Subrahmanya: ಕಾರಿನಿಂದ ಚಿನ್ನ ಕಳವು ಪ್ರಕರಣ : ಆರೋಪಿ ಬಂಧನ
Team Udayavani, Oct 11, 2023, 9:55 PM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಒಡೆದು ಚಿನ್ನ, ದಾಖಲೆಗಳ ಬ್ಯಾಗ್ ಕಳ್ಳತನ ಮಾಡಿದ್ದ ಆರೋಪಿಯನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.
ಪ್ರಭಾಕರ ಹೊನ್ನವಳ್ಳಿ ಬಂಧಿತ ಆರೋಪಿ. ಅ. 9ರಂದು ಕೇರಳದ ವ್ಯಕ್ತಿಯೊಬ್ಬರು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದು, ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಕಾರಿನ ಹಿಂಬದಿ ಗಾಜು ಒಡೆದು ಚಿನ್ನ, ದಾಖಲೆ ಇದ್ದ ಬ್ಯಾಗ್ ಕಳ್ಳತನ ನಡೆಸಲಾಗಿತ್ತು. ಕಳ್ಳನ ಪತ್ತೆಗಾಗಿ ಮೇಲಧಿಕಾರಿಗಳ ನಿರ್ದೇಶನದಂತೆ ಎರಡು ತಂಡ ರಚಿಸಲಾಗಿತ್ತು. ಸುಬ್ರಹ್ಮಣ್ಯ ಠಾಣಾ ಎಸೈ ಕಾರ್ತಿಕ್ ಹಾಗೂ ತನಿಖಾ ಎಸೈ ಮುರಳೀಧರ ನಾಯಕ್ ನೇತೃತ್ವದಲ್ಲಿ ಎಎಸೈ ಕರುಣಾಕರ ಹಾಗೂ ಸಿಬಂದಿ ತಂಡ ಸಿಸಿ ಕೆಮರಾ ದೃಶ್ಯಗಳ ಮೂಲಕ ಕಳ್ಳನ ಜಾಡು ಹಿಡಿದು ಸುಬ್ರಹ್ಮಣ್ಯ ಸಮೀಪದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಈತನ ಮೇಲೆ ಹೊನ್ನವಳ್ಳಿ ಸೇರಿದಂತೆ ಬೇರೆ ಬೇರೆ ಠಾಣೆಗಳಲ್ಲಿ ಹಲವು ಪ್ರಕರಣಗಳಿದ್ದು, ದೇವಸ್ಥಾನಗಳಿಗೆ ಹೋಗಿ ಉಪಾಯದಿಂದ ಯಾರು ಇಲ್ಲದ ಸಮಯ ನೋಡಿಕೊಂಡು ಲೋಹದಂತ ಆಯುಧಗಳನ್ನು ಬಳಸಿ ಕಾರಿನ ಗಾಜುಗಳನ್ನು ಪುಡಿ ಮಾಡಿ ಬೇಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡುವ ಚಾಳಿ ಬೆಳೆಸಿಕೊಂಡಿಸಿರುವುದಾಗಿ ತನಿಖೆ ವೇಳೆ ತಿಳಿದು ಬಂದಿದೆ. ಸುಬ್ರಹ್ಮಣ್ಯದಲ್ಲಿ ಈತ ಈ ಹಿಂದೆಯೂ ಒಮ್ಮೆ ಕಳ್ಳತನ ಮಾಡಿದ್ದು ಇತ್ತೀಚೆಗೆ ಧರ್ಮಸ್ಥಳದಲ್ಲೂ ಕಳ್ಳತನ ಮಾಡಿದ್ದ ಬಗ್ಗೆ ತನಿಖೆ ವೇಳೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.