‘ವಿದ್ಯಾರ್ಥಿಗಳು ಕನಸು ಸಾಕಾರಗೊಳಿಸಿ’
Team Udayavani, Jan 4, 2018, 1:40 PM IST
ಬಂಟ್ವಾಳ: ಇಂದಿನ ಪ್ರಜೆಗಳೇ ಮುಂದಿನ ಜನಾಂಗ. ವಿದ್ಯಾರ್ಥಿಗಳು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಲು ಕನಸನ್ನು ಕಾಣಬೇಕು ಹಾಗೂ ಆ ಕನಸನ್ನು ಸಾಕಾರಗೊಳಿಸುವಲ್ಲಿ ಸತತ ಪ್ರಯತ್ನ ಪಡಬೇಕು ಎಂದು
ಎಸ್ಸಿಡಿಸಿಸಿ ಬ್ಯಾಂಕ್ ವಿಶ್ರಾಂತ ಮ್ಯಾನೇಜಿಂಗ್ ಡೈರೆಕ್ಟರ್ ನಾರಾಯಣ್ ಕಾಮತ್ ಹೇಳಿದರು.
ಅವರು ಜ. 3ರಂದು ಬಂಟ್ವಾಳದ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ಬಂಟ್ವಾಳ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ ‘ಸಿದ್ಧಾಂತ್- 2017’ ಇದರ 2ನೇ ಹಂತದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಇದನ್ನು ಆಯೋಜಿಸಿದ್ದು, ತಾಲೂಕಿನ 7 ಪ.ಪೂ. ಕಾಲೇಜಿನ 1,680 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು 2 ಹಂತಗಳಲ್ಲಿ ಆಯೋಜಿಸಲಾಗಿತ್ತು ಮೊದಲ ಹಂತವನ್ನು ಆಯಾ ಪ.ಪೂ. ಕಾಲೇಜಿನಲ್ಲಿ
ಆಯೋಜಿಸಿ, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಗೋಲ್ಡನ್ ಟಿಕೆಟ್ ಟು ಸಿದ್ಧಾಂತ್ ನೀಡಲಾಯಿತು. ಅಂತಿಮ
ಹಂತದಲ್ಲಿ 7 ಪ.ಪೂ. ಕಾಲೇಜಿನ 42 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಇಂತಹ ಮತ್ತಷ್ಟು ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಮೂಡಿಬರಲಿ ಎಂದು ಆಶಿಸಿದರು.
ಕಾರ್ಯಕ್ರಮದ ಸಂಯೋಜಕಿ ಅಖಿಲಾ ಪೈ ಮತ್ತು ವಿದ್ಯಾರ್ಥಿ ಸಂಯೋಜಕರು ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಯೋಜಕ ಶ್ರೀಕಾಂತ್ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ನಾಯಕಿ ಮಹಾಲಸಾ ಆರ್. ಬಿ. ನಾಯಕ್ ವಂದಿಸಿದರು. ಪೂಜಾಶ್ರೀ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.