ಸುರತ್ಕಲ್ ನಲ್ಲಿ ದಾಳಿಗೊಳಗಾಗಿದ್ದ ಯುವಕ ಸಾವು; ಸೆಕ್ಷನ್ 144 ಜಾರಿ
ಮಂಗಳೂರಿಗೆ ಹೆಚ್ಚುವರಿ ಪೊಲೀಸರು; ಸುಳ್ಳು ಸುದ್ದಿ ಹರಡುವುದು ಬೇಡ: ಪೊಲೀಸ್ ಕಮಿಷನರ್
Team Udayavani, Jul 28, 2022, 9:23 PM IST
ಮಂಗಳೂರು : ಸುರತ್ಕಲ್ ನ ಹೃದಯ ಭಾಗದಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳಿಂದ ಮಾರಕಾಯುಧಗಳಿಂದ ದಾಳಿಗೊಳಗಾದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದು, ಕೋಮು ಉದ್ವಿಗ್ನತೆ ಇನ್ನಷ್ಟು ತೀವ್ರವಾಗಿದ್ದು, ವ್ಯಾಪಕ ಕಟ್ಟೆಚ್ಚರ ವಹಿಸಲಾಗುತ್ತಿದೆ.
ಮಂಗಳ ಪೇಟೆಯ ಫಾಝಿಲ್ (23) ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿತ್ತು. ನಾಳೆ ಹುಟ್ಟು ಹಬ್ಬದ ಆಚರಣೆಗೆಂದು ಚಪ್ಪಲಿ ಮತ್ತು ಸ್ಮಾರ್ಟ್ ವಾಚ್ ಖರೀದಿಗೆ ಬಂದಿದ್ದ ಫಾಝಿಲ್ ಮೇಲೆ ರಾತ್ರಿ ಅಂಗಡಿಯ ಎದುರಿನ ಜಗಲಿಯಲ್ಲೇ ಮಾರಕಾಯುಧಗಳಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾಧ್ಯವಾಗಲಿಲ್ಲ.
ಭಾರೀ ಪ್ರಮಾಣದಲ್ಲಿ ರಕ್ತ ಸ್ರಾವ ವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಫಾಝಿಲ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಮೊಯಿದ್ದೀನ್ ಬಾವಾ, ನಾಲ್ವರು ದುಷ್ಕರ್ಮಿಗಳು ಬಿಳಿ ಕಾರಿನಲ್ಲಿ ಬಂದು ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುತ್ತಿದ್ದು, ಪೊಲೀಸರು ಭಾರಿ ಕಟ್ಟೆಚ್ಚರ ವಹಿಸಿದ್ದಾರೆ. ಸಿಎಂ ಮಂಗಳೂರಿಗೆ ಭೇಟಿ ನೀಡಿ ಪ್ರವೀಣ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಬೆಂಗಳೂರಿಗೆ ವಾಪಾಸಾಗುವ ಮುನ್ನವೇ ಕರಾವಳಿಯಲ್ಲಿ ನೆತ್ತರು ಹರಿದಿರುವುದು ಕಾನೂನು ಸುವ್ಯವಸ್ಥೆಯ ಕುರಿತು ಪ್ರಶ್ನೆ ಮೂಡಿಸುವಂತೆ ಮಾಡಿದೆ.
ಸುಳ್ಳು ಸುದ್ದಿ ಹರಡುವುದು ಬೇಡ
ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಜಪೆ, ಪಣಂಬೂರು, ಮುಲ್ಕಿ ಮತ್ತು ಸುರತ್ಕಲ್ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗಿನ ವರೆಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ರಾತ್ರಿ 8 ಗಂಟೆ ಸಮಯದಲ್ಲಿ ಕೃತ್ಯ ನಡೆದಿದ್ದು, ಇದಕ್ಕೆ ಕಾರಣರಾದವರನ್ನು ಆದಷ್ಟು ಬೇಗ ತನಿಖೆ ಮಾಡಿ ಪತ್ತೆ ಹಚ್ಚಲಾಗುತ್ತದೆ. ಸುಳ್ಳು ಸುದ್ದಿ ಹರಡುವುದು ಬೇಡ , ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರತ್ಯಕ್ಷ ದರ್ಶಿಗಳೊಂದಿಗೆ ಮಾತನಾಡಿ, ಆಸ್ಪತ್ರೆಗೂ ಭೇಟಿ ನೀಡಿದ್ದೇನೆ, ಯಾವೊಂದು ಕಾರಣಕ್ಕೆ ಕೃತ್ಯ ನಡೆದಿದೆ ಎನ್ನುವುದು ಸ್ಪಷ್ಟ ಇಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.