ತಾಲೂಕು ಮಟ್ಟದ ದಂಪತಿ ಸಮಾವೇಶ

Team Udayavani, Jan 5, 2018, 4:27 PM IST

5-Jan-20.jpg

ಬಂಟ್ವಾಳ: ಕುಟುಂಬ ನಿರ್ವಹಣೆಗೆ ಉದ್ಯೋಗ ಬೇಕು. ಮಕ್ಕಳಿಗೆ ನೈತಿಕ ಶಿಕ್ಷಣವನ್ನು ಮಹಿಳೆ ನೀಡಬೇಕು. ಸಂಸ್ಕಾರ ಪ್ರತಿಯೊಬ್ಬರಲ್ಲಿದೆ. ಆದರೆ ಇದು ಬೆಳೆಯಬೇಕಾದರೆ ಗ್ರಾಮಾಭಿವೃದ್ಧಿ ಯೋಜನೆಯಂತಹ ಸಂಘ- ಸಂಸ್ಥೆಗಳಿಂದ ಸಾಧ್ಯ. ಎಂದು ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ಎಎಸ್‌ಐ ಭಾರತಿ ಹೇಳಿದರು.

ಅವರು ಬಿ.ಸಿ. ರೋಡ್‌ ಕುಲಾಲ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಆಶ್ರಯದಲ್ಲಿ ಜರಗಿದ ದಂಪತಿ ಸಮಾವೇಶ ಮತ್ತು ಕುಟುಂಬ ನಿರ್ವಹಣೆಗಾಗಿ ಸ್ವ ಉದ್ಯೋಗ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದರು. ಮಕ್ಕಳು ತಪ್ಪು ಮಾಡಿದರೆ ತಿದ್ದಬೇಕು. ಮಕ್ಕಳೇ ದೇಶದ ಆಸ್ತಿಯಾಗಿರುವುದರಿಂದ ಅವರಿಗೆ ಸರಿಯಾದ ರೂಪ ಕೊಡುವುದು ತಂದೆ-ತಾಯಿಯ ಕರ್ತವ್ಯ ಎಂದು ತಿಳಿಸಿದರು. ಪ್ರಗತಿಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷ ಸದಾನಂದ ಅಧ್ಯಕ್ಷತೆ ವಹಿಸಿದ್ದರು.

ಪುರಸಭಾ ಅಧಿಕಾರಿ ಮತ್ತಾಡಿ ಮಾತನಾಡಿ, ಕುಟುಂಬದಲ್ಲಿ ಏನೇ ವಿಚಾರ ಇದ್ದರೂ ಎಲ್ಲರೂ ಜತೆಗೂಡಿ ಮಾತಾಡಿ ಒಪ್ಪಂದ ಮಾಡಿಕೊಳ್ಳಬೇಕು. ಇದರಿಂದ ಕುಟುಂಬದಲ್ಲಿ ಒಳ್ಳೆಯ ವಾತಾವರಣ ಸೃಷ್ಟಿ ಮಾಡಲು ಸಾಧ್ಯ ಮಕ್ಕಳಿಗೆ ಬೇರೆ ಬೇರೆ ದುಶ್ಚಟಗಳು ಬೇಗ ಅಂಟಿಕೊಳ್ಳುತ್ತವೆ. ಇದರಿಂದಲೂ ಮಕ್ಕಳನ್ನು ದೂರವಿರಿಸಬೇಕು ಎಂದರು.

ರುಡ್‌ಸೆಟ್‌ ಸಂಸ್ಥೆಯ ಹಿರಿಯ ಉಪನ್ಯಾಸಕಿ ಅನಸೂಯಾ ಮಾತನಾಡಿ, ಕುಟುಂಬ ನಿರ್ವಹಣೆಗೆ ಸ್ವ ಉದ್ಯೋಗದ ಆವಶ್ಯಕತೆ ಬಹಳಷ್ಟಿದೆ. ಗಂಡ-ಹೆಂಡತಿ ಇಬ್ಬರೂ ದುಡಿಯುವ ಸದಸ್ಯರಾಗಿರುವುದರಿಂದ ಮಕ್ಕಳಿಗೆ ತಮ್ಮ ಭಾವನೆಗಳನ್ನು ಹಂಚಲು ಅವಕಾಶ ಇರುವುದಿಲ್ಲ. ಮಕ್ಕಳನ್ನು ಟಿ.ವಿ. ಮೊಬೈಲ್‌ಗ‌ಳಿಗೆ ತಮ್ಮ ಗಮನ ಹರಿಸಲು ಬಿಡುವುದರಿಂದ ಅವರಿಗೆ ಮನೆಯವರ ಸಂಪರ್ಕ, ಆತ್ಮೀಯತೆ ಕಡಿಮೆ ಆಗುವುದು ಎಂದು ತಿಳಿಸಿದರು.

ಬಂಟ್ವಾಳ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಸುನೀತಾ ನಾಯಕ್‌ ಮಾತನಾಡಿದರು. ಬಡೆಕೊಟ್ಟು ಸ.ಹಿ.ಪ್ರಾ. ಶಾಲಾ ಶಿಕ್ಷಕ ರಂಜಿತ್‌ ಕುಮಾರ್‌, ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಉಪಸ್ಥಿತರಿದ್ದರು. ದಂಪತಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಟ್ಲ ಮೇಲ್ವಿಚಾರಕಿ ಪ್ರೇಮಾ ಸ್ವಾಗತಿಸಿ ಮಮತಾ ವಂದಿಸಿದರು. ಜ್ಞಾನವಿಕಾಸ ಸಮನ್ವ ಯಾಧಿಕಾರಿ ಜಯಂತಿ ಕಾರ್ಯಕ್ರಮ ನಿರೂಪಿಸಿದರು.

ನಂಬಿಕೆ-ವಿಶ್ವಾಸ ಅಗತ್ಯ
ದಾಂಪತ್ಯ ಶಾಶ್ವತವಾಗಿ ಉಳಿಯಬೇಕಾದರೆ ನಂಬಿಕೆ- ವಿಶ್ವಾಸ ಅಗತ್ಯ. ಸಂಸಾರದಲ್ಲಿ ಸ್ತ್ರೀ-ಪುರುಷ ಮನೆಯ
ಬಾಗಿಲು – ಹೊಸ್ತಿಲುಗಳಂತೆ ಪೂರಕವಾಗಿರಬೇಕು. ಕುಟುಂಬಗಳ ಸರ್ವಾಂಗೀಣ ಅಭಿವೃದ್ಧಿಗೆ ಒಬ್ಬರನ್ನೊಬ್ಬರು
ಅರ್ಥ ಮಾಡಿಕೊಳ್ಳುವ ರೀತಿಯೂ ಅಷ್ಟೇ ಮುಖ್ಯ. 
– ಸದಾನಂದ, ಪ್ರಗತಿಬಂಧು ಸ್ವ ಸ. ಸಂ. ಕೇಂದ್ರ ಒಕ್ಕೂಟದ ಅಧ್ಯಕ್ಷ 

ಟಾಪ್ ನ್ಯೂಸ್

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

1-huli

Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.