ಸುರತ್ಕಲ್: ಸ್ಥಳೀಯ ಖಾಸಗಿ ವಾಹನಗಳಿಂದ ಸುಂಕ ವಸೂಲಿಗೆ ತಡೆ
ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ, ಪಕ್ಷಗಳ ಹೋರಾಟಕ್ಕೆ ತಾತ್ಕಾಲಿಕ ಗೆಲುವು
Team Udayavani, Jul 17, 2019, 5:45 AM IST
ಸುರತ್ಕಲ್: ವಿವಿಧ ಪಕ್ಷಗಳ ಹಾಗೂ ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿಯ ಹೋರಾಟಕ್ಕೆ ಮಣಿದು ಹಾಗೂ ಜಿಲ್ಲಾ
ಉಸ್ತುವಾರಿ ಸಚಿವರ ಮನವಿ ಮೇರೆಗೆ ಜಿಲ್ಲಾಧಿಕಾರಿ ಅವರು ಖಾಸಗಿ ಕಾರುಗಳಿಗೆ ಸುಂಕ ವಸೂಲಿಗೆ 3 ದಿನಗಳ ತಡೆ ನೀಡಿದ್ದಾರೆ.
ಮಂಗಳವಾರ ಸುರತ್ಕಲ್ ಟೋಲ್ ಪ್ಲಾಜಾದಲ್ಲಿ ಕೆಎ19 ಖಾಸಗಿ ವಾಹನಗಳಿಗೂ ಸುಂಕ ವಸೂಲಿ ವಿರೋಧಿಸಿ ಮಂಗಳವಾರ ಬೆಳಗ್ಗೆ 7ಕ್ಕೆ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಅದೇ ವೇಳೆಗೆ ಹೋರಾಟ ಸಮಿತಿ ಸದಸ್ಯರೂ ಆಗಮಿಸಿ ಟೋಲ್‌ಗೇಟ್ ಮುಂಭಾಗ ಜಮಾಯಿಸಿದರು. ಸಮಿತಿಯು ಉಸ್ತುವಾರಿ ಸಚಿವರಿಗೆ ದೂರವಾಣಿ ಮೂಲಕ ಟೋಲ್‌ಗೇಟ್‌ನಲ್ಲಿನ ಬೆಳವಣಿಗೆ
ತಿಳಿಸಿದ ಬಳಿಕ ಸಚಿವ ಖಾದರ್ ಅವರು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಯಥಾಸ್ಥಿತಿ ಮುಂದುವರಿಸುವಂತೆ ಸೂಚಿಸಿದ ಮೇರೆಗೆ ಜಿಲ್ಲಾಧಿಕಾರಿಯವರು ಗುತ್ತಿಗೆದಾರರೊಂದಿಗೆ ಮಾತುಕತೆ ನಡೆಸುವ ಮೂಲಕ ಸುಂಕ ಪಡೆಯದಂತೆ ತಡೆದರು.
9.30ರ ಸುಮಾರಿಗೆ ಪೊಲೀಸ್ ಅಧಿಕಾರಿಗಳ ಸಮ್ಮುಖ ಹೋರಾಟ ಸಮಿತಿಯವರನ್ನು ಭೇಟಿಯಾದ ಟೋಲ್ ಗುತ್ತಿಗೆದಾರರ ಪ್ರತಿನಿಧಿಗಳು ಜಿಲ್ಲಾಡಳಿತದ ಸೂಚನೆ ವರೆಗೆ ಸುಂಕ ಸಂಗ್ರಹಿಸುವುದಿಲ್ಲ ಎಂದು ಭರವಸೆ ನೀಡಿದರು.
ಟೋಲ್‌ಗೇಟ್ ವಿರೋಧಿ ಹೋರಾಟ
ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಪುರುಷೋತ್ತಮ ಚಿತ್ರಾಪುರ, ರೇವತಿ ಪುತ್ರನ್, ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮಿ¤ಯಾಜ್, ಮುಖಂಡರಾದ ಶ್ರೀನಾಥ್ ಕುಲಾಲ್, ಅಜ್ಮಲ್ ಅಹ್ಮದ್, ಮಕ್ಸೂದ್ ಬಿ.ಕೆ., ಮೂಲ್ಕಿ ಅಭಿವೃದ್ಧಿ ನಾಗರಿಕ ಸಮಿತಿಯ ಅಧ್ಯಕ್ಷ ಹರೀಶ್ ಪುತ್ರನ್, ಪದಾ ಧಿಕಾರಿಗಳಾದ ಧನಂಜಯ ಮಟ್ಟು, ವಸಂತ ಬೆರ್ನಾಡ್, ಶಶಿಕಾಂತ್ ಶೆಟ್ಟಿ, ಶಾಲೆಟ್ ಪಿಂಟೊ, ಇಂಟಕ್ ಮುಖಂಡರಾದ ಸದಾಶಿವ ಶೆಟ್ಟಿ, ಚಿತ್ತರಂಜನ್ ಶೆಟ್ಟಿ ಹೋರಾಟ ಸಮಿತಿಯ ಪ್ರಮುಖರಾದ ರಮೇಶ್ ಟಿ.ಎನ್., ರಶೀದ್ ಮುಕ್ಕ, ಮೂಸಬ್ಬ ಪಕ್ಷಿಕೆರೆ, ಹರೀಶ್ ರಾವ್ ಪೇಜಾವರ, ಪ್ರಭಾಕರ ಶೆಟ್ಟಿ, ರಾಜೇಶ್ ಶೆಟ್ಟಿ ಪಡ್ರೆ, ಸಲೀಂ ಶ್ಯಾಡೋ ಮೊದಲಾದವರು ಉಪಸ್ಥಿತರಿದ್ದರು.
ಏಕಕಾಲದಲ್ಲಿ ಪ್ರತಿಭಟನೆ
ಬಿಜೆಪಿ ಹಾಗೂ ಸುರತ್ಕಲ್ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಏಕಕಾಲದಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದವು. ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ನಿರೀಕ್ಷೆಯಿದ್ದುದರಿಂದ ಎಸಿಪಿ ಶ್ರೀನಿವಾಸ ಗೌಡ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.