ಸಂಪರ್ಕ ಬೆಸೆದ ಶೌರ್ಯಶ್ರೀ ವಿಪತ್ತು ನಿರ್ವಹಣ ಘಟಕ

ಭಾರೀ ಮಳೆಗೆ ಸಂಪರ್ಕ ಕಳೆದುಕೊಂಡಿದ್ದ ಉಪ್ಪುಕಳ ಜನತೆ

Team Udayavani, Jul 17, 2022, 12:22 PM IST

5

ಸುಬ್ರಹ್ಮಣ್ಯ: ಹೊಳೆ ದಾಟಲು ಇದ್ದ ಏಕೈಕ ಸಾಂಪ್ರದಾಯಿಕ ಮರದ ಪಾಲ ಕೆಲವು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ನೀರುಪಾಲಾಗಿ ಉಪ್ಪುಕಳ ಹೊಳೆಯ ಒಂದು ಭಾಗದ ಮನೆ ಮಂದಿ ಹೊರ ಜಗತ್ತಿನ ಸಂಪರ್ಕ ಕಳೆದುಕೊಂಡಿದ್ದರು. ಶೌರ್ಯ ಶ್ರೀ ವಿಪತ್ತು ನಿರ್ವಹಣ ಘಟಕದ ನೇತೃತ್ವದಲ್ಲಿ ಐದಾರು ದಿನದಲ್ಲಿ ಮತ್ತೆ ಸಂಪರ್ಕ ಸೇತು ವ್ಯವಸ್ಥೆ ಕಲ್ಪಿಸಲಾಗಿದೆ.

ಹರಿಹರ ಪಲ್ಲತ್ತಡ್ಕ ಗ್ರಾ.ಪಂ. ವ್ಯಾಪ್ತಿಯ ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಇಂತಹ ಸ್ಥಿತಿ ನಿರ್ಮಾಣವಾಗಿದ್ದುದು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ಶ್ರೀ ವಿಪತ್ತು ನಿರ್ವಹಣ ಸುಬ್ರಹ್ಮಣ್ಯ ವಲಯ ಈ ಬಗ್ಗೆ ಮಾಹಿತಿ ಪಡೆದು ಸಂಪರ್ಕ ಸೇತುವೆ ನಿರ್ಮಿಸಲು ಮುಂದಾದರು. ಅವರಿಗೆ ಗ್ರಾ.ಪಂ. ಅಧ್ಯಕ್ಷ ಜಯಂತ್‌ ಅಗತ್ಯ ನೆರವು ನೀಡಿದರು. ಸ್ಥಳೀಯರ ಸಹಕಾರದಲ್ಲಿ ವಿಪತ್ತು ನಿರ್ವಹಣ ತಂಡ ಸುರಿಯುತ್ತಿದ್ದ ಭಾರೀ ಮಳೆಯನ್ನೂ ಲೆಕ್ಕಿಸದೆ ಸಂಪರ್ಕ ಕಲ್ಪಿಸಲು ದುಡಿದಿದ್ದಾರೆ. ಪಾಲ ಮುರಿದು ನೀರು ಪಾಲಾಗಿದ್ದ ಭಾಗಕ್ಕೆ ಮರ, ಬಳ್ಳಿ ಮೂಲಕ ಪಾಲ ನಿರ್ಮಿಸಿದ್ದಾರೆ. ಹೊಳೆಯಲ್ಲಿ ಭಾರೀ ನೀರು ಹರಿಯುತ್ತಿದ್ದ ಕಾರಣ ಹೊಳೆ ದಾಟಲು ಅಸಾಧ್ಯವಾಗಿತ್ತು. ಈ ವೇಳೆ ಹಗ್ಗವನ್ನೂ ಬಳಸಿ ಕಠಿನ ಪರಿಸ್ಥಿತಿಯಲ್ಲಿ ಪಾಲವನ್ನು ನಿರ್ಮಿಸುವಲ್ಲಿ ತಂಡ ಸಫ‌ಲವಾಗಿದೆ.

12 ಕುಟುಂಬ

ಉಪ್ಪುಕಳ ಹೊಳೆ ದಾಟಿ ಆ ಭಾಗದಲ್ಲಿ 12 ಕುಟುಂಬಗಳಿವೆ. ಒಬ್ಬರು ಅಂಗವಿಕಲ ಸಹಿತ ಸುಮಾರು 49 ಜನರಿದ್ದಾರೆ. ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ಸಹಿತ ಪಾಲ ಇಲ್ಲದೆ ಸುಮಾರು 5 ದಿನ ಆ ಭಾಗದ ಜನರು ಹೊರ ಜಗತ್ತಿನ ಸಂಪರ್ಕ ಕಳೆದುಕೊಂಡಿದ್ದರು.

ಧರ್ಮಸ್ಥಳ ಯೋಜನೆಯ ಮೇಲ್ವಿಚಾರಕರು, ಘಟಕದ ಸದಸ್ಯರಾದ ಸತೀಶ್‌ ಟಿ.ಎನ್‌., ಬಾಲಸುಬ್ರಹ್ಮಣ್ಯ, ಲಕ್ಷ್ಮಣ ನವಗ್ರಾಮ, ಕುಶಾಲಪ್ಪ ಜಾಲು ಮನೆ, ಮುತ್ತಪ್ಪ ಕಟ್ಟ, ಶ್ರೀನಿವಾಸ ಕಟ್ಟ, ಹೃತಿಕ್‌ ಕಟ್ಟ, ಚಂದ್ರಶೇಖರ ಕೋನಡ್ಕ, ಅಶೋಕ, ಹರ್ಷ ಅಟ್ನೂರುಮಜಲು, ಯಶವಂತ ಸೇರಿ ಸ್ಥಳೀಯರು ಪಾಲ ನಿರ್ಮಾಣಕ್ಕೆ ಸಹಕಾರ ನೀಡಿದ್ದಾರೆ. ವಿಪತ್ತು ನಿರ್ವಹಣ ಘಟಕ ಈ ಪ್ರದೇಶದಲ್ಲಿ ಇನ್ನೂ ಹಲವಾರು ಸಮಾಜಿಕ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ.

ಸಚಿವರ ಭರವಸೆ

ಉಪ್ಪುಕಳ ಸೇತುವೆ ಕೊಚ್ಚಿಹೋದ ಭಾಗಕ್ಕೆ ಸಚಿವ ಅಂಗಾರ ಭೇಟಿ ನೀಡಿ ಪರಿಶೀಲಸಿ ಸೇತುವೆಗೆ ಬೇಕಾದ ಅಗತ್ಯ ಕ್ರಮ ವಹಿಸುವುದಾಗಿ ಭರವಸೆ ನೀಡಿದ್ದಾರೆ. ಇದರಿಂದ ಈ ಭಾಗದ ಜನರಲ್ಲಿ ಹೊಸ ಆಶಾಭಾವನೆ ಗರಿಗೆದರಿದೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10(1

Mannagudda: ಗುಜರಿ ಕಾರುಗಳ ಪಾರ್ಕಿಂಗ್‌; ಸಾರ್ವಜನಿಕರಿಗೆ ಸಮಸ್ಯೆ

9(1

Mangaluru: ರಸ್ತೆ, ಸರ್ಕಲ್‌ಗೆ ಸ್ಥಳೀಯ ನಾಮಕರಣ ಪ್ರಸ್ತಾವ

6

Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ

5

Mangaluru: ವೆನ್ಲಾಕ್‌ನಲ್ಲಿ  ದೊರೆಯಲಿದೆ ಕಿಮೋಥೆರಪಿ

4(1

Ullal: ತೊಕ್ಕೊಟ್ಟು ಜಂಕ್ಷನ್‌ – ಭಟ್ನಗರ ರಸ್ತೆಯಲ್ಲಿ ಉಲ್ಟಾ ಸಂಚಾರ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.