ಸಹಕಾರಿ ಕ್ಷೇತ್ರಕ್ಕೆ ಅವಕಾಶಕ್ಕಾಗಿ ಬೆಂಬಲಿಸಿ
ಸ್ವತಂತ್ರ ಅಭ್ಯರ್ಥಿ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಮನವಿ
Team Udayavani, Nov 17, 2021, 6:46 AM IST
ಮಂಗಳೂರು: “ವಿಧಾನ ಪರಿಷತ್‌ನಲ್ಲಿ ಸಹಕಾರಿ ಕ್ಷೇತ್ರಕ್ಕೆ ಒಂದು ಅವಕಾಶವನ್ನು ನೀಡುವ ನಿಟ್ಟಿನಲ್ಲಿ ನನ್ನನ್ನು ಬೆಂಬಲಿಸಿ ಎಂದು ಮತದಾರರಲ್ಲಿ, ಎಲ್ಲ ರಾಜಕೀಯ ಪಕ್ಷಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ’ ಎಂದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಹಕಾರಿ ನೇತಾರ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ.
ನಗರದಲ್ಲಿ ಮಂಗಳವಾರ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಚುನಾವಣ ಪ್ರಚಾರ ಕಚೇರಿ ಉದ್ಘಾಟನ ಸಮಾರಂಭದಲ್ಲಿ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದ ಮೂಲಕ ಗ್ರಾಮೀಣ ಜನರ ಅಭಿವೃದ್ಧಿಗಾಗಿ ಶ್ರಮಿಸಿದ್ದೇನೆ. ನವೋದಯ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರಿಗೆ ಸ್ವಾವಲಂಬಿ, ಸ್ವಾಭಿಮಾನಿ ಬದುಕು ಕಟ್ಟಿ ಕೊಡುವ ಕಾರ್ಯ ಆಗಿದೆ. ಮುಂದಿನ ವಿಧಾನ ಪರಿಷತ್ ಚುನಾವಣೆಯಲ್ಲೂ ಇದೇ ರೀತಿ ನನ್ನನ್ನು ಬೆಂಬಲಿಸಿ ಎಂದವರು ಹೇಳಿದರು.
ಕಚೇರಿಯ ಉದ್ಘಾಟನೆ ಸಮಾರಂಭದಲ್ಲಿ ಪುರೋಹಿತ ರಮೇಶ್ ಭಟ್, ಫಾ| ರವಿ ಸಂತೋಷ್ ಕಾಮತ್, ಧರ್ಮಗುರು ಮೊಹಮ್ಮದ್ ಕಾಮಿಲ್ ಸಖಾಫಿ ಭಾಗವಹಿಸಿ ಶುಭ ಹಾರೈಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, ಸಮಾಜದಲ್ಲಿ ಅಶಕ್ತರು, ಬಡವರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಡಾ| ಎಂ.ಎನ್. ಆರ್. ಅವರು ಒಕ್ಕೂಟದ ಸಮಾಜ ಸೇವಾ ಕಾರ್ಯಗಳಿಗೆ ಸದಾ ನೆರವು ನೀಡುತ್ತ ಬಂದಿದ್ದಾರೆ ಎಂದರು.
ಕಂಬಳ ಆಕಾಡೆಮಿಯ ಅಧ್ಯಕ್ಷ ಗುಣಪಾಲ ಕಡಂಬ ಅವರು ಮಾತನಾಡಿ, ಸಹಕಾರಿ ಕ್ಷೇತ್ರಕ್ಕೆ ವಿಧಾನ ಪರಿಷತ್‌ನಲ್ಲಿ ಪ್ರಾತಿನಿಧ್ಯ ಸಿಗುವ ನಿಟ್ಟಿನಲ್ಲಿ ಡಾ| ಎಂ.ಎನ್. ಆರ್. ಅವರನ್ನು ಬೆಂಬಲಿಸಿ ಎಂದರು. ಉಡುಪಿ ಜಿ. ಪಂ. ಮಾಜಿ ಅಧ್ಯಕ್ಷ ರಾಜು ಪೂಜಾರಿ ಅವರು ಮಾತನಾಡಿ, ಚುನಾವಣೆಯಲ್ಲಿ ಗೆಲ್ಲುವ ಮೂಲಕ ಡಾ| ಎಂ. ಎನ್. ಆರ್. ಅವರು ಪಂಚಾಯತ್‌ರಾಜ್ ವ್ಯವಸ್ಥೆ ಹಾಗೂ ನಗರಾಡಳಿತ ಸಂಸ್ಥೆಗಳಿಗೆ ಶಕ್ತಿ ತುಂಬಲಿದ್ದಾರೆ ಎಂಬ ವಿಶ್ವಾಸ ಹೊಂದಿದ್ದೇವೆ ಎಂದರು.
ಇದನ್ನೂ ಓದಿ:ನೌಕಾಪಡೆಗೆ ಕ್ಷಿಪಣಿ ನಿಗ್ರಹ, ಜಲಾಂತರ್ಗಾಮಿ ಶಕ್ತಿ
ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನ ಸಂಚಾಲಕ ಸುಂದರ ಮಾಸ್ತರ್ ಅವರು ಮಾತನಾಡಿ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರು ವಿಧಾನ ಪರಿಷತ್‌ಗೆ ಆಯ್ಕೆಯಾಗುವುದು, ಸಹಕಾರಿ, ಗ್ರಾಮೀಣಾಭಿವೃದ್ಧಿಗೆ ಮಾತ್ರವಲ್ಲದೆ ಈ ವರ್ಗಕ್ಕೂ ಅವಶ್ಯವಾಗಿದೆ ಎಂದರು.
ಉಡುಪಿ ಜಿಲ್ಲಾ ಚುನಾವಣ ಉಸ್ತುವಾರಿ ಜಯಕರ ಶೆಟ್ಟಿ ಇಂದ್ರಾಳಿ, ಈಶ್ವರ ಭಟ್ ಪುತ್ತೂರು, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಬಿಲ್ಲವ ಮುಖಂಡ ವೈ. ಸುಧೀರ್ ಕುಮಾರ್ ಮಾತನಾಡಿದರು. ಎಸ್‌ಸಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಜಿ. ಪಂ. ಮಾಜಿ ಸದಸ್ಯರಾದ ಪದ್ಮಶೇಖರ ಜೈನ್, ಬಿ. ನಿರಂಜನ್, ಉದ್ಯಮಿಗಳಾದ ರೋಹನ್ ಮೊಂತೋರೊ, ಲಕ್ಷ್ಮೀಶ ಭಂಡಾರಿ, ಇನ್‌ಲ್ಯಾಂಡ್ ಓರ್ನೆಟ್‌ನ ಮಾಲಕ, ಉದ್ಯಮಿ ಸಿರಾಜ್ ಅಹಮ್ಮದ್, ಕೆ.ಪಿ.ಥೋಮಸ್ ಮತ್ತಿತರರು ಉಪಸ್ಥಿತರಿದ್ದರು.
ಎಲ್ಲರ ಗೆಲುವು
ಎಲ್ಲರ ಬೆಂಬಲದೊಂದಿಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ. ಪಂಚಾಯತ್‌ರಾಜ್ ವ್ಯವಸ್ಥೆ, ನಗರಾಡಳಿತ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ಹೇಳಿದ ಡಾ| ರಾಜೇಂದ್ರ ಕುಮಾರ್ ಅವರು ನ. 22 ರಂದು ನಾಮಪತ್ರ ಸಲ್ಲಿಸಲಿದ್ದೇನೆ ಎಂದರು.
ಚುನಾವಣ ಉಸ್ತುವಾರಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ದ.ಕ. ಜಿಲ್ಲಾ ಚುನಾವಣ ಉಸ್ತುವಾರಿ ಶಶಿಕುಮಾರ್ ರೈ ಬಾಲೊÂಟ್ಟು ವಂದಿಸಿದರು. ಆರ್‌ಜೆ ಪ್ರಸನ್ನ ಅವರು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.