“ಶ್ರದ್ಧೆ , ನಿರ್ಮಲ ಮನಸ್ಸಿನಿಂದ ಕಾಳಿಕಾಂಬೆಯನ್ನು ಆರಾಧಿಸಿದಲ್ಲಿ ಯಶಸ್ಸು ‘
ಶಿಲಾಮಯ ಸುತ್ತುಪೌಳಿ ಶಿಲಾನ್ಯಾಸ
Team Udayavani, Jul 14, 2019, 5:14 AM IST
ಮಹಾನಗರ: ಶ್ರದ್ಧೆ ನಿರ್ಮಲ ನಿಷ್ಕಲ್ಮಶ ಮನಸ್ಸಿನಿಂದ ಕಾಳಿಕಾಂಬೆಯನ್ನು ಆರಾಧಿಸಿದಲ್ಲಿ ಯಶಸ್ಸು ಖಂಡಿತ. ದೇವರಲ್ಲಿ ಭಕ್ತಿ ಅನುದಿನವೂ ಇರಬೇಕು ಎಂದು ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ತಿಳಿಸಿದರು.
ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ನೂತನ ಶಿಲಾಮಯ ಸುತ್ತುಪೌಳಿ ಶಿಲಾನ್ಯಾಸ ಸಂದರ್ಭದಲ್ಲಿ ಅವರು ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಯಾಗಿದ್ದ ವಿದ್ವಾಂಸರಾದ ಪಂಜ ಭಾಸ್ಕರ ಭಟ್ ಮಾತನಾಡಿ, ವಿಶ್ವಕರ್ಮ ಜನಾಂಗದ ಕೊಡುಗೆ ಸಮಾಜಕ್ಕೆ ಮಹತ್ತರವಾದುದು. ಸಮಸ್ತರೂ ಏಕಮನಸ್ಸಿನಿಂದ ಕಾರ್ಯ ಪ್ರವರ್ತರಾದರೆ ಜೀರ್ಣೋದ್ಧಾರ ಕಾರ್ಯ ಶೀಘ್ರಾತಿಶ್ರೀಘ್ರ ನೆರವೇರುವುದು ಖಚಿತ ಎಂದರು.
ಕ್ಷೇತ್ರದ ಆಡಳಿತ ಮೊಕ್ತೇಸರ ಕೆ. ಕೇಶವ ಆಚಾರ್ಯ, 2ನೇ ಮೊಕ್ತೇಸರ ಸುಂದರ್ ಆಚಾರ್ಯ ಬೆಳುವಾಯಿ, 3ನೇ ಮೊಕ್ತೇಸರ ಎ. ಲೋಕೇಶ್ ಆಚಾರ್ಯ, ಜೀರ್ಣೋದ್ಧಾರ ಸಮಿ ತಿಯ ಅಧ್ಯಕ್ಷ ಧನಂಜಯ ಪಾಲ್ಕೆ, ಜೀರ್ಣೋದ್ಧಾರ ಸಮಿತಿಯ ಕಾರ್ಯಾ ಧ್ಯಕ್ಷ ಕೈಂತಿಲ ಸದಾಶಿವ ಆಚಾರ್ಯ, ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಸದಸ್ಯರು, ಕಾಳಿಕಾಂಬಾ ಸೇವಾ ಸಮಿತಿ, ವಿಶ್ವ ಬ್ರಾಹ್ಮಣ ಮಹಿಳಾ ಸಮಿತಿ, ವಿಶ್ವಕರ್ಮ ಯುವವೇದಿಕೆ, ವಿಶ್ವಕರ್ಮ ಯುವಮಿಲನ, ದ.ಕ. ಜಿಲ್ಲಾ ಚಿನ್ನದ ಕೆಲಸಗಾರರ ಸಂಘ, ವಿವಿಧ ಕಟ್ಟಡಗಳ ಸ್ವರ್ಣಶಿಲ್ಪಿಗಳು ಹಾಗೂ ಅನೇಕ ಭಕ್ತರು ಉಪಸ್ಥಿತರಿದ್ದರು.
ಸುತ್ತುಪೌಳಿಯ ಎಂಜಿನಿಯರ್ ದಿನೇಶ್ ಪಡುಬಿದ್ರಿ ಅವರನ್ನು ಅಭಿ ನಂದಿಸಲಾಯಿತು. ಕ್ಷೇತ್ರದ ಪ್ರಧಾನ ತಂತ್ರಿ ಬ್ರಹ್ಮಶ್ರೀ ಲಕ್ಷ್ಮೀಕಾಂತ್ ಶರ್ಮಾ, ಕ್ಷೇತ್ರದ ಪ್ರಧಾನ ಅರ್ಚಕರಾದ ಧನಂಜಯ ಪುರೋಹಿತ್, ವಿಘ್ನೇಶ್ ಪುರೋಹಿತ್ ಅವರು ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯ ದರ್ಶಿ ಸುಜೀರ್ ವಿನೋದ್ ಅವರು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.