ವಿದ್ಯಾರ್ಥಿನಿಯರ ಅಪಹರಣ ; ಆರೋಪಿಯೊಬ್ಬನ ಬಂಧನ
Team Udayavani, Feb 21, 2017, 11:46 AM IST
ಮಂಗಳೂರು: ನಗರದ ಕದ್ರಿ ವ್ಯಾಪ್ತಿಯಿಂದ ಫೆ. 11ರಂದು 17ರ ಹರೆಯದ ಇಬ್ಬರು ವಿದ್ಯಾರ್ಥಿನಿಯರು ಕಾಣೆಯಾಗಿದ್ದ ಪ್ರಕರಣವನ್ನು ಅಪಹರಣ ಪ್ರಕರಣವಾಗಿ ದಾಖಲಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿ ಕದ್ರಿ ಪೊಲೀಸರು ಪುತ್ತೂರಿನ ಶಂಕರ್ ಭಟ್ (33) ಅವರನ್ನು ಬಂಧಿಸಿದ್ದಾರೆ.
ಟ್ಯುಟೋರಿಯಲ್ ಸಂಸ್ಥೆಯೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿನಿಯರು ದಿಢೀರ್ ಕಾಣೆಯಾಗಿದ್ದ ಬಗ್ಗೆ ಕದ್ರಿ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಅಪಹರಣಕ್ಕೊಳಗಾಗಿದ್ದ ವಿದ್ಯಾರ್ಥಿನಿಯರಿಬ್ಬರು ಮಡಿಕೇರಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಕದ್ರಿ ಪೊಲೀಸರು ಮಂಗಳೂರಿಗೆ ಕರೆ ತಂದು ಹೆತ್ತವರಿಗೆ ಒಪ್ಪಿಸಿದ್ದರು.
ಮನೆಯಲ್ಲಿ ತಮಗೆ ನಿಂದಿಸಿದ ಕಾರಣ ತಾವು ಹೋಗಿದ್ದೆವು. ಮಡಿಕೇರಿ ಯಲ್ಲಿ ಕೆಲಸ ಹುಡುಕಿಕೊಂಡು ಫ್ಯಾನ್ಸಿ ಅಂಗಡಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದೆವು ಎಂದು ವಿದ್ಯಾರ್ಥಿನಿಯರು ಹೇಳಿಕೆ ನೀಡಿದ್ದರು.
ಆದರೆ ಈ ವಿದ್ಯಾರ್ಥಿನಿಯರು ಅಪ್ರಾಪ್ತ ವಯಸ್ಕರಾಗಿದ್ದುದರಿಂದ ಅವರನ್ನು ಅಂಗಡಿಯಲ್ಲಿ ಕೆಲಸಕ್ಕಿಟ್ಟುಕೊಂಡ ಆರೋಪದ ಮೇಲೆ ಶಂಕರ ಭಟ್ ಅವರನ್ನು ಪೋಕೊÕ ಕಾಯ್ದೆಯಡಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಸ್ತುತ, ಈ ಪ್ರಕರಣವನ್ನು ಮಹಿಳಾ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಇನ್ನಷ್ಟು ಆರೋಪಿಗಳು ಬಂಧನಕ್ಕೊಳಗಾಗುವ ಸಾಧ್ಯತೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.