ರಸ್ತೆಗೆ ಅನಧಿಕೃತ ನಾಮಫಲಕ ತೆರವು, ತಹಶೀಲ್ದಾರ್‌ ಕಾರ್ಯಾಚರಣೆ

Team Udayavani, Sep 6, 2017, 7:45 AM IST

tahashildar-karyacharane.jpg

ಬಂಟ್ವಾಳ: ಅಮ್ಮುಂಜೆ ರಾಮನಗರದಲ್ಲಿ ಕಳೆದ ಎರಡು ತಿಂಗಳ ಹಿಂದೆಯಷ್ಟೆ ದುಷ್ಕರ್ಮಿಗಳಿಂದ ಹತ್ಯೆಯಾದ ಎಸ್‌ಡಿಪಿಐ ವಲಯಾಧ್ಯಕ್ಷ ಆಶ್ರಫ್‌ ಕಲಾಯಿ ಸ್ಮರಣಾರ್ಥ ಇಲ್ಲಿನ ಕೆಲವೊಂದು ರಸ್ತೆಗಳಿಗೆ ಅನಧಿಕೃತವಾಗಿ ಅಳವಡಿಸಿದ್ದ ನಾಮಫಲಕವನ್ನು ಬಂಟ್ವಾಳ ತಹಶೀಲ್ದಾರ್‌ ಪುರಂದರ ಹೆಗ್ಡೆ ನೇತƒತ್ವದಲ್ಲಿ ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯತ್‌ ಅಧಿಕಾರಿಗಳು ಸೆ. 5ರ  ಸಂಜೆ ತೆರವು ಗೊಳಿಸಿದರು.

ಅಶ್ರಫ್‌ ಕಲಾಯಿ ಹತ್ಯೆಯಾಗಿ 40 ದಿನಗಳ ಬಳಿಕ ಇಲ್ಲಿನ ಮುಖ್ಯರಸ್ತೆ ಬಳಿ ಸ್ಥಳೀಯ ಗ್ರಾಮ ಪಂಚಾಯತ್‌ ಅನುಮತಿ ಇಲ್ಲದೆ ನಿರ್ಮಿಸಿದ್ದ ಬಸ್‌ ತಂಗುದಾಣವನ್ನು ಕೂಡ ಉದ್ಘಾಟನೆ ದಿನದಂದೇ ಜಿಲ್ಲಾಧಿಕಾರಿ ಸೂಚನೆಯಂತೆ ತಹಶೀಲ್ದಾರ್‌ ನೇತೃತ್ವದಲ್ಲಿ ಕಂದಾಯ ಇಲಾಖೆ ಮತ್ತು ಗ್ರಾಮ ಪಂಚಾಯತ್‌ ತೆರವುಗೊಳಿಸಿತ್ತು.

ಈಗ ಮತ್ತೆ ಸ್ಥಳೀಯರು ಬಂಟ್ವಾಳ ಗ್ರಾಮಾಂತರ ಠಾಣೆಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಠಾಣಾಧಿಕಾರಿ ಉಮೇಶ್‌ ಕುಮಾರ್‌ ನೇತೃತ್ವದ ಪೊಲೀಸರ ಬಿಗಿ ಬಂದೋಬಸ್ತ್ನಲ್ಲಿ ತಹಶೀಲ್ದಾರ್‌ ನೇತೃತ್ವದ ತಂಡವು ಮಂಗಳವಾರ ಕಾರ್ಯಾಚರಣೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಇಲ್ಲಿನ ಮೂರು ರಸ್ತೆಗಳಿಗೆ ಅಳವಡಿಸಿದ್ದ ಪ್ರತ್ಯೇಕ ಮಾರ್ಗಸೂಚಿ ಮತ್ತು ನಾಮಫಲಕ ತೆರವುಗೊಳಿಸಲಾಗಿದೆ. ಉಳಿದಂತೆ ಮಸೀದಿ ಬಳಿ ಕುಡಿಯುವ ನೀರಿನ ರೆಫ್ರಿಜರೇಟರ್‌, ಧ್ವಜ ಸ್ತಂಭ ಮತ್ತಿತರ ಕಡೆಗಳಲ್ಲಿ ಗ್ರಾಮ ಪಂಚಾಯತ್‌ ಅನುಮತಿ ಪಡೆಯದೆ ಅಳವಡಿಸಿದ ನಾಮ ಫಲಕಗಳನ್ನು ಕೂಡ ನೋಟಿಸ್‌ ನೀಡಿ 15 ದಿನಗಳೊಳಗೆ ತೆರವುಗೊಳಿಸುವಂತೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕವಿತಾರಿಗೆ ತಹಶೀಲ್ದಾರ್‌ ಆದೇಶಿಸಿದ್ದಾರೆ.

ಕಂದಾಯ ಇಲಾಖೆ ಸಿಬಂದಿಗಳಾದ ಸೀತಾರಾಮ ಕಮ್ಮಾಜೆ, ಶೀತಲ್‌ ಮತ್ತಿತರರು ಇದ್ದರು. ಇನ್ನೊಂದೆಡೆ ಇಲ್ಲಿನ ಬಸ್ಸು ತಂಗುದಾಣ ನಿರ್ಮಾಣ ಸಹಿತ ನಾಮ ಫಲಕ ಅಳವಡಿಸುವ ಮೊದಲು ಗ್ರಾ.ಪಂ.ಗೆ ಮನವಿ ಸಲ್ಲಿಸಿದ್ದರೂ ಅವರು ಅನುಮತಿ ನೀಡಿಲ್ಲ ಎಂದು ಸ್ಥಳೀಯ ಎಸ್‌ಡಿಪಿಐ ಮುಖಂಡ ಇಮಿ¤ಯಾಝ್ ಕಲಾಯಿ ಆರೋಪಿಸಿದ್ದಾರೆ.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

byndoor

Sullia: ಆತ್ಮಹ*ತ್ಯೆಗೆ ಯತ್ನಿಸಿದ್ದ ಯುವಕ ಸಾವು

13

Belthangady: ಅಸೌಖ್ಯದಿಂದ ಯುವ ಪ್ರತಿಭೆ ಸಾವು

Kukke-Kanchi-Sri-visit

Kanchi Sri Visit: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಂಚಿ ಸ್ವಾಮೀಜಿ ಭೇಟಿ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.