ಶಿಕ್ಷಕಿಯಿಂದ ಹಿಂದೂ ದೇವರ ಅವಹೇಳನ ಆರೋಪ; ಪ್ರತಿಭಟನೆಗೆ ಮಣಿದು ಶಿಕ್ಷಕಿಯ ವಜಾಗೊಳಿಸಿ ಆದೇಶ


Team Udayavani, Feb 13, 2024, 12:01 AM IST

ಶಿಕ್ಷಕಿಯಿಂದ ಹಿಂದೂ ದೇವರ ಅವಹೇಳನ ಆರೋಪ; ಪ್ರತಿಭಟನೆಗೆ ಮಣಿದು ಶಿಕ್ಷಕಿಯ ವಜಾಗೊಳಿಸಿ ಆದೇಶ

ಮಂಗಳೂರು: ಹಿಂದೂ ಧರ್ಮ ದೇವರುಗಳ ಬಗ್ಗೆ ಅವಹೇಳನ ಮಾಡಿದ ಆರೋಪ ಎದುರಿಸುತ್ತಿರುವ ನಗರದ ವಲೆನ್ಸಿಯಾದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಶಾಲಾಡಳಿತ ಮಂಡಳಿ ವಜಾಗೊಳಿಸಿದೆ.

ಎರಡು ದಿನಗಳಿಂದ ಪೋಷಕರು ಮತ್ತು ಹಿಂದೂ ಸಂಘಟನೆಗಳ ಪ್ರತಿಭಟನೆಗೆ ಮಣಿದ ಆಡಳಿತ ಮಂಡಳಿ, ಶಿಕ್ಷಕಿ ಪ್ರಭಾ ಅವರನ್ನು ವಜಾ ಮಾಡಿ ಆದೇಶ ಹೊರಡಿಸಿದೆ.

ಕೆಲವು ದಿನಗಳ ಹಿಂದೆ ಶಿಕ್ಷಕಿ ಪ್ರಭಾ “ವರ್ಕ್‌ ಈಸ್‌ ವರ್ಶಿಪ್‌’ ಪಾಠ ಮಾಡುವಾಗ ಹಿಂದೂ ಧರ್ಮ ಹಾಗೂ ಶ್ರೀರಾಮದೇವರನ್ನು ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರಲ್ಲಿ ತಿಳಿಸಿದ್ದರು. ಈ ಕುರಿತು ಪೋಷಕರೊಬ್ಬರು ಮಾತನಾಡಿದ್ದ ಬಗ್ಗೆ ಧ್ವನಿಮುದ್ರಣ ಸೋಶಿಯಲ್‌ ಮೀಡಿಯಾದಲ್ಲಿ ಹರಡಿದ್ದು ವಿಚಾರ ವಿವಾದವಾಗಿ ಬದಲಾಯಿತು. ಹಿಂದೂ ಸಂಘಟನೆಗಳು, ರಾಜಕೀಯ ಮುಖಂಡರು, ಪೋಷಕರು ಆಕ್ರೋಶ ವ್ಯಕ್ತಪಡಿಸಿ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ಶಾಲೆ ಮುಂಭಾಗ ಪ್ರತಿಭಟನೆ
ವಲೆನ್ಶಿಯಾದ ಶಾಲೆಯ ಆವರಣದ ಹೊರಭಾಗದಲ್ಲಿ ಗೇಟ್‌ ಬಳಿ ಸೋಮವಾರ ಬೆಳಗ್ಗೆ ಪೋಷಕರು ಹಾಗೂ ಹಿಂದೂ ಸಂಘಟನೆ ಮುಖಂಡರು ಶಿಕ್ಷಕಿಯ ಧೋರಣೆ ವಿರುದ್ಧ ಪ್ರತಿಭಟನೆ ನಡೆಸಿದರು. ಶಾಸಕ ವೇದವ್ಯಾಸ ಕಾಮತ್‌ ಅವರು ಕೂಡಾ ಈ ವೇಳೆ ಸೇರಿಕೊಂಡು ಶಾಲಾಡಳಿತ ಮಂಡಳಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಜಿಲ್ಲಾದ್ಯಂತ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಲಾಯಿತು. ಪ್ರತಿಭಟನೆಯ ತೀವ್ರತೆಗೆ ಮಣಿದ ಆಡಳಿತ ಮಂಡಳಿ ಪ್ರಮುಖರು ಕೊನೆಗೆ ಶಾಲಾ ಲೆಟರ್‌ ಹೆಡ್‌ನ‌ಲ್ಲಿ ಶಿಕ್ಷಕಿಯ ವಜಾ ಆದೇಶಪತ್ರ ಹೊರಡಿಸಿದೆ.

ತರಾಟೆಗೆ ತೆಗೆದುಕೊಂಡ ಶಾಸಕ
ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು, ಪೋಷಕರನ್ನು ಗೇಟ್‌ ಹೊರಗೆ ಪೊಲೀಸರು ತಡೆದರು. ಈ ವೇಳೆ ಶಾಸಕ ವೇದವ್ಯಾಸ ಕಾಮತ್‌ ಆಗಮಿಸಿ ಸ್ಥಳದಲ್ಲಿದ್ದ ಬಿಇಒ ಹಾಗೂ ಡಿಡಿಪಿಐ ಅವರನ್ನು ತರಾಟೆಗೆ ತೆಗೆದುಕೊಂಡರು. ಕಚೇರಿಗೆ ಕರೆಸಿ ತನಿಖೆ ಮಾಡುವುದು ಬಿಟ್ಟು ನೀವೇ ಶಾಲೆಗೆ ಬಂದು ತನಿಖೆ ಮಾಡೋದು ಸರಿಯಾ ಎಂದು ಆಕ್ಷೇಪಿಸಿದರು. ಬಳಿಕ ಶಾಲಾವರಣದ ಒಳಗೆ ತೆರಳಿದ ವೇದವ್ಯಾಸ ಕಾಮತ್‌, ಮುಖ್ಯಶಿಕ್ಷಕಿ ಮತ್ತು ಶಾಲಾಡಳಿತ ಪ್ರಮುಖರನ್ನು ತರಾಟೆಗೆ ತೆಗೆದುಕೊಂಡರು. ಹಿಂದೂ ಧರ್ಮ ಅವಹೇಳನ ಮಾಡುವುದು ಎಷ್ಟು ಸರಿ ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿದರು.

ಆದೇಶ ಪ್ರಕಟಿಸಿದರು
ಪ್ರತಿಭಟನೆ ತೀವ್ರತೆ ಪಡೆಯುತ್ತಿರುವುದನ್ನು ಮನಗಂಡ ಶಾಲಾಡಳಿತ ಮಂಡಳಿಯವರು ಏಳನೇ ತರಗತಿ ಶಿಕ್ಷಕಿ ಪ್ರಭಾ ಅವರನ್ನು ವಜಾಗೊಳಿಸಿ ಆದೇಶ ಹೊರಡಿಸಿದರು. ಆದೇಶಪತ್ರ ಹಿಡಿದು ಹೊರಬಂದ ಶಾಲೆಯ ಪ್ರಮುಖರು, ಪೋಷಕರ ಎದುರು ಅದನ್ನು ಓದಿಹೇಳಿದರು.

ಆದರೆ ಆದೇಶದಲ್ಲಿ ತಪ್ಪು ಒಪ್ಪಿಕೊಂಡಿಲ್ಲ. ಒಪ್ಪಿಕೊಳ್ಳದಿದ್ದರೆ ಬಿಡುವುದಿಲ್ಲ ಎಂದು ಶಾಸಕ ಕಾಮತ್‌ ಎಚ್ಚರಿಕೆ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮತ್ತು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ಸ್ಥಳಕ್ಕಾಗಮಿಸಿ ಸೂಕ್ತ ಕ್ರಮದ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ಇದಕ್ಕೂ ಮೊದಲು, ವಜಾ ಆದೇಶ ಹೊರಡಿಸಿದ ಬಳಿಕ ಶಾಲೆ ವಿದ್ಯಾರ್ಥಿಗಳು, ಪೋಷಕರು ಶಾಲೆ ಎದುರು ಜೈಶ್ರೀರಾಮ್‌ ಎಂದು ಘೋಷಣೆ ಕೂಗಿ ಸಂಭ್ರಮಾಚರಿಸಿದರು.

ಈ ಪ್ರಕರಣದ ಕುರಿತು ಶಿಕ್ಷಣ ಇಲಾಖೆ ಆಂತರಿಕ ತನಿಖೆ ನಡೆಸಲಿದೆ. ಇದರ ವರದಿ ಆಧಾರದ ಮೇಲೆ ಪೊಲೀಸ್‌ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ.

ಡಿಡಿಪಿಐ ಕಚೇರಿಗೆ ಮುತ್ತಿಗೆ ಯತ್ನ
ಶಾಲೆ ಎದುರು ಪ್ರತಿಭಟನೆ ನಡೆಸುವ ಮೊದಲು ವಿಶ್ವ ಹಿಂದೂ ಪರಿಷತ್‌ ನೇತೃತ್ವದಲ್ಲಿ ಪೋಷಕರು ದ.ಕ. ಜಿಲ್ಲಾ ಪಂಚಾಯತ್‌ ಕಟ್ಟಡದಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಆದರೆ ಪೊಲೀಸರು ಮುಖ್ಯ ಪ್ರವೇಶದ್ವಾರವನ್ನು ಮುಚ್ಚಿ ಪ್ರತಿಭಟನಕಾರರನ್ನು ತಡೆದರು. ಧರ್ಮ ನಿಂದನೆ ಮಾಡಿದ ಶಿಕ್ಷಕಿಯನ್ನು ವಜಾ ಮಾಡಿ, ಕಠಿನ ಕ್ರಮ ಕೈಗೊಳ್ಳುವಂತೆ ಪ್ರತಿಭಟನಕಾರರು ಆಗ್ರಹಿಸಿದರು. ಸ್ಥಳಕ್ಕಾಗಮಿಸಿದ ಬಿಜೆಪಿ ಶಾಸಕ ಡಾ| ಭರತ್‌ ಶೆಟ್ಟಿ, ಜಿ.ಪಂ. ಗೇಟ್‌ ಬಳಿ ಆಗಮಿಸಿದ ಡಿಡಿಪಿಐ ದಯಾನಂದ ನಾಯ್ಕ ಅವರನ್ನು ತರಾಟೆಗೆ ತೆಗೆದುಕೊಂಡರು. ಮಂಗಳವಾರ ಸಂಜೆಯೊಳಗೆ ಕ್ರಮ ಕೈಗೊಳ್ಳದಿದ್ದರೆ ಬುಧವಾರ ಜಿಲ್ಲಾದ್ಯಂತ ಹೋರಾಟ ನಡೆಸುವ ಎಚ್ಚರಿಕೆ ನೀಡಿದರು.

ತನಿಖೆಗೆ ಶಾಸಕರ ಆಗ್ರಹ
ಶಾಸಕ ವೇದವ್ಯಾಸ ಕಾಮತ್‌ ಮಾತನಾಡಿ, ಸರಕಾರ ಶಾಲೆ ಮತ್ತು ಶಿಕ್ಷಕಿಯನ್ನು ರಕ್ಷಿಸುವ ಕೆಲಸ ಮಾಡಿದರೆ ಹಿಂದೂ ಸಮಾಜ ತಿರುಗಿ ಬೀಳಲಿದೆ. ಮೊದಲು ವಜಾಗೊಳಿಸಿ ಅನಂತರ ತನಿಖೆ ಮಾಡಿ ಎಂದು ಆಗ್ರಹಿಸಿದರು. ವಿಹಿಂಪ ಮುಖಂಡ ಶರಣ್‌ ಪಂಪ್‌ವೆಲ್‌ ಮತ್ತಿತರರು ಇದ್ದರು.

ತನಿಖೆ ನಡೆಸುತ್ತೇವೆ
ಶಿಕ್ಷಕಿ ಮೇಲಿನ ಆಪಾದನೆ ಹಿನ್ನೆಲೆಯಲ್ಲಿ ತನಿಖೆ ವೇಳೆ ಹೋರಾಟ ನಡೆದಿದೆ. ಇದೀಗ ಶಾಲೆಯವರು ಸ್ವಯಂಪ್ರೇರಿತವಾಗಿ ಕ್ರಮ ತೆಗೆದುಕೊಂಡಿದ್ದಾರೆ. ಈ ಪ್ರಕರಣದ ತನಿಖೆಗೆ ಎಲ್ಲರೂ ಸಹಕರಿಸಬೇಕು. ಕೂಡಲೇ ಈ ಪ್ರಕರಣದ ತನಿಖೆ ನಡೆಸುತ್ತೇವೆ, ಮಕ್ಕಳ ಶಿಕ್ಷಣದ ಹಿತದೃಷ್ಟಿಯಿಂದ ಎಲ್ಲರೂ ಸಹಕರಿಸಬೇಕು..
– ಮುಲ್ಲೈ ಮುಗಿಲನ್‌
ಜಿಲ್ಲಾಧಿಕಾರಿ, ದ.ಕ.

 

ಟಾಪ್ ನ್ಯೂಸ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.