ ಅಲ್ಲಿಂದ ಎಲ್ಲರ ತ್ಯಾಜ್ಯಗಳನ್ನು ಸಂಗ್ರಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದರು.

ಮದುವೆ ಹಾಗೂ ಇತರ ಸಮಾರಂಭಗಳಲ್ಲಿ ಹಸಿ, ಒಣ ಕಸ ಪ್ರತ್ಯೇಕಿಸಲು ಬೇರೆ ಬೇರೆ ಡಸ್ಟ್‌ ಬಿನ್‌ಗಳನ್ನು ಇಡಲು ಸಭಾಂಗಣದವರಿಗೆ ಸೂಚನೆ ನೀಡಬೇಕು ಎಂದು ಕ್ಯಾಟರಿಂಗ್‌ ಮಾಲಕರ ಸಂಘದ ಅಧ್ಯಕ್ಷ ಸತೀಶ್‌ ಅವರು ಸಭೆಯಲ್ಲಿ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಭಾಂಗಣವೊಂದರ ಮ್ಯಾನೇಜರ್‌ ನಮ್ಮ ಕಸ ನಮ್ಮ ಹೊಣೆ ಅದಕ್ಕೆ ಸಭಾಂಗಣ ಜವಾಬ್ದಾರರಲ್ಲ ಎಂದು ಹೇಳಿದರು. ಈ ಬಗ್ಗೆ ಕೆಲವು ಕಾಲ ಚರ್ಚೆ ನಡೆಯಿತು.

ಪಾಲಿಕೆಯ ಆರೋಗ್ಯಾಧಿಕಾರಿ ಡಾ| ಮಂಜಯ್ಯ ಶೆಟ್ಟಿ, ಪರಿಸರ ಅಧಿಕಾರಿ ರಾಜಶೇಖರ್‌ ಪುರಾಣಿಕ್‌ ಉಪಸ್ಥಿತರಿದ್ದರು.

ಮಲೇರಿಯಾ
ನಿಯಂತ್ರಣಕ್ಕೆ ಕೈ ಜೋಡಿಸಿ
ಮಲೇರಿಯಾ ನಿಯಂತ್ರಣಾಧಿಕಾರಿ ಡಾ| ಅರುಣ್‌ ಕುಮಾರ್‌ ಮಾತನಾಡಿ, ಹೊಟೇಲ್, ಕಟ್ಟಡಗಳು ತಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ತಮ್ಮ ನೌಕರರು ಹಾಗೂ ಗ್ರಾಹಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಸೊಳ್ಳೆಗಳು ಉತ್ಪತ್ತಿಯಾಗುವ ಜಾಗಗಳನ್ನು ನಾಶ ಮಾಡುವುದರ ಜತೆಗೆ ಎಲ್ಲೂ ಮಳೆ ನೀರು ನಿಲ್ಲಲು ಅವಕಾಶ ನೀಡಬಾರದು. ನೌಕರರ ಆರೋಗ್ಯವನ್ನು ಆಗಾಗ್ಗೆ ತಪಾಸಣೆ ಮಾಡಿಸುತ್ತಿರಬೇಕು. ನೀರು ಸಂಗ್ರಹಿಸುವ ಟ್ಯಾಂಕ್‌ಗಳ ಸ್ವಚ್ಛತೆ ಮಾಡಬೇಕು. ಆ ಮೂಲಕ ಮಲೇರಿಯಾ ಹರಡದಂತೆ ನಿಗಾ ವಹಿಸಬೇಕು ಎಂದು ತಿಳಿಸಿದರು.

ಮಲೇರಿಯಾ ನಿಯಂತ್ರಣಕ್ಕೆ ಕೈ ಜೋಡಿಸಿ

ಸ್ವಚ್ಛತಾ ಯೋಧರನ್ನು
ಅಧೀಕೃತಗೊಳಿಸಿ

ರಾಮಕೃಷ್ಣ ಮಠ ನಗರದ ಎಲ್ಲೆಡೆ ಕಸ ಬಿಸಾಡುವವರ ವಿರುದ್ಧ ಕಾರ್ಯಾಚರಣೆಗೆ ಸ್ವಚ್ಛತಾ ಯೋಧರನ್ನು ನಿಯೋಜಿಸಿದೆ. ಇದನ್ನು ಪಾಲಿಕೆ ಅಧೀಕೃತಗೊಳಿಸಬಹುದು. ಅವರಿಗೆ ಸೂಕ್ತ ತರಬೇತಿ ನೀಡಿ ಅವರ ಮೂಲಕ ಜಾಗೃತಿ ಮೂಡಿಸುವ ಹಾಗೂ ದಂಡ ವಸೂಲು ಮಾಡುವ ಕೆಲಸ ಮಾಡಬಹುದು. ಪ್ಲಾಸ್ಟಿಕ್‌ ಬಳಕೆ ನಿಷೇಧ ದಂಡ, ದಾಳಿ ಬದಲಾಗಿ ಪ್ಲಾಸ್ಟಿಕ್‌ ತಯಾರಿಕೆ ಕಂಪೆನಿಗಳ ಪರವಾನಿಗೆ ರದ್ದಿಗೆ ಸಂಬಂಧ ಇಲಾಖೆಗಳು ಗಮನ ಹರಿಸಬೇಕು.
– ಏಕಾಗಮ್ಯಾನಂದ ಸ್ವಾಮೀಜಿ, ರಾಮಕೃಷ್ಣ ಮಠ

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.