Naxal; ಸುಬ್ರಹ್ಮಣ್ಯ ಸನಿಹ ಶಂಕಿತ ನಕ್ಸಲರು ಪತ್ತೆ?
ಐನೆಕಿದು ಗ್ರಾಮದ ಮನೆಗೆ ನುಗ್ಗಿದ ಶಂಕಿತರು ಕಳೆದ ಶನಿವಾರ ಕೂಜಿಮಲೆಯಲ್ಲಿ ಕಾಣಿಸಿಕೊಂಡಿದ್ದರು
Team Udayavani, Mar 24, 2024, 6:20 AM IST
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್ ಅಂಗಡಿಗೆ ನಕ್ಸಲರು ಭೇಟಿ ನೀಡಿದ ವಾರದಲ್ಲೇ ಮಾ. 23ರಂದು ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಸಣ್ಣದಾಗಿ ಮಳೆಯಾಗುತ್ತಿದ್ದ ಸಂದರ್ಭ ದಲ್ಲಿ ಶಂಕಿತರ ತಂಡ ಐನೆಕಿದು ಗ್ರಾಮದ ಅರಣ್ಯದಂಚಿನ ತೋಟದ ಮೂಲಕ ಆಗಮಿಸಿತ್ತು. ತೋಟದಲ್ಲಿದ್ದ ಕೆಲಸದವರ ಶೆಡ್‌ಗೆ ಭೇಟಿ ನೀಡಿದ ವೇಳೆ ಕೆಲಸದಾಳು ಶೆಡ್‌ನ ಬಾಗಿಲು ಹಾಕಿದ್ದು, ಬಳಿಕ ಶಂಕಿತರ ತಂಡ ಅಲ್ಲೇ ಪಕ್ಕದಲ್ಲಿರುವ ತೋಟದ ಮಾಲಕರ ಮನೆಗೆ ತೆರಳಿ ಒಳಹೊಕ್ಕಿತ್ತು. ಮನೆಯವರ ಜತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿತ್ತು.
25 ಕಿ.ಮೀ. ದೂರ
ಕಳೆದ ವಾರ ನಕ್ಸಲರು ಕಾಣಿಸಿಕೊಂಡ ಕೂಜಿಮಲೆ ಮತ್ತು ಇಂದು ಕಾಣಿಸಿದ ಐನೆಕಿದು ನಡುವೆ ಸುಮಾರು 25 ಕಿ.ಮೀ. ಅಂತರವಿದೆ. ವಿಶೇಷ ಎಂದರೆ ನಕ್ಸಲ್ ನಿಗ್ರಹ ದಳ ನಿರಂತರ ಶೋಧ ಕಾರ್ಯ ನಡೆಸುತ್ತಿದ್ದರೂ ಇದೇ ಪರಿಸರದಲ್ಲಿ ಸುತ್ತಾಡುತ್ತಿದ್ದ ನಕ್ಸಲರು ಎಎನ್‌ಎಫ್ ತಂಡಕ್ಕೆ ಕಾಣಿಸಿರಲಿಲ್ಲ.
ಪರ್ವತದ ತಪ್ಪಲು
ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಇಲ್ಲಿಂದ ಸೋಮವಾರಪೇಟೆ ಮತ್ತು ಇನ್ನೊಂದು ದಾರಿಯಾಗಿ ಗಾಳಿಬೀಡು, ಸಂಪಾಜೆ ಮೂಲಕ ಕೇರಳಕ್ಕೆ ಅರಣ್ಯದೊಳಗೆ ಸಂಪರ್ಕ ಸಾಧಿಸಲು ಸಾಧ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.