ಸುಂಕದಕಟ್ಟೆ: ಕಾರು ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ… ಚಾಲಕನಿಗೆ ಗಂಭೀರ ಗಾಯ
Team Udayavani, Dec 12, 2022, 4:55 PM IST
ಬಜಪೆ : ಅತೀ ವೇಗವಾಗಿ ಬಂದ ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ದೇವಸ್ಥಾನದ ದ್ವಾರದ ಸಮೀಪ ಬಜಪೆ -ಕೈಕಂಬ ರಾಜ್ಯ ಹೆದ್ದಾರಿ 101ರಲ್ಲಿ ಸೋಮವಾರ ನಡೆದಿದೆ.
ಮಧ್ಯಾಹ್ನ ಬಜಪೆಯಿಂದ ಕೈಕಂಬ ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಕೈಕಂಬದ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಚಾಲಕ ಕೊಳಂಬೆ ಬೈಲಿನ ಶಂಕರ ಎಂಬವರಿಗೆ ಗಂಭೀರ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸುಂಕದಕಟ್ಟೆ ದ್ವಾರ ಬಳಿ ಸ್ಪೀಡ್ ಬೇಕರ್ ಅಳವಡಿಕೆ ಅಗತ್ಯ:
ಸುಂಕದಕಟ್ಟೆ ದ್ವಾರದ ಬಳಿ ಈಗಾಗಲೇ ಹಲವಾರು ಅಪಘಾತಗಳು ಸಂಭವಿಸಿದೆ. ಈ ಹಿಂದೆ ರಸ್ತೆಯಲ್ಲಿ ಕೊಂಚ ಹುಬ್ಬುಗಳು ಇತ್ತು. ಅದರೆ ಅದನ್ನು ಈಗ ಸಮತಟ್ಟು ಮಾಡಲಾಗಿದೆ. ಕಂದಾವರ ಗ್ರಾಮ ಪಂಚಾಯತ್‌ನಿಂದ ಇಲ್ಲಿ ಸ್ಪೀಡ್ ಬ್ರೇಕರ್ ಅಳವಡಿಕೆಗೆ ಮನವಿ ಮಾಡಲಾಗಿದ್ದು ಇದಕ್ಕೆ ರಾಜ್ಯ ಹೆದ್ದಾರಿ ಸ್ಪಂದನೆ ನೀಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದರ ಸಮೀಪದಲ್ಲೇ ಶಾಲಾ, ಕಾಲೇಜು ಇರುವುದರಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಸ್ಪೀಡ್ ಬ್ರೇಕರ್ ಅಳವಡಿಕೆ ಅಗತ್ಯವಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಚಂಡೀಗಢ : ವ್ಯಕ್ತಿಯನ್ನು ಚಲಿಸುವ ಟ್ರಕ್‌ನ ಬಾನೆಟ್‌ಗೆ ಕಟ್ಟಿ ಶಿಕ್ಷೆ; ವೈರಲ್ ವಿಡಿಯೋ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.