ಸುರತ್ಕಲ್ ಮಾರುಕಟ್ಟೆ ಬಂದ್, ಪ್ರತಿಭಟನೆ
Team Udayavani, Dec 14, 2017, 10:42 AM IST
ಸುರತ್ಕಲ್: ತಮ್ಮನ್ನು ಯಾವುದೇ ಮುನ್ಸೂಚನೆ ನೀಡದೆ ಮೂಲ ಸೌಕರ್ಯಗಳಿಲ್ಲದ ತಾತ್ಕಾಲಿಕ ಶೆಡ್‌ಗಳಿಗೆ ಸ್ಥಳಾಂತರಿಸಲು ಮನಪಾ ಆಯುಕ್ತರು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಸುರತ್ಕಲ್ ಹಳೆ ಮಾರುಕಟ್ಟೆ ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬುಧವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಕೃಷ್ಣ ಜೆ. ಪಾಲೆಮಾರ್, ಮಾರುಕಟ್ಟೆ ಕಾಮಗಾರಿಗೆ ಇನ್ನೂ ಅನುದಾನ ಬಿಡುಗಡೆಯಾಗಿಲ್ಲ. ಸರಿಯಾದ ನೀಲಿನಕಾಶೆ ರೂಪಿಸಲಾಗಿಲ್ಲ. ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಮಾರುಕಟ್ಟೆ ಕೋಳಿಗೂಡಿನಂತಿದ್ದು, ವ್ಯಾಪಾರಕ್ಕೆ ಯೋಗ್ಯವಾಗಿಲ್ಲ. ನೂತನ ಮಾರುಕಟ್ಟೆ ನಿರ್ಮಾಣಕ್ಕಾಗಿ ಅವಸರ ಮಾಡುತ್ತಿರುವುದನ್ನು ನೋಡಿದರೆ ಇದರ ಹಿಂದೆ ಲಾಬಿ ಇರುವ ಸಂಶಯವಿದೆ ಹಾಗೂ ಹಳೆ ವ್ಯಾಪಾರಿಗಳಿಗೆ ಮತ್ತೆ ನೆಲೆ ಸಿಗುವ ಬಗ್ಗೆಯೂ ಅನುಮಾನವಿದೆ ಎಂದರು.
ಭರವಸೆ ನೀಡಿ: ಶೆಟ್ಟಿ
ಮಾಜಿ ಶಾಸಕ ವಿಜಯ್ ಕುಮಾರ್ ಶೆಟ್ಟಿ ಮಾತನಾಡಿ, ಮನಪಾ ಆಯುಕ್ತರು ಅಂಗಡಿ ತೆರವು ಮಾಡುವ ಮುನ್ನ ವ್ಯಾಪಾರಿಗಳ ಬೇಡಿಕೆಗಳನ್ನು ಆಲಿಸಬೇಕಾಗಿದೆ. ಸ್ಥಳಾಂತರಕ್ಕೆ ಮೊದಲು ಸಮಯಾವಕಾಶ ನೀಡಿ ಲಿಖೀತ ನೋಟಿಸ್ ಮತ್ತು ಹೊಸ ಮಾರುಕಟ್ಟೆಯಲ್ಲಿ ಮಳಿಗೆ ಒದಗಿಸುವ ಭರವಸೆ ನೀಡಬೇಕು ಎಂದು ಹೇಳಿದರು.
ವ್ಯಾಪಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ: ಸತ್ಯಜಿತ್
ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್ ಮಾತನಾಡಿ, ವ್ಯಾಪಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಸೌಜನ್ಯವನ್ನು ಶಾಸಕರಾಗಲಿ, ಪಾಲಿಕೆಯಾಗಲಿ ತೋರಿಸಿಲ್ಲ. ಸಮಗ್ರ ಅಭಿವೃದ್ಧಿ ಕಾಮಗಾರಿ ಕುರಿತು ಮಾಹಿತಿಯನ್ನೂ ನೀಡದೆ ವ್ಯಾಪಾರಿಗಳನ್ನು ಕತ್ತಲಲ್ಲಿಡಲಾಗಿದೆ. ಮೀನು ವ್ಯಾಪಾರಿಗಳಿಗೆ ಸರಿಯಾದ ವ್ಯವಸ್ಥೆಯಿಲ್ಲ ಎಂದು ಆರೋಪಿಸಿದರು. ಸಭೆಯಲ್ಲಿ ವ್ಯಾಪಾರಿಗಳ ಬೇಡಿಕೆಯನ್ನು ಮಂಡಿಸಿ ಹಕ್ಕೊತ್ತಾಯ ಮಾಡಲಾಯಿತು.
ಬೇಡಿಕೆಗಳ ಪಟ್ಟಿ
ಅವ್ಯವಸ್ಥಿತ ತಾತ್ಕಾಲಿಕ ಮಾರುಕಟ್ಟೆಯನ್ನು ಸರಿಪಡಿಸಬೇಕು, ಅಂಗಡಿಗಳ ಬಾಗಿಲು ಸಮಸ್ಯೆಯನ್ನು ಸರಿಪಡಿಸಬೇಕು, ಹೊಸ ಮಾರುಕಟ್ಟೆಯಲ್ಲಿ ತಮ್ಮ ಅಂಗಡಿ ಜಾಗವನ್ನು ಗುರುತಿಸಬೇಕು ಮುಂತಾದ ಹಲವು ಬೇಡಿಕೆಗಳನ್ನು ವ್ಯಾಪಾರಿಗಳು ಮುಂದಿರಿಸಿದರು. ಇವುಗಳು ಈಡೇರಿದರೆ ಸ್ಥಳಾಂತರಕ್ಕೆ ಸಿದ್ಧ ಎಂದು ಅವರು ಹೇಳಿದರು.
ಬಿಜೆಪಿ ಮಂಗಳೂರು ಉತ್ತರ ಘಟಕದ ಅಧ್ಯಕ್ಷ ಡಾ| ಭರತ್ ಶೆಟ್ಟಿ ವೈ., ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಮಾರುಕಟ್ಟೆ ವ್ಯಾಪಾರಸ್ಥರ ಸಂಘದ ಫಾರೂಕ್, ಸಂತೋಷ್ ಶೆಟ್ಟಿ, ವ್ಯಾಪಾರಿಗಳಾದ ವಸಂತ್ ಹೊಸಬೆಟ್ಟು, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ವರುಣ್ ಚೌಟ, ಉಮೇಶ್ ದೇವಾಡಿಗ ಇಡ್ಯಾ, ನಯನಾ ಶ್ರೀಯಾನ್ ಮತ್ತಿತರರು ಉಪಸ್ಥಿತರಿದ್ದರು.
ಮಾರುಕಟ್ಟೆ ಬಂದ್!
ಬುಧವಾರ ಸುರತ್ಕಲ್‌ನಲ್ಲಿ ಸಂತೆ ವ್ಯಾಪಾರ ಸ್ಥಗಿತಗೊಳಿಸಿ ಮುಡಾ ಸಹಿತ ಎಲ್ಲ ಮಾರುಕಟ್ಟೆಯಲ್ಲಿ ವ್ಯಾಪಾರ ನಡೆಸದಿರಲು ತೀರ್ಮಾನಿಸಿ ಬಂದ್ ಮಾಡಲಾಗಿತ್ತು. ಬೆಳಗ್ಗೆಯಿಂದಲೇ ಅಂಗಡಿ ಮಾಲಕರು ಸ್ವಯಂಪ್ರೇರಿತರಾಗಿ ಅಂಗಡಿ ಬಂದ್ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಪ್ರತಿಭಟನೆ ಬಳಿಕ ಸುರತ್ಕಲ್‌ನಲ್ಲಿರುವ ಮನಪಾ ಉಪ ಕಚೇರಿಯಲ್ಲಿ ಕಮಿಷನರ್‌ಗೆ ಮನವಿ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.