Cyber Crime ತಡೆಗೆ ಬಲಿಷ್ಠ ಕಾನೂನು: ಗೃಹ ಸಚಿವ ಡಾ| ಪರಮೇಶ್ವರ್
Team Udayavani, Oct 30, 2023, 12:11 AM IST
ಮಂಗಳೂರು: ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ನಿಯಂತ್ರಿಸುವುದಕ್ಕಾಗಿ ಬಲಿಷ್ಠ ಕಾನೂ
ನನ್ನು ಶೀಘ್ರ ಜಾರಿಗೆ ತರಲಾಗುವುದು ಎಂದು ರಾಜ್ಯದ ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದ್ದಾರೆ.
ರವಿವಾರ ಮಂಗಳೂರು ಪೊಲೀಸ್ ಕಮಿಷನರೆಟ್‌ನ ಬಜಪೆ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ನಗರ ಸಶಸ್ತ್ರ ಪೊಲೀಸ್ ಪಡೆಯ ಸಿಎಆರ್ ಕಚೇರಿಯ ನೂತನ ಕಟ್ಟಡ ಉದ್ಘಾಟಿಸಿದ ಅನಂತರ ಅವರು ಮಾತನಾಡಿದರು.
ಬ್ಯಾಂಕ್ ಖಾತೆಗಳಿಂದ ಹಣ ದೋಚುವುದು, ಹ್ಯಾಕಿಂಗ್ ಮಾಡಿ ವಂಚಿಸುವುದು, ಸುಳ್ಳು ಸುದ್ದಿ, ವೈಯಕ್ತಿಕ ಅವಹೇಳನದ ಪೋಸ್ಟ್ ಮಾಡುವುದು ಮೊದಲಾದ ಸೈಬರ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇಂತಹ ಅಪರಾಧಗಳನ್ನು ತಡೆಯುವುದಕ್ಕಾಗಿ ಬಲಿಷ್ಠವಾದ ಕಾನೂನನ್ನು ಅನುಷ್ಠಾನಗೊಳಿಸಲಾಗುವುದು. ಅಗತ್ಯವಿರುವ ಕಾನೂನುತಿದ್ದುಪಡಿ ಮಾಡಲಾಗುವುದು. ಇದಕ್ಕಾಗಿ ಮಾಹಿತಿ ತಂತ್ರಜ್ಞಾನ ಮತ್ತು ಗೃಹ ಇಲಾಖೆಯನ್ನೊಳಗೊಂಡ ಸಮಿತಿ ರಚಿಸಲಾಗಿದೆ ಎಂದು ಗೃಹಸಚಿವರು ತಿಳಿಸಿದರು.
ಕಮಾಂಡ್ ಸೆಂಟರ್
ರಾಜ್ಯದ ಪ್ರತಿ ಪೊಲೀಸ್ ಠಾಣೆಗಳಲ್ಲಿ ನಡೆಯುವ ಚಟುವಟಿಕೆಗಳನ್ನು ಗಮನಿಸುವುದಕ್ಕಾಗಿ ಬೆಂಗಳೂರಿನಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ಎಂಬಂತೆ ಕಮಾಂಡ್ ಸೆಂಟರ್ 3-4 ತಿಂಗಳಲ್ಲಿ ಆರಂಭಗೊಳ್ಳಲಿದೆ. ಅತ್ಯಾ ಧುನಿಕ ಕೆಮರಾಗಳ ಮೂಲಕ ಠಾಣೆಗಳ ಮಾಹಿತಿಯನ್ನು ನೇರವಾಗಿ ಪಡೆದುಕೊಳ್ಳಲಾಗುವುದು ಎಂದರು.
ಆಧುನೀಕರಣಕ್ಕೆ ಆದ್ಯತೆ : ಪೊಲೀಸ್
ವ್ಯವಸ್ಥೆ ಯನ್ನು ಆಧುನೀಕರಣ ಗೊಳಿಸುವುದು ಸರಕಾರದ ಉದ್ದೇಶವಾಗಿದೆ. ತಂತ್ರಜ್ಞಾನ, ಮೂಲ ಸೌಕರ್ಯಗಳ ಅಳವಡಿಕೆಯ ಜತೆಗೆ ಸಿಬಂದಿಗೂ ಕಂಪ್ಯೂಟರ್ ಶಿಕ್ಷಣ, ಸೈಬರ್, ಆಯುಧ ಬಳಕೆಯಲ್ಲಿಯೂ ಆಧುನಿಕ ತರಬೇತಿ ನೀಡಲಾಗುತ್ತಿದೆ. “ನೂರು ಪೊಲೀಸ್ ಠಾಣೆಗಳು’ ಯೋಜನೆಯಡಿ ಠಾಣೆ ಗಳನ್ನು ಆಧುನಿಕವಾಗಿ ನಿರ್ಮಿಸಲಾಗು ತ್ತಿದೆ. ಪೊಲೀಸ್ ಇಲಾಖೆಯಲ್ಲಿಯೂ ಅನೇಕ ಮಂದಿ ಬಿಇ, ಎಂಬಿಎ ಸೇರಿದಂತೆ ಪದವಿ, ಸ್ನಾತಕೋತ್ತರ ಪದವಿ, ಇತರ ವೃತ್ತಿಪರ ಶಿಕ್ಷಣ ಪಡೆದವರು ಸೇರ್ಪಡೆಯಾಗುತ್ತಿದ್ದು ಆಧುನಿಕ ಪೊಲೀಸ್ ವ್ಯವಸ್ಥೆಗೆ ಸಹಾಯಕವಾಗಿದೆ ಎಂದರು.
ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಸರಕಾರದ ಅಭಿಪ್ರಾಯ ವನ್ನು ನ್ಯಾಯಾಲಯಕ್ಕೆ ತಿಳಿಸಿದ್ದೇವೆ. ನ್ಯಾಯಾಲಯದ ತೀರ್ಪು ಬಂದ ಕೂಡಲೇ ಪಿಎಸ್‌ಐಗಳ ನೇಮಕಾತಿ ನಡೆಸಲಾಗುವುದು ಎಂದರು.
ನೈತಿಕ ಪೊಲೀಸ್‌ಗಿರಿ ನಿಯಂತ್ರಣ
ಮಂಗಳೂರಿನಲ್ಲಿ ಪ್ರತ್ಯೇಕ ಪೊಲೀಸ್ ವಿಂಗ್ ರಚಿಸಿದ ಅನಂತರ ನೈತಿಕ ಪೊಲೀಸ್‌ಗಿರಿ ಘಟನೆಗಳು ನಿಯಂತ್ರಣಕ್ಕೆ ಬಂದಿವೆ. ಯಾವುದೇ ಧರ್ಮದವರು ನೈತಿಕ ಪೊಲೀಸ್‌ಗಿರಿ ನಡೆಸಿದರೆ ಅಥವಾ ಅದಕ್ಕೆ ಉತ್ತೇಜನ ನೀಡಿದರೆ ಮುಲಾಜಿಲ್ಲದೆ ಕಠಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹಸಚಿವರು ತಿಳಿಸಿದರು.
ಕಾವೇರಿ ತಂತ್ರಾಂಶವೂ ಹ್ಯಾಕ್
ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಬಯೋಮೆಟ್ರಿಕ್, ಆಧಾರ್ ಮಾಹಿತಿ ನೀಡಿದ ಕೆಲವರ ಬ್ಯಾಂಕ್ ಖಾತೆಯಿಂದ ಹಣ ದೋಚಿರುವ ಪ್ರಕರಣದ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಹಣಕಾಸಿನ ವ್ಯವಹಾರ ಇರುವಲ್ಲಿ ಸೈಬರ್ ವಂಚನೆ ನಡೆಯುತ್ತಿದೆ. ಕಾವೇರಿ ತಂತ್ರಾಂಶವನ್ನು ಕೂಡ ಹ್ಯಾಕ್ ಮಾಡಿರುವುದು ಕಂಡುಬಂದಿದೆ ಎಂದು ತಿಳಿಸಿದರು.
ಎಲ್ಲ ಜಿಲ್ಲೆಗಳಲ್ಲಿ ಎಚ್ಚರಿಕೆಗೆ ಕ್ರಮ
ಮಂಗಳೂರು/ಉಡುಪಿ: ಕೇರಳದಲ್ಲಿ ಬಾಂಬ್ ಸ್ಫೋಟ ಹಿನ್ನೆಲೆಯಲ್ಲಿ ಕರಾವಳಿ ಸಹಿತ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸೂಕ್ಷ್ಮ ಗಮನ ಇರಿಸಿದ್ದೇವೆ. ಮಾತ್ರವಲ್ಲದೆ ಎಚ್ಚರಿಕೆಯಿಂದ ಇರುವಂತೆ ಸೂಚಿಸ ಲಾಗಿದೆ. ಈ ಬಗ್ಗೆ ಎಲ್ಲ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಕರಾವಳಿ ಭಾಗ ಮತ್ತು ದ.ಕ. ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸ ಲಾಗಿದೆ. ಗುಪ್ತಚರ ಇಲಾಖೆ ತೀವ್ರ ನಿಗಾ ಇರಿಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಇಂತಹ ಘಟನೆ ನಡೆಯಲು ಅವಕಾಶ ನೀಡುವುದಿಲ್ಲ. ಅನುಮಾನ ಬಂದರೆ ಕಾನೂನು ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದರು.
ಜಂಟಿ ತನಿಖೆ
ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟ ಅವ್ಯವಹಾರದ ಬಗ್ಗೆ ಸಹಕಾರಿ ಮತ್ತು ಸಕ್ಕರೆ ಸಚಿವರು ತೀರ್ಮಾನಿಸಿ ಜಂಟಿಯಾಗಿ ತನಿಖೆ ಮಾಡಿಸಲಿದ್ದಾರೆ. ಪೊಲೀಸ್ ತನಿಖೆಗೆ ಸೂಚನೆ ಬಂದರೆ ನಾವು ಮಾಡುತ್ತೇವೆ. ಸರಕಾರ ಪೊಲೀಸ್ ಇಲಾಖೆಗೆ ತನಿಖೆಗೆ ಸೂಚಿಸಿದರೆ ಕ್ರಮ ಜರಗಿಸುತ್ತೇವೆ. ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲೂ ಇದೇ ಅನ್ವಯವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.