![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 3, 2021, 5:37 PM IST
ಬೆಳ್ತಂಗಡಿ: ಧರ್ಮಸ್ಥಳ ಸೇವಾ ಸಹಕಾರಿ ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರನ್ ಡಿ. (57) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಮೇ.3) ನಡೆದಿದೆ.
ಮಧ್ಯಾಹ್ನ ಸಂಘದ ಅಟಲ್ ಜಿ ಸಭಾಭವನದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಇದನ್ನೂ ಓದಿ : ಆರ್.ಆರ್.ನಗರದ 200 ಸೋಂಕಿತರಿರುವ ಆಸ್ಪತ್ರೆಯಲ್ಲೂ ಆಕ್ಸಿಜನ್ ಸಮಸ್ಯೆ: ಡಿ.ಕೆ.ಸುರೇಶ್
ಇನ್ನು, ಮುಂಜಾನೆ 7.30 ರ ವೇಳೆ ಕಚೇರಿಗೆ ಬಂದು ತಮ್ಮ ಹಾಜರಿಯನ್ನು ನಮೂದಿಸಿದ್ದರು ಎನ್ನಲಾಗಿದೆ.
ಆತ್ಮ ಹತ್ಯೆಯ ಬಗ್ಗೆ ನಿಖರವಾದ ಕಾರಣ ಇದುವರೆಗೆ ತಿಳಿದುಬಂದಿಲ್ಲ, ವೈಯಕ್ತಿಕ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಸ್ಥಳವನ್ನು ಪರೀಶೀಲಿಸಿ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಇದನ್ನೂ ಓದಿ : ಎಸ್ ಬಿ ಐ ಗ್ರಾಹಕರು ಈ ಕೆಲಸಕ್ಕಾಗಿ ಬ್ಯಾಂಕ್ ಗೆ ಹೋಗಬೇಕೆಂದಿಲ್ಲ..! ಮಾಹಿತಿ ಇಲ್ಲಿದೆ.
You seem to have an Ad Blocker on.
To continue reading, please turn it off or whitelist Udayavani.