ಕೃಷ್ಣಾಪುರ: ಅಂಗಡಿಗೆ ನುಗ್ಗಿ ಮಾಲಕನ ಹತ್ಯೆ


Team Udayavani, Dec 25, 2022, 12:31 AM IST

ಕೃಷ್ಣಾಪುರ : ಅಂಗಡಿಗೆ ನುಗ್ಗಿ ಮಾಲಕನ ಹತ್ಯೆ

ಸುರತ್ಕಲ್‌: ಇಲ್ಲಿಗೆ ಸಮೀಪದ ಕೃಷ್ಣಾಪುರದ ಐದನೇ ಬ್ಲಾಕ್‌ನ ಫ್ಯಾನ್ಸಿ ಸ್ಟೋರ್‌ ಮಾಲಕ ಜಲೀಲ್‌(42) ಅವರಿಗೆ ಶನಿವಾರ ರಾತ್ರಿ ದುಷ್ಕರ್ಮಿಗಳಿಬ್ಬರು ಚೂರಿಯಿಂದ ಇರಿದಿದ್ದು, ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ರಾತ್ರಿ 8.30ರ ಸುಮಾರಿಗೆ ಗ್ರಾಹಕರ ಸೋಗಿನಲ್ಲಿ ಇಬ್ಬರು ಯುವಕರು ಅಂಗಡಿಗೆ ಬಂದಿದ್ದರು. ಓರ್ವ ಮಾಸ್ಕ್ ಧರಿಸಿದ್ದು, ಇನ್ನೋರ್ವ ಟವೆಲನ್ನು ಮುಖಕ್ಕೆ ಕಟ್ಟಿಕೊಂಡಿದ್ದ ಎನ್ನಲಾಗಿದೆ. ಕೃತ್ಯ ನಡೆಸಿ ದೂರದಲ್ಲಿ ನಿಲ್ಲಿಸಿದ್ದ ಬೈಕಿನಲ್ಲಿ ಪರಾರಿಯಾದರು.

ಓಡಿ ಬಂದು ಬಿದ್ದ ಜಲೀಲ್‌
ಇರಿತಕ್ಕೆ ಒಳಗಾದ ಜಲೀಲ್‌
ಬೊಬ್ಬೆ ಹಾಕಿ ಸಮೀಪದ ಅಂಗಡಿ ಯತ್ತ ಓಡುತ್ತಾ ಬರುತ್ತಿದ್ದಾಗಲೇ ಕುಸಿದು ಬಿದ್ದರು. ಕೂಡಲೇ ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ಕರೆದೊ ಯ್ಯಲಾಯಿತು. ಅಲ್ಲಿ ಕೆಲವೇ ಹೊತ್ತಿನಲ್ಲಿ ಅವರು ಮೃತಪಟ್ಟರು.
ಕೃಷ್ಣಾಪುರ 9ನೇ ಬ್ಲಾಕ್‌ ನಿವಾಸಿ ಯಾಗಿದ್ದ ಜಲೀಲ್‌ ಪತ್ನಿಯನ್ನು ಅಗಲಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಮಂಗಳೂರಿಗೆ ಸಾಗಿಸಲಾಗಿದೆ.

ಕಮಿಷನರ್‌ ಭೇಟಿ
ಆಸ್ಪತ್ರೆ ಹಾಗೂ ಘಟನ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಪ್ರತ್ಯಕ್ಷದರ್ಶಿ ಗಳಿಂದ ಮಾಹಿತಿ ಪಡೆದುಕೊಂಡರು. ಮಾಧ್ಯಮದೊಂದಿಗೆ ಮಾತನಾ ಡಿದ ಅವರು, ಘಟನೆಗೆ ಕಾರಣ ಏನೆಂಬುದು ತನಿಖೆಯಿಂದ ತಿಳಿದು ಬರಬೇಕಿದೆ ಎಂದರು.

ಸಿಸಿ ಕೆಮರಾ ಇಲ್ಲ
ಘಟನ ಸ್ಥಳದಲ್ಲಿ ಸಿಸಿ ಕೆಮರಾ ಇಲ್ಲದಿರುವುದರಿಂದ ತತ್‌ಕ್ಷಣಕ್ಕೆ ಆರೋಪಿಗಳ ಮಾಹಿತಿ ಲಭ್ಯವಾಗಿಲ್ಲ. ಆದರೆ ಹತ್ತಿರದಲ್ಲಿರುವ ಇತರ ಸಿಸಿ ಟಿವಿಗಳ ಫ‌ೂಟೇಜ್‌ ಪರಿಶೀಲನೆ ನಡೆಯುತ್ತಿದ್ದೆ. ಅಲ್ಲಿ ಸಿಗುವ ಮಾಹಿತಿಯಂತೆ ಆರೋಪಿಗಳ ಪತ್ತೆಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕಮಿಷನರ್‌ ತಿಳಿಸಿದರು.

ಪರಿಸ್ಥಿತಿ ಶಾಂತ
ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ. ಬಿಗು ಬಂದೋ ಬಸ್ತ್ ಗೆ ಕ್ರಮ ಕೈಗೊಳ್ಳಲಾಗಿದೆ. ಅಗತ್ಯವಿದ್ದಲ್ಲಿ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಸ್ಥಳೀಯವಾಗಿ ಪಣಂಬೂರು ಉಪವಿಭಾಗ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ಜಾರಿಗೊಳಿಸಲಾಗುವುದು.

ಕ್ರಿಸ್ಮಸ್‌ ಹಬ್ಬ ಆಚರಣೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಯಾವುದೇ ತಪ್ಪು ಮಾಹಿತಿ, ಸಂದೇಶಗಳಿಗೆ ಕಿವಿಗೊಡಬಾರದು. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಲಾಖೆಯೊಂದಿಗೆ ಸಹಕರಿಸಬೆಕು ಎಂದು ಮನವಿ ಮಾಡಿದರು.

ಘಟನ ಸ್ಥಳಕ್ಕೆ ಮಾಜಿ ಶಾಸಕ ಮೊದೀನ್‌ ಬಾವಾ, ಜಿಲ್ಲಾ ವಕ್ಫ್ ಆಧ್ಯಕ್ಷ ನಾಸೀರ್‌ ಲಕ್ಕೀಸ್ಟಾರ್‌, ಆಸ್ಪತ್ರೆಗೆ ಸಮುದಾಯದ ಧರ್ಮಗುರುಗಳು ಭೇಟಿ ನೀಡಿ ಪೊಲೀಸ್‌ ಆಯುಕ್ತರೊಂದಿಗೆ ಘಟನೆಯ ಕುರಿತು ಚರ್ಚಿಸಿದರು. ಘಟನೆಯನ್ನು ದ.ಕ. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಖಂಡಿಸಿದ್ದು. ಆರೋಪಿಗಳ ಶೀಘ್ರ ಪತ್ತೆಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೃಷ್ಣಾಪುರಕೊಲೆ ಪ್ರಕರಣ ಹಿನ್ನೆಲೆ: ಇಂದು ಬೆಳಗ್ಗೆ 6 ರಿಂದ ಡಿ.27ರ ಬೆಳಗ್ಗೆ 6 ರವರೆಗೆ ಸುರತ್ಕಲ್, ಪಣಂಬೂರು, ಬಜಪೆ, ಕಾವೂರು ಠಾಣಾ ವ್ಯಾಪ್ತಿಗಳಲ್ಲಿ ಸೆಕ್ಷನ್‌144 ನಂತೆ ನಿಷೇಧಾಜ್ಞೆ ಜಾರಿ.

ಟಾಪ್ ನ್ಯೂಸ್

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.