ವಿದ್ಯಾರ್ಥಿ ಸಿರಿ, ಕೃಷಿಸಿರಿ ಇಂದು ಉದ್ಘಾಟನೆ

Team Udayavani, Nov 30, 2017, 9:22 AM IST

30-8.jpg

ಮೂಡಬಿದಿರೆ: ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯಲಿರುವ 14ನೇ ವರ್ಷದ ಆಳ್ವಾಸ್‌ ನುಡಿಸಿರಿ-ನಾಡು ನುಡಿ ಸಂಸ್ಕೃತಿಯ ಹಬ್ಬಕ್ಕೆ ವಿದ್ಯಾಗಿರಿ ಸಜ್ಜಾಗಿದೆ. ರತ್ನಾಕರವರ್ಣಿ ವೇದಿಕೆಯಲ್ಲಿ ಗುರುವಾರ ವಿದ್ಯಾರ್ಥಿ ಸಿರಿ-ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ. ಉಜಿರೆ ಎಸ್‌ಡಿಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅರ್ಜುನ್‌ ಶೆಣೈ ಅಧ್ಯಕ್ಷತೆಯಲ್ಲಿ ನಡೆಯುವ ಒಂದು ದಿನದ “ವಿದ್ಯಾರ್ಥಿ ಸಿರಿ’ ಸಮ್ಮೇಳನವನ್ನು ರಂಗಕರ್ಮಿ ಮಂಡ್ಯ ರಮೇಶ್‌ ಉದ್ಘಾಟಿಸಲಿದ್ದಾರೆ.

ಇತ್ತೀಚೆಗೆ ಅಗಲಿರುವ ಮಕ್ಕಳ ಸಾಹಿತಿ ಪಳಕಳ ಸೀತಾರಾಮ ಭಟ್ಟರನ್ನು ಕಡಂದಲೆಯ ಪ್ರದ್ಯುಮ್ನ ಮೂರ್ತಿ ಸ್ಮರಿಸಿಕೊಳ್ಳುವುದೂ ಸೇರಿದಂತೆ ವಿವಿಧ ಶಾಲೆ, ಪ್ರೌಢಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ, ಕಾಸರಗೋಡು ಚಿನ್ಮಯ ವಿದ್ಯಾಲಯದ ಸನ್ನಿಧಿ ಟಿ. ರೈ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ಉಡುಪಿ ಒಳಕಾಡು ಪ್ರೌಢಶಾಲೆಯ ನಚಿಕೇತ ನಾಯಕ್‌ ಅವರಿಂದ ಸಮಾರೋಪ ಭಾಷಣ, ಧಾಂ ಧೂಂ ಸುಂಟರಗಾಳಿ ನಾಟಕ ಪ್ರದರ್ಶನ, ಪುಟ್ಟಣ್ಣ ಕಣಗಾಲ್‌ ವೇದಿಕೆಯಲ್ಲಿ ಹಳೆಯ ಸದಭಿರುಚಿಯ ಕನ್ನಡ ಚಲನಚಿತ್ರಗಳ ಪ್ರದರ್ಶನವಿದೆ. ವಿಜ್ಞಾನ ಸಿರಿ -ವಿಜ್ಞಾನ ಮಾದರಿ ತಯಾರಿ, ಪ್ರದರ್ಶನ ಈ ಬಾರಿಯ ವಿಶೇಷ. 300ರಷ್ಟು ವಿದ್ಯಾರ್ಥಿಗಳು ವೇದಿಕೆ ಏರಲಿದ್ದಾರೆ.

ಕೃಷಿ ಸಿರಿ ಉದ್ಘಾಟನೆಗೆ ದೇವೇಗೌಡ
ಮುಂಡ್ರುದೆಗುತ್ತು ರಾಮಮೋಹನ ರೈ ಆವರಣದಲ್ಲಿ ಗುರುವಾರದಿಂದ ರವಿವಾರದ ವರೆಗೆ ನಡೆಯಲಿರುವ “ಆಳ್ವಾಸ್‌ ಕೃಷಿ ಸಿರಿ’ ಯನ್ನು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಉದ್ಘಾಟಿಸುವರು. ಕೃಷಿ ಬದುಕಿನ ಅನಾವರಣ ಕೃಷಿ ಸಿರಿಯಲ್ಲಿದೆ. ಗೇರುಕಟ್ಟೆ ಗಂಗಯ್ಯ ಶೆಟ್ಟಿ ವೇದಿಕೆ ಸೇರಿದಂತೆ ಹಲವು ವೇದಿಕೆಗಳಲ್ಲಿ  ಮುಂಜಾನೆಯಿಂದ ತಡ ರಾತ್ರಿ ವರೆಗೆ ನಿರಂತರವಾಗಿ, ಇನ್ನೂ ಹಲವು ವೇದಿಕೆಗಳಲ್ಲಿ ಸಂಜೆಯಿಂದ ಸಾಂಸ್ಕೃತಿಕ ಕಲಾಪಗಳು ನಡೆಯಲಿವೆ.

ಊಟೋಪಚಾರ, ವಾಸ್ತವ್ಯ
ಈ ಬಾರಿ ಎರಡು ಕಡೆ-ನೇತ್ರಾವತಿ ಹಾಸ್ಟೆಲ್‌ ಆವರಣ ಅಲ್ಲದೆ ಕೃಷಿಸಿರಿ ಆವರಣದಲ್ಲಿ- ಊಟೋಪಚಾರ ವ್ಯವಸ್ಥೆ ಆಗಿದೆ. ಒಂದು ಹೊತ್ತಿಗೆ ಮೊದಲ ಹಂತದಲ್ಲಿ 35,000 ಮಂದಿಗೆ ಅಡುಗೆ ವ್ಯವಸ್ಥೆ ಆಗಲಿದ್ದು ಮುಂದೆ ಜನರ ಸಂದಣಿ ನೋಡಿಕೊಂಡು ತಯಾರು ಮಾಡಲಾಗುತ್ತದೆ. ಬೆಳಗ್ಗೆ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ಭೋಜನ ಏರ್ಪಡಿಸಲಾಗಿದೆ. 35,000ಕ್ಕೂ ಅಧಿಕ ಮಂದಿ ನುಡಿಸಿರಿಗೆ ಪ್ರತಿನಿಧಿಗಳಾಗಿ ನೋಂದಾಯಿಸಿದ್ದಾರೆ. ಎಷ್ಟು ಜನ ಬಂದರೂ ವಾಸ್ತವ್ಯಕ್ಕೆ ಯಾವುದೇ ಕೊರತೆ ಬಾರದಂತೆ ನೋಡಿಕೊಳ್ಳಲಾಗುವುದು ಎಂದು ಸಂಘಟಕ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ತಿಳಿಸಿದ್ದಾರೆ.

ಉದ್ಯೋಗ ಸಿರಿ
ಕನ್ನಡ ಮಾಧ್ಯಮದಲ್ಲಿ ಎಸೆಸೆಲ್ಸಿವರೆಗೆ ಓದಿದ ಮತ್ತು ವಿವಿಧ ವಿಭಾಗಗಳಲ್ಲಿ ಶಿಕ್ಷಣ ಪಡೆ ದವರಿಗಾಗಿ ಡಿ. 3ರಂದು ಆಳ್ವಾಸ್‌ ಉದ್ಯೋಗ ಸಿರಿ ಎಂಬ ಉದ್ಯೋಗ ಮೇಳ ಏರ್ಪಡಿಸಿರುವುದು ಈ ಬಾರಿಯ ವಿಶೇಷಗಳಲ್ಲಿ ಒಂದು. ಆಸಕ್ತರು ನೇರವಾಗಿಯೂ (5 ಭಾವಚಿತ್ರ, 5 ಪ್ರತಿ ಸ್ವ ವಿವರ, ಅಂಕಪಟ್ಟಿಗಳೊಂದಿಗೆ) ಪಾಲ್ಗೊಳ್ಳಬಹುದು. ಯಾವುದೇ ಶುಲ್ಕವಿಲ್ಲ. ನುಡಿಸಿರಿ, ಉದ್ಯೋಗಸಿರಿ ನೋಂದಣಿಗೆ: www.alvas.nudisiri.com

ಆಳ್ವಾಸ್‌ ಗೂಡುದೀಪ ಸಿರಿ: ಗೂಡುದೀಪ ಸ್ಪರ್ಧೆ
ಆಳ್ವಾಸ್‌ ನುಡಿಸಿರಿ ಸಂದರ್ಭ “ಆಳ್ವಾಸ್‌ ಗೂಡುದೀಪ ಸಿರಿ’ -ಗೂಡುದೀಪ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಆಯೋ ಜಿಸ ಲಾಗಿದೆ. ಡಿ. 1ರಿಂದ 3ರ ವರೆಗೆ ಗೂಡು ದೀಪ ಪ್ರದರ್ಶಿಸ ಲಾಗುವುದು. ಡಿ. 3ರಂದು ಸಾಯಂಕಾಲ ಬಹು ಮಾನ ವಿತರಿಸ ಲಾಗು ವುದು ಎಂದು ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ತಿಳಿಸಿದ್ದಾರೆ.

ಟಾಪ್ ನ್ಯೂಸ್

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.