ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಮುಷ್ಕರಕ್ಕೆ ಬೆಂಬಲ: ಮನವಿ
Team Udayavani, Jan 24, 2018, 11:27 AM IST
ಮಹಾನಗರ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಇತ್ತೀ ಚೆಗೆ ದೇಶದ ವಿವಿಧೆಡೆ ಮುಷ್ಕರ ನಡೆಸಿದ್ದು, ಅವರಿಗೆ ಬೆಂಬಲ ಸೂಚಿಸಿ ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜಿಲ್ಲೆಯ ಸಂಸದರು, ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
‘ನಾವು ಮುಷ್ಕರ ನಡೆಸಿಲ್ಲ; ಆದರೆ ಮುಷ್ಕರ ನಿರತರಿಗೆ ಬೆಂಬಲ ಸೂಚಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ
ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಮನವಿ ಸಲ್ಲಿಸಿದ್ದೇವೆ’ ಎಂದು ಸಂಘದ ರಾಜ್ಯ ಅಧ್ಯಕ್ಷೆ ಜಯಲಕ್ಷ್ಮೀ ಬಿ. ಆರ್.
ಅವರು ತಿಳಿಸಿದ್ದಾರೆ.
ಬೇಡಿಕೆ ಈಡೇರಿಕೆಗೆ ಮನವಿ
ಸರಕಾರವು ಕೆಲಸದ ಹೊರೆ ಹೊರಿಸುತ್ತಿದೆಯೇ ಹೊರತು ತಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಸರಕಾರದ ಈ
ಧೋರಣೆ ಸರಿಯಲ್ಲ; ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಅವರು ಆಗ್ರಹಿಸಿದರು.
ಮನವಿ ಸಲ್ಲಿಸಿದ ನಿಯೋಗದಲ್ಲಿ ಅಧ್ಯಕ್ಷೆ ಜಯಲಕ್ಷ್ಮೀ ಬಿ. ಆರ್., ಜಿಲ್ಲಾ ಸಂಘದ ಕಾರ್ಯದರ್ಶಿ ಚಂದ್ರಾವತಿ, ಉಪಾಧ್ಯಕ್ಷೆ ಕವಿತಾ ಪುತ್ತೂರು, ಗೌರವ ಸಲಹೆಗಾರರಾದ ಅರುಣಾ ಡಿ. ಪುತ್ತೂರು ಮತ್ತು ವಿವಿಧ ತಾಲೂಕು ಪ್ರತಿನಿಧಿಗಳು ಮೊದಲಾದವರು ಉಪಸ್ಥಿತರಿದ್ದರು.
ಬೇಡಿಕೆಗಳು
42ನೇ ಇಂಡಿಯನ್ ಲೇಬರ್ ಕಾನ್ಫರೆನ್ಸ್ ತೀರ್ಮಾನದ ಪ್ರಕಾರ ಸ್ಕೀಂ ವರ್ಕರ್‌ಗಳಿಗೆ ತಿಂಗಳಿಗೆ 18,000 ರೂ.
ವೇತನ ಹಾಗೂ 3,000 ರೂ. ಪಿಂಚಣಿ ಜಾರಿ, ಮಾತೃಪೂರ್ಣ ಯೋಜನೆಯ ಬಗ್ಗೆ ಸರಕಾರ ಸಮಗ್ರವಾಗಿ ಅಧ್ಯಯನ
ನಡೆಸಿ ಅಭಿಪ್ರಾಯ ಸಂಗ್ರಹಿಸಿ ಫಲಾನುಭವಿಗಳ ಹಿತದೃಷ್ಟಿಯಿಂದ ಈ ಮೊದಲಿನಂತೆ ಮನೆಗೆ ಆಹಾರ ವಸ್ತುಗಳನ್ನು ವಿತರಿಸುವುದು, ಮಾತೃ ವಂದನ ಕಾರ್ಯಕ್ರಮಕ್ಕೆ ಪ್ರೋತ್ಸಾಹ ಧನ ನೀಡುವುದು, ಸೇವಾ ಹಿರಿತನ ಆಧಾರದಲ್ಲಿ ವೇತನ ಹೆಚ್ಚಳ ಮಾಡುವುದು, ಆಹಾರ ತಯಾರಿಸಲು ಅಗತ್ಯವಾಗಿ ಬೇಕಾಗಿರುವ ಗ್ಯಾಸ್ ವ್ಯವಸ್ಥೆ ಮಾಡಬೇಕು ಎಂಬ ಬೇಡಿಕೆಗಳನ್ನು ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.