118 ಜನವಸತಿ ಪ್ರದೇಶಗಳಲ್ಲಿ ಕರಡು ಕಾರ್ಡ್‌ ವಿತರಣೆ ಆರಂಭ

 ಸ್ವಮಿತ್ವ ಯೋಜನೆ: 82 ಗ್ರಾಮಗಳ 237 ಜನವಸತಿ ಪ್ರದೇಶಗಳಲ್ಲಿ ಅಳತೆ ಪೂರ್ಣ; 10,748 ಆಸ್ತಿ ಗುರುತು

Team Udayavani, Oct 13, 2021, 5:52 AM IST

118 ಜನವಸತಿ ಪ್ರದೇಶಗಳಲ್ಲಿ ಕರಡು ಕಾರ್ಡ್‌ ವಿತರಣೆ ಆರಂಭ

ಸಾಂದರ್ಭಿಕ ಚಿತ್ರ

ಮಹಾನಗರ: ಗ್ರಾಮಾಂತರ ಪ್ರದೇಶಗಳಲ್ಲಿ ಡ್ರೋಣ್‌ ಬಳಸಿ ಆಸ್ತಿಗಳ ಅಳತೆ ಮಾಡಿ ಹಕ್ಕು ದಾಖಲೆಗಳನ್ನು ಸಿದ್ಧಪಡಿಸುವ ಸ್ವಮಿತ್ವ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 118 ಜನವಸತಿ ಪ್ರದೇಶಗಳಲ್ಲಿ ಕರಡು ಕಾರ್ಡ್‌ ವಿತರಣೆ ಆರಂಭಗೊಂಡಿದೆ.

ಜಿಲ್ಲೆಯಲ್ಲಿ ಈವರೆಗೆ 82 ಗ್ರಾಮಗಳ 237 ಜನವಸತಿ (ಹ್ಯಾಮ್ಲೆಟ್‌-ಮಜರೆ) ಪ್ರದೇಶಗಳ ಆಳತೆ ಕಾರ್ಯ ಪೂರ್ಣಗೊಂಡಿದ್ದು, ಇದರಲ್ಲಿ 10,748 ಆಸ್ತಿಗಳನ್ನು ಗುರುತಿಸಲಾಗಿದೆ. 118 ಜನವಸತಿ ಪ್ರದೇಶಗಳಲ್ಲಿ ಸ್ವಾಮಿತ್ವಕ್ಕೆ ಸಂಬಂಧಿಸಿದಂತೆ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡು ಆಸ್ತಿ ಮಾಲಕರಿಗೆ ಕರಡು ಕಾರ್ಡ್‌ ವಿತರಿಸಲಾಗುತ್ತಿದೆ. ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿಯವರ ನೇತೃತ್ವದಲ್ಲಿ ರಚಿಸಿರುವ ಸಮಿತಿಯ ಮಾರ್ಗಸೂಚಿಗಳು (ಎಸ್‌ಒಪಿ) ಬಂದ ಬಳಿಕ ಶಾಶ್ವತ ಕಾರ್ಡ್‌ ವಿತರಣೆ ನಡೆಯಲಿದೆ.

ದ.ಕ. ಜಿಲ್ಲೆಯಲ್ಲಿ ಒಟ್ಟು 427 ಗ್ರಾಮಗಳಿದ್ದು, ಇದರಲ್ಲಿ ಸುಮಾರು 67 ಗ್ರಾಮಗಳು ಮಹಾನಗರ ಪಾಲಿಕೆ, ನಗರ ಸಭೆ, ನ.ಪಂ., ಪುರಸಭೆಗಳಡಿಯಲ್ಲಿ ಬರುತ್ತಿದ್ದು, ಇವುಗಳು ಸ್ವಾಮಿತ್ವದಡಿಯಲ್ಲಿ ಬರುವುದಿಲ್ಲ. ಉಳಿದಂತೆ ಸುಮಾರು 360 ಗ್ರಾಮಗಳಲ್ಲಿ ಸ್ವಾಮಿತ್ವ ಯೋಜನೆಗೆ ಒಳಪಡುತ್ತದೆ. ಇದರಲ್ಲಿ ಕೃಷಿ ಭೂಮಿ, ಸಿಂಗಲ್‌ ಮನೆಗಳು ಒಳಪಡುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10ಕ್ಕಿಂತ ಹೆಚ್ಚಿನ ಮನೆಗಳಿರುವ ಪ್ರದೇಶಗಳನ್ನು ಒಂದು ಜನವಸತಿ ಪ್ರದೇಶ (ಮಜರೆ) ಎಂದು ಪರಿಗಣಿಸಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.
ಪ್ರಸ್ತುತ ಮಳೆಗಾಲದ ಕಾರಣದಿಂದ ಸ್ಥಗಿತಗೊಂಡಿದ್ದ ಡ್ರೋನ್‌ ಸರ್ವೇ ನವೆಂಬರ್‌ ತಿಂಗಳಿನಿಂದ ಪ್ರಾರಂಭವಾಗಲಿದೆ. ಡ್ರೋನ್‌ ಸರ್ವೇಗೆ ಮಳೆ, ಮೋಡ ಇರಬಾರದು. ವಾತಾವರಣದ ಉಷ್ಟಾಂಶ 27 ಸೆಂಟಿಗ್ರೇಡ್‌ಗಿಂತ ಜಾಸ್ತಿ ಇರಬೇಕು.

ಇದನ್ನೂ ಓದಿ:ಆಯುಧ ಪೂಜೆಯಂದು ಸರ್ಕಾರಿ ಬಸ್ಸುಗಳ  ಪೂಜೆಗೆ ಸಚಿವ ಶ್ರೀರಾಮುಲು ಸೂಚನೆ

ಸ್ವಮಿತ್ವ ಯೋಜನೆಯಲ್ಲಿ ರಾಜ್ಯದಲ್ಲಿ ಆರಂಭಿಕ ಹಂತದಲ್ಲಿ ದ.ಕ. ಸಹಿತ 16 ಜಿಲ್ಲೆಗಳನ್ನು ಪ್ರಾಯೋಗಿಕವಾಗಿ ಆಯ್ಕೆ ಮಾಡಲಾಗಿತ್ತು. ಜಿಲ್ಲೆಯಲ್ಲಿ ಪ್ರಥಮ ಹಂತದಲ್ಲಿ 90 ಗ್ರಾಮಗಳನ್ನು ಆಯ್ಕೆ ಮಾಡಿ 2019ರ ಸೆಪ್ಟಂಬರ್‌ನಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಕಂದಾಯ ಇಲಾಖೆಯ ಭೂಮಾಪಕರು, ಗ್ರಾ.ಪಂ. ಅಧಿಕಾರಿಗಳು ಜಂಟಿಯಾಗಿ ಗ್ರಾಮಗಳ ಜನವಸತಿ ಪ್ರದೇಶದ ಪ್ರತೀ ಆಸ್ತಿಯನ್ನು ಸಂಬಂಧಿತ ಭೂಮಾಲಕರ ಸಮ್ಮುಖದಲ್ಲಿ ಪರಿಶೀಲಿಸಿ ಗುರುತು ಮಾಡುತ್ತಾರೆ. ಡ್ರೋನ್‌ ಸರ್ವೇಯಲ್ಲಿ ಸೆರೆ ಹಿಡಿದ ಚಿತ್ರಗಳನ್ನು ಸಂಸ್ಕರಿಸಿ ಗುರುತಿಸಲಾದ ಆಸ್ತಿಗಳ ನಕಾಶೆ ತಯಾರಿಸಲಾಗುತ್ತದೆ. ಗ್ರಾ.ಪಂ.ಗಳಲ್ಲಿ ನಮೂದಾಗಿರುವ ದಾಖಲಾತಿಗಳ ಜತೆ ಹೊಂದಾಣಿಕೆ ಮಾಡಿ ಪರಿಶೀಲನೆ ನಡೆಸಲಾಗುತ್ತದೆ. ಬಳಿಕ ಗ್ರಾಮಸ್ಥರ ಜತೆ ಸಭೆ ನಡೆಸಿ ತಕರಾರುಗಳಿದ್ದರೆ ಇತ್ಯರ್ಥ ಪಡಿಸಿ ಸರಕಾರದ ದಾಖಲಾತಿಗೆ ರವಾನಿಸ ಲಾಗುತ್ತದೆ. ಆಗ ಹೆಸರು, ಇನ್ನಿತರ ತಿದ್ದುಪಡಿಗೂ ಅವಕಾಶವಿರುತ್ತದೆ. ಅಂತಿಮ ವಾಗಿ ಆಸ್ತಿ ಮಾಲಕರಿಗೆ ಪ್ರಾಪರ್ಟಿ ಕಾರ್ಡ್‌ ನೀಡಲಾಗುತ್ತದೆ.

ಸರ್ವೇ ನಂಬರ್‌ ಸಮಸ್ಯೆ
ರಾಜ್ಯದಲ್ಲಿ ಈ ಹಿಂದೆ ಮದ್ರಾಸ್‌ ಪ್ರಾಂತಕ್ಕೆ ಒಳಪಟ್ಟಿದ್ದª ದ.ಕ., ಉಡುಪಿ ಜಿಲ್ಲೆಗಳಲ್ಲಿ ಭೂದಾಖಲೆಗಳು ಸರ್ವೇ ನಂಬರ್‌ ಸ್ವರೂಪದಲ್ಲಿದೆ. ಉಳಿದ ಜಿಲ್ಲೆಗಳಲ್ಲಿ ಗ್ರಾಮ ಠಾಣಾ ಸ್ವರೂಪದಲ್ಲಿದೆ. ಆದುದರಿಂದ ದ.ಕ. ಜಿಲ್ಲೆಯಲ್ಲಿ ಸ್ವಾಮಿತ್ವ ಯೋಜನೆಯಡಿ ಭೂದಾಖಲೆಗಳು° ಸರಕಾರದಿಂದ ರಚಿಸಲಾಗಿರುವ ಸಮಿತಿ ಮಾರ್ಗ ಸೂಚಿಯನ್ವಯ ಸಿದ್ಧಗೊಳಿಸಲಾಗುತ್ತದೆ.

2022 ಮಾರ್ಚ್ ಸರ್ವೇಕಾರ್ಯ ಪೂರ್ಣ
ಮುಂದಿನ ವರ್ಷದ ಮಾರ್ಚ್‌ನೊಳಗೆ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಮಾರ್ಕಿಂಗ್‌, ಡ್ರೋನ್‌ ಸರ್ವೇ ಕಾರ್ಯ ಪೂರ್ಣಗೊಳಿಸುವ ಗುರಿ ಇರಿಸಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಂದು ಗ್ರಾಮಕ್ಕೆ ಓರ್ವರಂತೆ ಸರ್ವೇಯರ್‌ಗಳನ್ನು ನೇಮಿಸಿ ಎಲ್ಲ ಪ್ರಕ್ರಿಯೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲಾಗುವುದು. ಪ್ರಸ್ತುತ ಪ್ರಕ್ರಿಯೆ ಪೂರ್ಣಗೊಂಡಿರುವ ಆಸ್ತಿಗಳ ಕರಡು ಪ್ರಾಪರ್ಟಿ ಕಾರ್ಡ್‌ ವಿತರಿಸಲಾಗುತ್ತಿದ್ದು, ಸರಕಾರದ ಎಸ್‌ಒಪಿ ಬಂದ ಬಳಿಕ ಅಂತಿಮ ಕಾರ್ಡ್‌ ನೀಡಲಾಗುವುದು.
-ನಿರಂಜನ್‌, ಭೂಮಾಪನ ಇಲಾಖೆಯ ಉಪ ನಿರ್ದೇಶಕರು

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ

Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ

Mangaluru: ಪಿಲಿಕುಳ ಕಂಬಳ; ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

Mangaluru: ಪಿಲಿಕುಳ ಕಂಬಳ; ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ

BJP Protest: ರೈತರ ಜಮೀನು ವಕ್ಫ್ ಖಾತೆಗೆ ಭೂಪರಿವರ್ತನೆ

BJP Protest: ರೈತರ ಜಮೀನು ವಕ್ಫ್ ಖಾತೆಗೆ ಭೂಪರಿವರ್ತನೆ

Mangaluru: ಮಹಾಕಾಳಿಪಡ್ಪು ಕೆಳಸೇತುವೆ ಜನವರಿಯಲ್ಲಿ ಪೂರ್ಣ

Mangaluru: ಮಹಾಕಾಳಿಪಡ್ಪು ಕೆಳಸೇತುವೆ ಜನವರಿಯಲ್ಲಿ ಪೂರ್ಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.