ತಾಲೂಕು ಮಟ್ಟದ ವಕ್ಫ್ ಮಾಹಿತಿ ಕಾರ್ಯಾಗಾರ
Team Udayavani, Mar 17, 2018, 3:19 PM IST
ಬೆಳ್ತಂಗಡಿ: ಸರಕಾರ ಬೇರೆ ಬೇರೆ ರೀತಿಯಲ್ಲಿ ಅಲ್ಪಸಂಖ್ಯಾಕರ ಅಭಿವೃದ್ಧಿಗೆ ಕ್ರಮ ಕೈಗೊಂಡಿದೆ. ವಿವಿಧ ಯೋಜನೆಗಳು ಇದ್ದು, ಇದನ್ನು ಸಕಾಲದಲ್ಲಿ ಬಳಸಿಕೊಳ್ಳುವ ಕಾರ್ಯ ನಡೆಯ ಬೇಕು ಎಂದು ಶಾಸಕ ಕೆ. ವಸಂತ ಬಂಗೇರ ಅವರು ಹೇಳಿದರು. ಅವರು ಗುರುವಾಯನಕೆರೆ ಜುಮ್ಮಾ ಮಸೀದಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ವಕ್ಫ್ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ವಕ್ಫ್ ಸಲಹಾ ಸಮಿತಿ ಜಿಲ್ಲಾಧ್ಯಕ್ಷ ಯು.ಕೆ. ಮೋನು ಕಣಚೂರು ಮಾತನಾಡಿ, ಮಾಹಿತಿ ಕೊರತೆಯಿಂದ ಸೌಲಭ್ಯಗಳು ಸಮರ್ಥರನ್ನು ತಲುಪುವಲ್ಲಿ ವಿಫಲವಾಗುತ್ತಿದೆ. ಆದ್ದರಿಂದ ತಾಲೂಕು ಮಟ್ಟದಲ್ಲಿ ಅಧಿಕಾರಿಗಳಿಂದ ಜನರಿಗೆ ಮಾಹಿತಿ ಒದಗಿಸುವ ಕಾರ್ಯ ನಡೆಯುತ್ತಿದೆ ಎಂದರು.
ಚೆಕ್ ವಿತರಣೆ
ತಾಲೂಕಿನ ಗಂಗಾ ಕಲ್ಯಾಣ ಯೋಜನೆಯ 25 ಫಲಾನುಭವಿಗಳಿಗೆ ತಲಾ 2 ಲಕ್ಷ ರೂ. ಮೊತ್ತದ ಚೆಕ್ಕನ್ನು ಶಾಸಕ ಕೆ. ವಸಂತ ಬಂಗೇರ ವಿತರಿಸಿದರು. ವಕ್ಫ್ ಸಲಹಾ ಸಮಿತಿ ಸದಸ್ಯ ಕೆ.ಎಂ. ಅಬ್ದುಲ್ ಕರೀಂ, ಜಿ.ಪಂ. ಸದಸ್ಯ ಶಾಹುಲ್ ಹಮೀದ್, ವಕ್ಫ್ ಬೋರ್ಡ್ ಮಾಜಿ ಸದಸ್ಯ ಉಮರ್ ಕುಂಞಿ, ಗುರುವಾಯನಕೆರೆ ಜುಮ್ಮಾ ಮಸೀದಿ ಅಧ್ಯಕ್ಷ ಉಸ್ಮಾನ್ ಬಳಂಲಜ, ಜಮೀಯತುಲ್ ಫಲಾಹ್ ಅಧ್ಯಕ್ಷ ಖಾಸೀಂ ಮಲ್ಲಿಗೆಮನೆ, ಮುಸ್ಲಿಂ ಐಕ್ಯ ವೇದಿಕೆ ಅಧ್ಯಕ್ಷ ಕೆ. ಸಲೀಂ, ಸೈಯದ್ ಹಬೀಬ್ ಸಾಹೇಬ್ ನಡ, ವಕ್ಫ್ ಆಧಿಕಾರಿ ಅಬೂಬಕ್ಕರ್, ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮದ ಅಧಿಕಾರಿ ಶ್ರೀಧರ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯ ಹಾಜಿ ಹಸನಬ್ಬ ಚಾರ್ಮಾಡಿ ಸ್ವಾಗತಿಸಿದರು. ಅಶ್ರಫ್ ಆಲಿ ಕುಂಞಿ ನಿರೂಪಿಸಿದರು.
ಅನುದಾನ
ನನ್ನ ಅಧಿಕಾರಾವಧಿಯಲ್ಲಿ ಇಲ್ಲಿನ ಸಮುದಾಯಭವನಕ್ಕೆ ಅನುದಾನ ಬಿಡುಗಡೆಗೊಳಿಸಿದ್ದೇನೆ. ವಿಪಕ್ಷದವರು ತನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿಕೊಂಡು ತಿರುಗಾಡುತ್ತಿದ್ದಾರೆ. ಇದಕ್ಕೆ ತಾನು ತಲೆಕೆಡಿಸಿಕೊಳ್ಳುವುದಿಲ್ಲ. ತಾಲೂಕಿನ ವಿವಿಧೆಡೆ ಅಭಿವೃದ್ಧಿ ಕಾರ್ಯ ನಡೆಸುತ್ತಿದ್ದೇನೆ.
– ಕೆ. ವಸಂತ ಬಂಗೇರ
ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.