ಪ್ರಕಾಶ್ ರೈ ಅವರ ತನಿಖೆ ಮಾಡಿದ್ರೆ ಗೌರಿ ಹಂತಕರು ಸಿಗುತ್ತಾರೆ
Team Udayavani, Nov 13, 2017, 12:21 PM IST
ಮಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೈದವರು ಬಲಪಂಥೀಯರು ಎಂದು ಪದೇ ಪದೇ ಹೇಳಿಕೆ ನೀಡುತ್ತಿರುವ ನಟ ಪ್ರಕಾಶ್ ರೈ ಅವರನ್ನು ಪೊಲೀಸ್ ತನಿಖೆಗೆ ಒಳಪಡಿಸಿದರೆ ಸತ್ಯಾಂಶ ಹೊರಬರುತ್ತದೆ’ ಎಂದು ಹೇಳುವ ಮೂಲಕ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರವಿವಾರ ನಗರದ ವಿ.ಟಿ. ರಸ್ತೆಯ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ “ಎಡ ಪಂಥೀಯರ ಹತ್ಯೆ: ಹಿಂದೂಗಳ ಮೇಲೇಕೆ ಆರೋಪ?’ ಎಂಬ ವಿಷಯದಲ್ಲಿ ಸಂವಾದದಲ್ಲಿ ಅವರು ಹೀಗೆ ಹೇಳಿದ್ದಾರೆ.
ಗೌರಿ ಹತ್ಯೆಯಾದ ತತ್ಕ್ಷಣ ಅದನ್ನು ಹಿಂದೂ ಸಂಘಟನೆಗಳ ಮೇಲೆ ಹೊರಿಸುವ ಪ್ರಯತ್ನ ನಡೆದಿತ್ತು. ನಟ ರೈ ಅವರಂಥವರು ಹತ್ಯೆಗೈದವರು ಬಲಪಂಥೀಯರೇ ಎಂದು ಹೇಳುತ್ತಿದ್ದಾರೆ. ಹೀಗೆ ಆರೋಪ ಮಾಡುತ್ತಿದ್ದಾರೆ ಎಂದರೆ ಅವರಿಗೆ ಕೊಲೆಗಾರರು ಯಾರೆಂದು ಗೊತ್ತಿದೆ ಎಂದರ್ಥ. ಹೀಗಾಗಿ ಅವರನ್ನು ಎಳೆದು ತಂದು ತೀವ್ರ ವಿಚಾರಣೆ ಮಾಡಬೇಕು ಎಂದರು.
ಪ್ರತಿ ಹತ್ಯೆ ಪ್ರಕರಣದಲ್ಲಿ ಮೊದಲು ಸಾಕ್ಷ é ಲಭಿಸಿದ ಬಳಿಕ ಆರೋಪಿಗಳು ಸಿಗುತ್ತಾರೆ. ಆದರೆ ಈ ಪ್ರಕರಣದಲ್ಲಿ ಗೃಹ ಸಚಿವರು ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದಾರೆ. ಹತ್ಯೆ ಮಾಡಿದವರು ಯಾರೆಂದು ಗೊತ್ತಿದೆ. ಆದರೆ ಸಾಕ್ಷé ಸಿಗುತ್ತಿಲ್ಲ ಎಂದು ಸಚಿವರು ಹೇಳುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ನಿರಂತರವಾಗಿ ಹಿಂದೂಗಳ ತಲೆಗೆ ಕಟ್ಟುವ ಪ್ರಯತ್ನಗಳು ನಡೆಯುತ್ತಲೇ ಬಂದಿವೆ ಎಂದು ಆರೋಪಿಸಿದರು.
ವೇದಿಕೆಯಲ್ಲಿ ಮೂಡಬಿದಿರೆ ಶ್ರೀ ಕ್ಷೇತ್ರ ಕರಿಂಜೆಯ ಶ್ರೀ ಮುಕ್ತಾನಂದ ಸ್ವಾಮೀಜಿ, ನ್ಯಾಯವಾದಿ ಸುಬ್ರಹ್ಮಣ್ಯ ಅಗರ್ತ ಬೆಳ್ತಂಗಡಿ, ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕಾರ ಗುರುಪ್ರಸಾದ, ಪ್ರಮಖರಾದ ಚಂದ್ರ ಮೊಗೇರ, ಸನಾತನ ಸಂಸ್ಥೆಯ ಲಕ್ಷ್ಮೀ ಪೈ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.