ಕರಾವಳಿಯಲ್ಲಿ ಬೇಸಗೆ ಮಳೆ ದುರ್ಬಲ: ವಾಡಿಕೆಗಿಂತ ಶೇ.29ರಷ್ಟು ಕೊರತೆ
ಹವಾಮಾನ ವೈಪರೀತ್ಯ
Team Udayavani, Apr 28, 2019, 6:00 AM IST
ಮಹಾನಗರ : ಸಾಮಾನ್ಯವಾಗಿ ಬೇಸಗೆಯಲ್ಲಿ ಪೂರ್ವ ಮುಂಗಾರು ಮಳೆಯಾಗಿ ಬಿಸಿಲ ಬೇಗೆಯನ್ನು ತುಸು ತಣಿಸುವುದು ವಾಡಿಕೆ. ಆದರೆ ಈ ಬಾರಿ ಕರಾವಳಿ ಭಾಗದಲ್ಲಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಡಿಮೆ ಪ್ರಮಾಣದಲ್ಲಿ ಬೇಸಗೆ ಮಳೆಯಾಗಿದೆ.
ಹವಾಮಾನ ಇಲಾಖೆಯ ಸದ್ಯದ ಅಂಕಿ-ಅಂಶ ಪ್ರಕಾರ ಕರಾವಳಿ ಪ್ರದೇಶದಲ್ಲಿ ಈ ಬಾರಿ ವಾಡಿಕೆಗಿಂತ ಶೇ.29ರಷ್ಟು ಬೇಸಗೆ ಮಳೆಯ ಕೊರತೆಯಾಗಿದೆ.
ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆಯು ಮಾರ್ಚ್‌ನಿಂದ ಮೇ ತಿಂಗಳಿನವರೆಗೆ ಬೀಳುತ್ತದೆ. ಬಳಿಕ ಮೇ ಕೊನೆಯ ವಾರದಲ್ಲಿ ಅಥವಾ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶ ಪಡೆಯುತ್ತದೆ. ಹವಾಮಾನ ಇಲಾಖೆಯ ಅಂಕಿ-ಅಂಶದ ಪ್ರಕಾರ ಮಾರ್ಚ್ ಮೊದಲ ವಾರದಿಂದ ಮೇ ಅಂತ್ಯದವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಆರು ತಾಲೂಕುಗಳಲ್ಲಿ ಒಟ್ಟು 227.1 ಮಿ. ಮೀ.ನಷ್ಟು ವಾಡಿಕೆ ಮಳೆಯಾಗಬೇಕು. ಉಡುಪಿ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 227.3 ಮಿ.ಮೀ. ಮಳೆಯಾಗಬೇಕು.
ಉತ್ತರ ಕನ್ನಡ ಜಿಲ್ಲೆಯಲ್ಲಿ 138.8 ಮಿ.ಮೀ. ಮಳೆಯಾಗಬೇಕು. ಒಟ್ಟಾರೆ ಮೂರು ತಿಂಗಳಿನಲ್ಲಿ ಕರಾವಳಿ ಪ್ರದೇಶದಲ್ಲಿ ಸರಾಸರಿ 178.8 ಮಿ.ಮೀ. ಮಳೆಯಾಗಬೇಕಿದೆ.
ಸಾಮಾನ್ಯವಾಗಿ ಕರಾವಳಿ ಪ್ರದೇಶದಲ್ಲಿ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಸುರಿಯುತ್ತದೆ. ಆದರೆ ಈ ಬಾರಿ ಇದುವರೆಗಿನ ಅಂಕಿ ಅಂಶದಂತೆ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ.
ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಕರಾವಳಿ ಪ್ರದೇಶದಲ್ಲಿ ವಾಡಿಕೆಗಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಹವಾಮಾನ ವೈಪರಿತ್ಯದಿಂದಾಗಿ ಮಳೆ ತರುವ ಮೋಡಗಳು ದೂರ ಹೋಗಿದ್ದೇ ಮಳೆ ಕೊರತೆಗೆ ಕಾರಣ.
ಶೇ.29ರಷ್ಟು ಮಳೆ ಕೊರತೆ
ಕರಾವಳಿ ಪ್ರದೇಶದಲ್ಲಿ ಜ.1ರಿಂದ ಎ.27ರ ವರೆಗೆ ಹೋಲಿಕೆ ಮಾಡಿದರೆ ವಾಡಿಕೆಗಿಂತಲೂ ಶೇ.29ರಷ್ಟು ಮಳೆ ಕೊರತೆಯಾಗಿದೆ. ದ.ಕ. ಜಿಲ್ಲೆಯಲ್ಲಿ 55.90 ಮಿ.ಮೀ. ಮಳೆಯಾಗಬೇಕಿದ್ದು, ಇದುವರೆಗೆ 36.47 ಮಿ.ಮೀ. ಮಾತ್ರ ಮಳೆ ಸುರಿದಿದೆ. ಉಡುಪಿ ಜಿಲ್ಲೆಯಲ್ಲಿ 28.70 ಮಿ.ಮೀ. ಮಳೆಯಾಗಬೇಕಿದ್ದರೆ, 15.52 ಮಿ.ಮೀ.ನಷ್ಟು, ಉತ್ತರ ಕನ್ನಡ ಜಿಲ್ಲೆಯಲ್ಲಿ 21.40 ಮಿ.ಮೀ. ಮಳೆಯಾಗಬೇಕಿದ್ದು, 18.14 ಮಿ.ಮೀ. ಮಳೆ ಸುರಿದಿದೆ.
ಒಟ್ಟಾರೆ ಕರಾವಳಿಯಲ್ಲಿ ಈ ಅವಧಿಯಲ್ಲಿ 31.40 ಮಿ.ಮೀ. ಸರಾಸರಿ ಮಳೆಯಾಗಬೇಕಿತ್ತು. ಆದರೆ ಈವರೆಗೆ 22.42 ಮಿ.ಮೀ. ಮಾತ್ರ ಮಳೆ ದಾಖಲಾಗಿದೆ.
ಮಂಗಳೂರು ತಾಲೂಕಿನಲ್ಲೇ ಮಳೆ ಕಡಿಮೆ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ತಾಲೂಕುಗಳಿಗೆ ಹೋಲಿಕೆ ಮಾಡಿದರೆ ಜ. 1ರಿಂದ ಈವರೆಗೆ ಮಂಗಳೂರು ತಾಲೂಕಿನಲ್ಲಿ ಅತೀ ಕಡಿಮೆ ಮಳೆಯಾಗಿದೆ. ವಾಡಿಕೆಯಂತೆ 32.9 ಮಿ.ಮೀ. ಮಳೆಯಾಗಬೇಕಿತ್ತು. ಆದರೆ ಸುರಿದದ್ದು ಕೇವಲ 4.2 ಮಿ.ಮೀ.
ಎ.29ರಿಂದ ಮಳೆ ಸಾಧ್ಯತೆ
ಬಂಗಾಲಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದಾಗಿ ದಕ್ಷಿಣ ಒಳನಾಡು ಸಹಿತ ಕರಾವಳಿ, ಮಲೆನಾಡು ಭಾಗದಲ್ಲಿ ಎ.28ರಿಂದ ಮೂರು ದಿನಗಳ ಕಾಲ ಗಾಳಿ ಮಳೆಯಾಗುವ ಸಂಭವವಿದೆ. ಇದರ ಜತೆಗೆ ಸಮುದ್ರದಲ್ಲಿ ಅಲೆಗಳ ಒತ್ತಡವೂ ಹೆಚ್ಚಿರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಕಳೆದ ವರ್ಷ ಭರ್ಜರಿ ಮಳೆ
ಕರಾವಳಿ ಪ್ರದೇಶದಲ್ಲಿ ಕಳೆದ ವರ್ಷ ಉತ್ತಮ ಪೂರ್ವ ಮುಂಗಾರು ಮಳೆಯಾಗಿದೆ. ದ.ಕ. ಜಿಲ್ಲೆಯಲ್ಲಿ 227.1 ವಾಡಿಕೆ ಮಳೆಯ ಪೈಕಿ 616.9 ಮಿ.ಮೀ. ಸರಾಸರಿ ಮಳೆಯಾಗಿ ಶೇ.172ರಷ್ಟು ಹೆಚ್ಚಳವಾಗಿತ್ತು. ಉಡುಪಿ ಜಿಲ್ಲೆಯಲ್ಲಿ 227.3 ಮಿ.ಮೀ. ವಾಡಿಕೆ ಮಳೆ ಪೈಕಿ 396.6 ಮಿ.ಮೀ. ಮಳೆಯಾಗಿ ಶೇ.74ರಷ್ಟು ಹೆಚ್ಚಳವಾಗಿತ್ತು. ಅದೇ ರೀತಿ ಉತ್ತರ ಕನ್ನಡ ಜಿಲ್ಲೆಯಲ್ಲಿ 138.8 ಮಿ.ಮೀ. ವಾಡಿಕೆ ಮಳೆ ಪೈಕಿ 180.7 ಮಿ.ಮೀ. ಮಳೆಯಾಗಿ ಶೇ.30ರಷ್ಟು ಹೆಚ್ಚು ಮಳೆಯಾಗಿತ್ತು. ಒಟ್ಟಾರೆ ಕರಾವಳಿ ಪ್ರದೇಶದಲ್ಲಿ 178.8 ಮಿ.ಮೀ. ಮಳೆಯ ಪೈಕಿ 334.9 ಮಿ.ಮೀ. ಮಳೆಯಾಗಿ ಶೇ.87ರಷ್ಟು ಮಳೆ ಪ್ರಮಾಣ ಹೆಚ್ಚಳವಾಗಿತ್ತು.
ಹವಾಮಾನ ವೈಪರಿತ್ಯ
ಈ ಬಾರಿಯ ಪೂರ್ವ ಮುಂಗಾರಿನಲ್ಲಿ ವಾಡಿಕೆಯಂತೆ ಮಳೆಯಾಗಲಿಲ್ಲ. ಹವಾಮಾನ ವೈಪರಿತ್ಯವೂ ಇದಕ್ಕೆ ಕಾರಣ. ಸದ್ಯದ ಮಾಹಿತಿಯ ಪ್ರಕಾರ ಚಂಡಮಾರುತದ ಪ್ರಭಾವದಿಂದ ಈ ತಿಂಗಳ ಕೊನೆಯಲ್ಲಿ ಉತ್ತಮ ಮಳೆಯಾಗಬಹುದು. ಬಳಿಕ ಎರಡು ವಾರಗಳ ಕಾಲ ಮಳೆಯಾಗುವುದು ಸಂಶಯ.
- ಸುನಿಲ್ ಗವಾಸ್ಕರ್, ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ
- ನವೀನ್ ಭಟ್ ಇಳಂತಿಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Afro-Asia Cup: 2 ದಶಕಗಳ ಬಳಿಕ ಆಫ್ರೋ -ಏಷ್ಯಾ ಕಪ್?
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.