ರಸ್ತೆ ಅಭಿವೃದ್ಧಿಗಾಗಿ ಪ್ರಧಾನಿಗೆ ವಿದ್ಯಾರ್ಥಿನಿ ಪತ್ರ
Team Udayavani, Aug 5, 2017, 8:00 AM IST
ಪ್ರಧಾನಿ ಕಚೇರಿಯಿಂದ ಮುಖ್ಯಕಾರ್ಯದರ್ಶಿಯವರಿಗೆ ಸೂಚನೆ
ಬೆಳ್ತಂಗಡಿ: ಮುಂಡಾಜೆ – ಸತ್ಯನಪಲ್ಕೆ ರಸ್ತೆಯನ್ನು ಅಭಿವೃದ್ಧಿಗೊಳಿಸಿ ಸಂಚಾರಕ್ಕೆ ಯೋಗ್ಯ ರಸ್ತೆಯನ್ನಾಗಿಸಬೇಕೆಂಬ ನಿಟ್ಟಿನಲ್ಲಿ ಮುಂಡಾಜೆಯ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ, ಸತ್ಯನಪಲ್ಕೆ ಲಕ್ಷ್ಮೀ ನಿವಾಸದ ಶ್ರುತಿಕಾ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಪ್ರಧಾನ ಮಂತ್ರಿಯವರ ಕಚೇರಿಯ ಅಧಿಕಾರಿ ರಾಜೀವ್ ರಂಜನ್ ಕುಶ್ವಹ್ ಅವರು ಉತ್ತರಿಸಿದ್ದು, ಪತ್ರದ ಉಲ್ಲೇಖದಂತೆ ರಸ್ತೆ ಅಭಿವೃದ್ಧಿ ಬಗ್ಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವ ರಿಗೆ ಪ್ರಧಾನಿ ಕಾರ್ಯಾಲಯದಿಂದ ಪತ್ರ ಬರೆದಿದ್ದು ಇದನ್ನು ಪರಿಶೀಲನೆ ನಡೆಸಿ ಕೈಗೊಳ್ಳುವ ಕ್ರಮವನ್ನು ಮನವಿದಾರರಿಗೆ ಅಂತೆಯೇ ವಿಭಾಗ ಅಧಿಕಾರಿಗಳ ಕಚೇರಿಗೆ ತಿಳಿಸುವಂತೆ ಸೂಚಿಸಲಾಗಿದೆ.
ರಸ್ತೆಯು 8 ಕಿ.ಮೀ. ಇದ್ದು ಈ ಹದಗೆಟ್ಟಿರುವ ರಸ್ತೆಯಲ್ಲಿ ಆಟೋರಿಕ್ಷಾ ಕೂಡಾ ಬರುವುದಿಲ್ಲ. ಬಾಡಿಗೆ ಮಾಡಿ ಹೋಗಬೇಕಾದರೆ 300 ರಿಂದ 350 ರೂ. ವೆಚ್ಚ ಭರಿಸಬೇಕಾಗುತ್ತದೆ. ಈ ಪರಿಸರದಿಂದ ಸುಮಾರು 150 ವಿದ್ಯಾರ್ಥಿಗಳು ವಿವಿಧ ಶಾಲಾ ಕಾಲೇಜುಗಳಿಗೆ ವಿದ್ಯಾಭ್ಯಾಸಕ್ಕೆ ತೆರಳುತ್ತಾರೆ ಎಂದು ವಿದ್ಯಾರ್ಥಿನಿ ಪ್ರಧಾನಿಗೆ ಕಳುಹಿಸಿದ ಲಿಖೀತ ಪತ್ರದಲ್ಲಿ ಉಲ್ಲೇಖೀಸಿದ್ದಾರೆ.
ಹಲವು ಮನವಿ, ಪ್ರತಿಭಟನೆ
ಮುಂಡಾಜೆ – ಕಲ್ಮಂಜ – ಧರ್ಮಸ್ಥಳ ಗ್ರಾಮಗಳನ್ನು ಸಂಪರ್ಕಿಸುವ ಈ ಸಂಪರ್ಕ ರಸ್ತೆ ತೀವ್ರ ಹದಗೆಟ್ಟಿರುವ ಬಗ್ಗೆ ಸಂಬಂಧಪಟ್ಟ ಜನಪ್ರತಿನಿಧಿಗಳಿಗೆ, ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆಯೂ ನಡೆದಿತ್ತು. ರಸ್ತೆಯ ದುಸ್ಥಿತಿಯ ಬಗ್ಗೆ ಗ್ರಾಮಸಭೆಯಲ್ಲಿ ಹಲವು ವರ್ಷಗಳಿಂದ ಪ್ರಸ್ತಾವಿಸಲಾಗಿತ್ತು.
ವಾಹನ ಸಂಚಾರಕ್ಕೆ ಕಷ್ಟ
ಸ್ವಂತ ವಾಹನ ಇದ್ದವರಿಗೆ ವಾಹನ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ. ರಸ್ತೆಯಲ್ಲಿ ವಾಹನ ಓಡಿಸುವಂತಿಲ್ಲ. ರಸ್ತೆ ಅಷ್ಟು ಹದಗೆಟ್ಟಿದೆ. ಮಕ್ಕಳನ್ನು ದ್ವಿಚಕ್ರದಲ್ಲಿ ಕುಳ್ಳಿರಿಸಿ ಶಾಲೆಗೆ ಬಿಡುವಂತಿಲ್ಲ. ರಸ್ತೆಯೇ ನಾಪತ್ತೆಯಾಗಿದ್ದು ಕೆಸರಿನಿಂದ ನಡೆದಾಡಲು ಸಾಧ್ಯವಿಲ್ಲ. ಈ ರಸ್ತೆಯಲ್ಲಿ ವಾಹನಗಳು ಸರ್ಕಸ್ ಮಾಡಿಕೊಂಡೇ ಸಂಚರಿಸುತ್ತವೆ. ಹೊಂಡ ಗುಂಡಿಗಳಿಂದಲೇ ತುಂಬಿರುವ ರಸ್ತೆಯನ್ನು ಸಾರ್ವಜನಿಕರು ಶಪಿಸುವಂತಾಗಿದೆ. ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಸೇರಲು ಕೂಡ ಸಾಧ್ಯವಾಗುತ್ತಿಲ್ಲ. ಈ ರಸ್ತೆಯ ದುರವಸ್ಥೆ ಕುರಿತು ‘ಉದಯವಾಣಿ’ ಹಲವು ಬಾರಿ ವರದಿ ಮಾಡಿ ಇಲಾಖಾಧಿಕಾರಿಗಳ, ಜನಪ್ರತಿನಿಧಿಗಳ ಗಮನ ಸೆಳೆದಿತ್ತು.
ರಸ್ತೆಗೆ ಟೆಂಡರ್ ಪ್ರಕ್ರಿಯೆ ಪೂರ್ಣ
ಮುಂಡಾಜೆ- ಕಲ್ಮಂಜ- ಧರ್ಮಸ್ಥಳ ರಸ್ತೆಗೆ ಕೇಂದ್ರ ರಸ್ತೆ ನಿಧಿ (ಸಿಆರ್‌ಎಫ್)ಯಿಂದ 7 ಕೋಟಿ ರೂ. ಮಂಜೂರುಗೊಂಡಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಮಳೆ ಕಡಿಮೆಯಾದ ಕೂಡಲೇ ಕಾಮಗಾರಿ ಅನುಷ್ಠಾನಕ್ಕೆ ಬರಲಿದೆ.
– ಕೆ. ವಸಂತ ಬಂಗೇರ, ಶಾಸಕರು, ಬೆಳ್ತಂಗಡಿ
– ಗುರು ಮುಂಡಾಜೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.