ಸಿಂಡಿಕೇಟ್ ಬ್ಯಾಂಕ್: ಪ್ರಗತಿ ಪರಿಶೀಲನ ಸಭೆ
Team Udayavani, Jul 24, 2017, 5:35 AM IST
ಮಂಗಳೂರು: ಪ್ರಸ್ತುತ ವ್ಯಾವಹಾರಿಕ ಪ್ರಪಂಚವು ಅತ್ಯಂತ ಸಂಚಲನಾತ್ಮಕವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಬದಲಾವಣೆ ಅನಿವಾರ್ಯ. ಮುಖ್ಯವಾಗಿ ಡಿಜಿಟಲ್ ಕ್ಷೇತ್ರದಲ್ಲಿನ ಬೆಳವಣಿಗೆಗಳು ಬ್ಯಾಂಕಿಂಗ್ ಕ್ಷೇತ್ರದ ಪ್ರಗತಿಯಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿವೆ ಎಂದು ಸಿಂಡಿಕೇಟ್ ಬ್ಯಾಂಕಿನ ವಲಯ ಮಹಾಪ್ರಬಂಧಕ ಸತೀಶ್ ಕಾಮತ್ ಹೇಳಿದರು.
ಬ್ಯಾಂಕಿನ ಮಂಗಳೂರು ಪ್ರಾದೇಶಿಕ ಕಚೇರಿಯಲ್ಲಿ ಶನಿವಾರ ಜರಗಿದ ಶಾಖಾ ಪ್ರಬಂಧಕರ ತ್ತೈಮಾಸಿಕ ವ್ಯವಹಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಮಾರುಕಟ್ಟೆಯ ಬದಲಾದ ಸಂಚಲನಗಳನ್ನು ಗಮನದಲ್ಲಿರಿಸಿ ಗ್ರಾಹಕರ ಆವಶ್ಯಕತೆಗಳನ್ನು ಯಶಸ್ವಿಯಾಗಿ ಮತ್ತು ಶೀಘ್ರವಾಗಿ ಪೂರೈಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾದಾಗ ಆಯಾ ಶಾಖೆಗಳಿಗೆ ನಿಗದಿಪಡಿಸಿರುವ ವಾರ್ಷಿಕ ಗುರಿಯನ್ನು ತಲುಪುವುದು ಸುಲಭ ಸಾಧ್ಯ ಎಂದು ಹೇಳಿದರು.
ಬ್ಯಾಂಕಿನ ಉಪಮಹಾಪ್ರಬಂಧಕ ಎನ್. ಸೀತಾರಾಮ ಸೋಮಯಾಜಿ ಅವರು 2017 ಜೂನ್ 30ರ ಅಂತ್ಯದ ವರೆಗಿನ ಮಂಗಳೂರು ಪ್ರಾದೇಶಿಕ ಕಚೇರಿಗೆ ಒಳಪಟ್ಟ ಶಾಖೆಗಳ ಆರ್ಥಿಕ ಸಾಧನೆಗಳ ಬಗ್ಗೆ ವಿವರ ನೀಡಿದರು.
ಪ್ರಾದೇಶಿಕ ಕಚೇರಿಯ ಎಲ್ಲ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಸಹಾಯಕ ಮಹಾಪ್ರಬಂಧಕ ಬಿ. ನಾರಾಯಣ ರಾವ್ ಸ್ವಾಗತಿಸಿದರು. ಸಹಾಯಕ ಮಹಾಪ್ರಬಂಧಕ ನಾರಾಯಣ ಗೌಡ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.