ವಿದ್ಯಾರ್ಥಿಗಳಲ್ಲಿ ಸಮಾಜ ಸೇವಾ ಮನೋಭಾವ ಅಗತ್ಯ: ಪ್ರೊ| ಭೈರಪ್ಪ
Team Udayavani, Jul 3, 2017, 3:45 AM IST
ಮಂಗಳಗಂಗೋತ್ರಿ: ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ, ಶಿಸ್ತು, ಸಮಾಜಸೇವಾ ಮನೋಭಾವವನ್ನು ಬೆಳೆಸುವುದರೊಂದಿಗೆ ಉತ್ತಮ ವ್ಯಕ್ತಿತ್ವವನ್ನು ರೂಪಿಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ ಮಹತ್ವದ್ದಾಗಿದ್ದು, ಮಂಗಳೂರು ವಿವಿಯು ಸ್ನಾತಕೋತ್ತರ ವಿಭಾಗಗಳಲ್ಲಿ ಸಾಧಕ ರಾಷ್ಟ್ರೀಯ ಸೇವಾ ಯೋಜನೆ ಅಭ್ಯರ್ಥಿಗಳಿಗೆ ಒಂದು ಸೀಟನ್ನು ಮೀಸಲಿಟ್ಟಿದೆ ಎಂದು ಕುಲಪತಿ ಪ್ರೊ| ಕೆ.ಭೈರಪ್ಪ ಹೇಳಿದರು.
ಮಂಗಳೂರು ವಿಶ್ವವಿದ್ಯಾಲಯದ ಪುರುಷರ ವಸತಿಗೃಹದ ಸಭಾಂಗಣದಲ್ಲಿ ಶನಿವಾರ ವಿಶ್ವವಿದ್ಯಾಲಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನೆಯ ಆಯ್ಕೆ ಮತ್ತು ನಾಯಕತ್ವ ಶಿಬಿರವನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.
ಮಂಗಳೂರು ವಿವಿಯು ರಾಷ್ಟ್ರೀಯ ಸೇವಾ ಯೋಜನೆಗೆ ಉತ್ತಮ ಪ್ರೋತ್ಸಾಹ ನೀಡುತ್ತಿದ್ದು, ಕಳೆದ ಮೂರೂವರೆ ದಶಕಗಳ ಹಿಂದೆ ಪ್ರಾರಂಭಗೊಂಡ ಮಂಗಳೂರು ವಿವಿಯ ವಿವಿಧ ಕಾಲೇಜುಗಳಲ್ಲಿ 16,607 ಶಿಬಿರಾರ್ಥಿಗಳು ಎನ್ನೆಸ್ಸೆಸ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ನೂರು ವರ್ಷಗಳ ಇತಿಹಾಸವಿರುವ ಮೈಸೂರು ವಿವಿಯಲ್ಲಿ 15 ಸಾವಿರ ಶಿಬಿರಾರ್ಥಿಗಳಿದ್ದಾರೆ ಎಂದ ಅವರು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪುಗೊಳಿಸುವ ಇಂತಹ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಂಡು ಮುನ್ನಡೆಯಬೇಕು ಎಂದರು.
ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಸಮಾಜ ಸೇವಕ ಪ್ರಸಾದ್ ರೈ ಕಲ್ಲಿಮಾರ್, ಇಂದು ಆಧುನಿಕ ಜೀವನದಲ್ಲಿ ನಾವು ಉತ್ತಮ ಭವಿಷ್ಯವನ್ನು ಕಂಡುಕೊಳ್ಳುವುದಕ್ಕೆ ಎನ್ನೆಸ್ಸೆಸ್ ಪೂರಕವಾಗಿದೆ ಎಂದರು.
ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಪ್ರೊ| ವಿನಿತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಯೋಜನಾಧಿಕಾರಿ ಡಾ| ಉದಯ ಕುಮಾರ್ ವಂದಿಸಿದರು. ಯೋಜನಾಧಿಕಾರಿ ಪ್ರೊ| ಪ್ರಕಾಶ್ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.