ಸುಖಾನಂದ ಶೆಟ್ಟಿ ಕೊಲೆ ಪ್ರಕರಣ: 17 ಮಂದಿ ಆರೋಪಿಗಳು ಖುಲಾಸೆ
Team Udayavani, Mar 29, 2018, 9:25 AM IST
ಮಂಗಳೂರು: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಖಾನಂದ ಶೆಟ್ಟಿ ಕೊಲೆ ಪ್ರಕರಣದ 17 ಮಂದಿ ಆರೋಪಿಗಳನ್ನು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿ ಬುಧವಾರ ತೀರ್ಪು ನೀಡಿದೆ.
ನವಾಜ್, ನೌಷಾದ್, ಶಾಕಿರ್, ಮೊಹಮ್ಮದ್ ಅಜೀಜ್, ಮೊಹಮ್ಮದ್ ರಫೀಕ್, ಅಬ್ದುಲ್ ಖಾದರ್ ಅಲಿ, ಪಿ.ಕೆ.ಅಯ್ಯೂಬ್, ಮೊಹಮ್ಮದ್ ಅಶ್ರಫ್, ಫಾತಿಮಾ ಝೊಹರಾ, ಸಲೀಂ, ಖಲಂದರ್ ಬಜಪೆ, ರೆಹಮತ್ ಖಲಂದರ್, ಅಜೀಜ್ ಯಾನೆ ಯುರೋಪಿಯನ್ ಅಜೀಜ್, ನಿಜಾಮುದ್ದೀನ್, ಮೊಹಮ್ಮದ್ ಯಾನೆ ಸಾದಾ ಮೊಹಮ್ಮದ್, ಅಪ್ರೋಜ್, ನಾಸಿರ್ ದೋಷಮುಕ್ತಗೊಂಡವರು. ಆರೋಪವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಶನ್ ವಿಫಲವಾದ ಹಿನ್ನೆಲೆಯಲ್ಲಿ ದೋಷಮುಕ್ತಗೊಳಿಸಲಾಗಿದೆ.
ಒಟ್ಟು 23 ಆರೋಪಿಗಳಿದ್ದರು
ಪ್ರಕರಣದಲ್ಲಿ ಒಟ್ಟು 23 ಆರೋಪಿಗಳಿದ್ದರು. ಈ ಪೈಕಿ ಮೂಲ್ಕಿ ರಫೀಕ್ ಉಡುಪಿ ರೈಲು ನಿಲ್ದಾಣದಲ್ಲಿ ಹಾಗೂ ಬುಲೆಟ್ ಸುಧೀರ್ ಯಾನೆ ಆತಿಕ್ ಕುಂದಾಪುರ ಬಳಿ ನಡೆದ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದರು. ಮಾಡೂರು ಯೂಸುಫ್ ಮಂಗಳೂರು ಜೈಲಿನಲ್ಲಿ ಹಾಗೂ ಕಬೀರ್ ಗುರುಪುರ ಬಳಿ ಕೊಲೆಯಾಗಿದ್ದರು. ಇಬ್ಬರು ತಲೆಮರೆಸಿಕೊಂಡಿದ್ದಾರೆ. ಒಟ್ಟು 72 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು.
ಪ್ರಕರಣದ ಹಿನ್ನೆಲೆ
2006 ಡಿ.1ರಂದು ಬಿಜೆಪಿ ಮುಖಂಡ ಸುಖಾನಂದ ಶೆಟ್ಟಿ ಮೇಲೆ ಕುಳಾಯಿ ಹೊನ್ನಕಟ್ಟೆಯಲ್ಲಿರುವ ಅವರ ಮಾರ್ಬಲ್ ಟ್ರೇಡ್ ಕಂಪೆನಿ ಆವರಣದಲ್ಲಿ ಕ್ವಾಲಿಸ್ ವಾಹನದಲ್ಲಿ ಬಂದ ದುಷ್ಕರ್ಮಿಗಳು ಮರಣಾಂತಿಕ ದಾಳಿ ನಡೆಸಿದ್ದರು. ತೀವ್ರ ಸ್ವರೂಪದ ಗಾಯಗೊಂಡಿದ್ದ ಸುಖಾನಂದ ಶೆಟ್ಟಿ ಅವರನ್ನು ತತ್‌ಕ್ಷಣ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿ ದ್ದರು. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆಗಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಯಾನಂದ್ ಅವರು ಇನ್ಸ್‌ಪೆಕ್ಟರ್ ಡಾ| ಎಚ್. ಎನ್. ವೆಂಕಟೇಶ ಪ್ರಸನ್ನ ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡವನ್ನು ರಚಿಸಿ ಕೊಲೆಗೆ ಹಣಕಾಸು ನೆರವು ನೀಡಿದ್ದವರ ಸಹಿತ ಆರೋಪಿಗಳನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಗುರುಪುರ ನಿವಾಸಿ ಅಕ್ಬರ್ ಕಬೀರ್ ಪ್ರಮುಖ ಆರೋಪಿಯಾಗಿದ್ದ. ಆರೋಪಿಗಳಿಗೆ ಮೂಲ್ಕಿ ರಫೀಕ್ ಹಣಕಾಸು ನೆರವು ನೀಡಿದ್ದ ಎಂದು ಆರೋಪಿಸಲಾಗಿತ್ತು. ಆರೋಪಿಗಳ ಪರವಾಗಿ ಬಿ. ನಾರಾಯಣ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Renukaswamy case: ದರ್ಶನ್ ವಿರುದ್ಧ ಸಾಕ್ಷ್ಯ “ಸೃಷಿ’: ವಕೀಲ ವಾದ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.