ಗೋ ಹತ್ಯೆ ವಿರುದ್ಧ ಆಸ್ತಿ ಮುಟ್ಟುಗೋಲು ಅಸ್ತ್ರ
Team Udayavani, Oct 28, 2022, 7:25 AM IST
ಸುರತ್ಕಲ್: ಉತ್ತರ ಪ್ರದೇಶದ ಯೋಗಿ ಸರಕಾರದ ಆಡಳಿತದ ಮಾದರಿಯಲ್ಲೇ ರಾಜ್ಯದಲ್ಲೂ ಅಕ್ರಮ ಗೋ ಹತ್ಯೆ ದಂಧೆಕೋರರಿಗೆ ಆಸ್ತಿ ಮುಟ್ಟುಗೋಲಿನ ಬಿಸಿ ತಟ್ಟಿದೆ.
ಕಂದಾಯ ಇಲಾಖೆಯು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರ ಕಲಾಂ 8 (4) ಅಡಿಯಲ್ಲಿ ಗಂಜಿಮಠದ ಯೂಸುಫ್, ಅರ್ಕುಳದ ಬಾತೀಶ್, ಕಾಟಿಪಳ್ಳದ ಹಕೀಂ ಅವರ ಜಾಗವನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಹಟ್ಟಿಯಿಂದ ದನ ಕಳ್ಳತನ, ಅಕ್ರಮ ವಧೆ ವಿರುದ್ಧ ಎರಡು ತಿಂಗಳ ಹಿಂದೆ ಜಾರಿಯಾದ ಗೋ ಹತ್ಯೆ ಪ್ರತಿಬಂಧಕ ಕಾನೂನಿಂತೆ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಶಾಸಕ ಡಾ| ಭರತ್ ಶೆಟ್ಟಿ ವೈ. ಸೂಚನೆ ನೀಡಿದ್ದರು. ಅದರಂತೆ ಸಹಾಯಕ ಆಯುಕ್ತ ಮದನಮೋಹನ್ ಮುಟ್ಟುಗೋಲು ಹಾಕಿಕೊಂಡು ಆ ಜಾಗವನ್ನು ಮಾರಾಟ ಮಾಡದಂತೆ, ಬಾಡಿಗೆ ಹಾಗೂ ಯಾವುದೇ ಚಟುವಟಿಕೆ ನಡೆಸದಂತೆ ಕ್ರಮ ಕೈಗೊಂಡಿದ್ದಾರೆ.
ಮಂಗಳೂರು ಉತ್ತರದ ಶಾಸಕ ಭರತ್ ಶೆಟ್ಟಿ ಪ್ರತಿಕ್ರಿಯಿಸಿ, ಗೋ ಹತ್ಯೆ ಪ್ರತಿಬಂಧಕ ಕಾಯ್ದೆಯನ್ವಯ ಕ್ರಮ ಆಗಿದೆ. ಈ ಕ್ರಮ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.