ಯಶಸ್ವೀ ಕಾರ್ಯಾಚರಣೆ: ಖಾದರ್ ಶ್ಲಾಘನೆ
Team Udayavani, Jun 5, 2017, 10:19 AM IST
ಪಣಂಬೂರು: ಬಾರ್ಜ್‌ನಲ್ಲಿದ್ದ ಎಲ್ಲರನ್ನು ಸುರಕ್ಷಿತವಾಗಿ ದಡಕ್ಕೆ ತರುವಲ್ಲಿ ಸಹಕರಿಸಿದ ಕೋಸ್ಟ್‌ಗಾರ್ಡ್ ಸಿಬಂದಿ, ಮುಳುಗು ತಜ್ಞರು, ಪೊಲೀಸರು, ಮೀನುಗಾರರನ್ನು ಸಚಿವ ಯು.ಟಿ. ಖಾದರ್ ಪತ್ರಿಕಾಗೋಷ್ಠಿಯಲ್ಲಿ ಶ್ಲಾಘಿಸಿದ್ದಾರೆ.
ಶನಿವಾರ ಮಧ್ಯಾಹ್ನ ಅವಘಡ ಸಂಭವಿಸಿ ದರೂ ಬಾರ್ಜ್‌ನ ಮುಖ್ಯಸ್ಥರು ಸಂಜೆ 5 ಗಂಟೆ ಬಳಿಕ ನಮಗೆ ಮಾಹಿತಿ ನೀಡಿದರು. ಪ್ರತಿಕೂಲ ಹವಾಮಾನದಿಂದಾಗಿ ಆ ಹೊತ್ತಿನಲ್ಲಿ ನಾಲ್ವರನ್ನು ಮಾತ್ರ ದಡಕ್ಕೆ ತರಲು ಸಾಧ್ಯವಾಯಿತು. ರವಿವಾರ ಬೆಳಗ್ಗೆ 5 ಗಂಟೆಗೆ ಕಾರ್ಯಾಚರಣೆ ಮರು ಪ್ರಾರಂಭಿಸಿ 12 ಗಂಟೆ ಒಳಗೆ ಎಲ್ಲರನ್ನೂ ತರಲು ಸಾಧ್ಯವಾಯಿತು. ಯಾವುದೇ ಅಹಿತಕರ ಘಟನೆ ನಡೆಯದ ಹಾಗೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಅಗತ್ಯ ಬಿದ್ದರೆ ಗೋವಾದಿಂದ ಹೆಲಿಕಾಪ್ಟರ್ ಕೂಡ ತರಿಸುವ ಉದ್ದೇಶ ಇತ್ತು. ಯಶಸ್ವೀ ಕಾರ್ಯಾ ಚರಣೆಯಲ್ಲಿ ಸಹಕರಿಸಿದ ಎಲ್ಲರಿಗೂ ನಾನು ಚಿರಋಣಿಯಾಗಿರುತ್ತೇನೆ ಎಂದು ಸಚಿವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ| ಜಗದೀಶ್, ಶಾಸಕ ಮೊದಿನ್ ಬಾವಾ, ಕೋಸ್ಟ್ ಗಾರ್ಡ್ ಡಿಐಜಿ ದಸಿಲಾ, ಪ್ರಾಜೆಕ್ಟ್ ನಿರ್ದೇಶಕ ರಮೇಶ್, ಕಮಾಂಡರ್ ಜೈಸ್ವಾಲ್ ಹಾಗೂ ಕಮಾಂಡರ್ ಗುಲ್ವಿಂದರ್ ಸಿಂಗ್ ಉಪಸ್ಥಿತರಿದ್ದರು.
ಇಲಾಖಾ ತನಿಖೆ: ಕಡಲ್ಕೊರೆತ ತಡೆ ಕಾಮಗಾರಿ ನಡೆಸುತ್ತಿದ್ದ ದರ್ತಿ ಸಂಸ್ಥೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಸಚಿವ ಯು.ಟಿ. ಖಾದರ್ ಅವರು ಘಟನೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಬಂದರು ಇಲಾಖೆಗೆ ಪ್ರತ್ಯೇಕ ತನಿಖೆ ನಡೆಸಿ ವರದಿ ನೀಡಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.