ಸುರತ್ಕಲ್ : ಕುಡಿದ ಮತ್ತಿನಲ್ಲಿ ಸರಣಿ ಅಪಘಾತ ; ಹಲವರಿಗೆ ಗಾಯ, ವಾಹನಗಳು ಜಖಂ
Team Udayavani, Jun 1, 2022, 11:25 PM IST
ಪಣಂಬೂರು : ಬುಧವಾರ ರಾತ್ರಿ ಪಣಂಬೂರು ಕಡೆಯಿಂದ ಎಂಆರ್‌ಪಿಎಲ್ ಕಡೆಗೆ ಹೋಗುತ್ತಿದ್ದ 16 ಚಕ್ರಗಳ ಟ್ರಕ್‌ಅನ್ನು ಅದರ ಚಾಲಕ ಕುಡಿದ ಮತ್ತಿನಲ್ಲಿ ಅತೀವೇಗವಾಗಿ ಯದ್ವಾತದ್ವ ಚಲಾಯಿಸಿಕೊಂಡು ಬಂದು ಕಾರು, ಬೈಕ್ ಹಾಗೂ ರಿಕ್ಷಾ ವೊಂದಕ್ಕೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ.
ಸುರತ್ಕಲ್ ಸಮೀಪದ ಕಾನ ಬಳಿ ಪೊಲೀಸರು ಹಾಗೂ ಸಾರ್ವಜನಿಕರು ಬೆನ್ನಟ್ಟಿ ಲಾರಿಯನ್ನು ಪತ್ತೆ ಹಚ್ಚಿ ಚಾಲಕನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಚಾಲಕ ಕೈಲಾಶ್ ಪಾಟೀಲ್ (42) ನನ್ನು ಬಂಧಿಸಲಾಗಿದೆ. ಕ್ಲೀನರ್ ಪರಾರಿಯಾಗಿದ್ದಾನೆ.
ಸುರತ್ಕಲ್ ಜಂಕ್ಷನ್‌ನಲ್ಲಿ ದ್ವಿಚಕ್ರ ಸವಾರನಿಗೆ ಢಿಕ್ಕಿ ಹೊಡೆದು ಬಳಿಕ ಪೊಲೀಸ್ ಪಟ್ರೋಲ್ ವಾಹನಕ್ಕೆ ಗುದ್ದಿದ್ದಾನೆ. ಈ ವೇಳೆ ಲಾರಿ ನಿಲ್ಲಿಸದೆ ಕಾನದತ್ತ ಪಲಾಯನವಾಗುವ ಸಂದರ್ಭ ಸುರತ್ಕಲ್ ರೈಲ್ವೇ ಬ್ರಿಡ್ಜ್ ಬಳಿ ರಿಕ್ಷಾಕ್ಕೆ ಢಿಕ್ಕಿ ಹೊಡೆಸಿದ್ದಾನೆ ಪರಿಣಾಮ ರಿಕ್ಷಾ ಪಲ್ಟಿಯಾಗಿ ಮೂವರಿಗೆ ಗಾಯವಾಗಿತ್ತು. ಇದಕ್ಕೂ ಮುನ್ನ ಬೈಕಂಪಾಡಿ ಹಾಗೂ ಸುರತ್ಕಲ್ ಬಸ್ ನಿಲ್ದಾಣದ ಬಳಿ ಕಾರಿಗೆ ಢಿಕ್ಕಿ ಹೊಡೆದಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕಾರು ಮಾರಾಟದಲ್ಲಿ ಗಣನೀಯ ಏರಿಕೆ; ಕಂಪನಿಗಳಲ್ಲಿ ಒಡಮೂಡಿದ ಹೊಸ ಉತ್ಸಾಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
BBK11: ದಯವಿಟ್ಟು ಬಿಗ್ ಬಾಸ್ ಮನೆಯಿಂದ ಹೋಗು.. ಚೈತ್ರಾಗೆ ಕೈಮುಗಿದು ಕೇಳಿಕೊಂಡ ರಜತ್
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Manipal: ಅಪಘಾತ ತಡೆಯಲು ಹೀಗೆ ಮಾಡಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.