ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೆಗೆ ಚಾಲನೆ
Team Udayavani, Jan 3, 2018, 3:36 PM IST
ಸುಳ್ಯ: ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವ ಮಂಗಳವಾರ ಉಗ್ರಾಣ ತುಂಬುವುದು ಮತ್ತು ಸಂಜೆ ಪಯ್ಯೋಳಿ ಮತ್ತು ದೈವಗಳ ಭಂಡಾರ ಆಗಮಿಸಿ ಧ್ವಜಾರೋಹಣ ನೆರವೇರುವುದರೊಂದಿಗೆ ವಿಧ್ಯುಕ್ತವಾಗಿ ಆರಂಭಗೊಂಡಿತು.
ಬೆಳಗ್ಗೆ ಬ್ರಹ್ಮಶ್ರೀ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ಮಾರ್ಗದರ್ಶನದಲ್ಲಿ ಉಗ್ರಾಣ ತುಂಬಿಸುವ ಕಾರ್ಯಕ್ರಮ ಜರಗಿತು. ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ| ಹರಪ್ರಸಾದ್ ತುದಿಯಡ್ಕ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ, ಸಮಿತಿ ಸದಸ್ಯರಾದ ಪಡ್ಡಂಬೈಲು ವೆಂಕಟ್ರಮಣ ಗೌಡ, ಲಿಂಗಪ್ಪ ಗೌಡ ಕೇರ್ಪಳ, ಎಂ. ಮೀನಾಕ್ಷಿ ಗೌಡ, ಎನ್.ಎ. ರಾಮಚಂದ್ರ, ಎ. ರಮೇಶ್ ಬೈಪಡಿತ್ತಾಯ, ಕೃಪಾಶಂಕರ ತುದಿಯಡ್ಕ, ಡಾ| ಸಾಯೀಗೀತಾ, ಸುರೇಶ್ ಕುರುಂಜಿಭಾಗ್ ಮತ್ತಿತರಿದ್ದರು.
ಸಂಜೆ ಪನ್ನೆ ಬೀಡು 4 ಸ್ಥಾನಗಳ ದೈವಗಳ ಚಾವಡಿಯಿಂದ ಬಲ್ಲಾಳರ ಪಯ್ಯೋಳಿ ತರಲಾಯಿತು. ಬಳಿಕ ಕುಕ್ಕನ್ನೂರು ದೈವಗಳ ಭಂಡಾರ ಆಗಮಿಸಿತು. ಬಳಿಕ ಧ್ವಜಾರೋಹಣ ನೆರವೇರಿತು. ಸಂಜೆ 7ರಿಂದ ನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ. ಜ. 5ರಂದು ಬೆಳಗ್ಗೆ ಪನ್ನೆಬೀಡು ಶ್ರೀ ಭಗವತಿ ಸ್ಥಾನದಲ್ಲಿ ಪ್ರತಿಷ್ಠಾ ದಿನ ಮಹಾಪೂಜೆ ನಡೆಯಲಿದೆ.
ಸಾಂಸ್ಕೃತಿಕೋತ್ಸವಕ್ಕೆ ಚಾಲನೆ
ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನ ಮತ್ತು ಶ್ರೀ ಚೆನ್ನಕೇಶವ ಯುವ ಸೇವಾ ಸಂಘಗಳ ಆಶ್ರಯದಲ್ಲಿ ಜಾತ್ರೋತ್ಸವ ಪ್ರಯುಕ್ತ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗ ಜರಗಿದ 15ನೇ ವರ್ಷದ ‘ಸಾಂಸ್ಕೃತಿಕೋತ್ಸವ -2018’ಕ್ಕೆ ಚಾಲನೆ ನೀಡಲಾಯಿತು. ಎಒಎಲ್‌ಇ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಅವರು ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಶ್ರೀ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ| ಹರಪ್ರಸಾದ್ ತುದಿಯಡ್ಕ, ನಮ್ಮ ಕಲಾ ಪ್ರಕಾರಗಳು, ಉತ್ಸವ ಆಚರಣೆಗಳು, ಧಾರ್ಮಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ತಿಳಿಸಿದರು.
ಸಮಿತಿ ಸದಸ್ಯ ಪಡ್ಡಂಬೈಲು ವೆಂಕಟ್ರಮಣ ಗೌಡ ಸಭೆಯನ್ನುದ್ದೇಶಿಸಿ ಮಾತನಾಡಿದರು. ನ.ಪಂ. ಸದಸ್ಯ ಗಿರೀಶ್ ಕಲ್ಲಗದ್ದೆ, ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಲಿಂಗಪ್ಪ ಗೌಡ ಕೇರ್ಪಳ, ಎಂ. ಮೀನಾಕ್ಷಿ ಗೌಡ, ಎ. ರಮೇಶ್ ಬೈಪಡಿತ್ತಾಯ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮ ಬಳಿಕ ಕೆವಿಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.