‘ಉತ್ತಮ ಶಿಕ್ಷಣ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಸಹಕಾರಿ’
Team Udayavani, Jul 28, 2017, 8:05 AM IST
ಬೆಳ್ತಂಗಡಿ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ 2017-18ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ನೂತನ ಸಂಚಾಲಕ ಫಾ| ಬಾಜಿಲ್ ವಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಉತ್ತಮ ಶಿಕ್ಷಣವು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಅಂತಹ ಮೌಲ್ಯಯುತ ಶಿಕ್ಷಣವನ್ನು ಈ ವಿದ್ಯಾಸಂಸ್ಥೆ ನಿಮ್ಮ ಮಕ್ಕಳಿಗೆ ನೀಡುತ್ತದೆ ಎಂದವರು ತಿಳಿಸಿದರು.
ನೂತನ ಸಂಚಾಲಕರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಸಂಚಾಲಕರು ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದರು. ನಿರ್ಗಮನ ಅಧ್ಯಕ್ಷರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ ನಿರ್ಗಮನ ಅಧ್ಯಕ್ಷ ಎಸ್.ಆರ್. ನಾಯಕ್ ಮಾತನಾಡಿ, ಮಕ್ಕಳನ್ನು ಕಾಲೇಜಿಗೆ ಕಳುಹಿಸುವುದರೊಂದಿಗೆ ಅವರ ದಿನನಿತ್ಯದ ಚಟುವಟಿಕೆಗಳನ್ನು ಅವರು ಗಮನಿಸುತ್ತಿರಬೇಕು. ನಿರಂತರವಾಗಿ ಶಿಕ್ಷಕರೊಂದಿಗೆ ಸಂಪರ್ಕದಲ್ಲಿದ್ದರೆ, ವಿದ್ಯಾರ್ಥಿಗಳು ದಾರಿತಪ್ಪುವ ಸಂದರ್ಭ ಬರುವುದಿಲ್ಲ ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ| ಅಲೆಕ್ಸ್ ಐವನ್ ಸಿಕ್ವೇರಾ ಅವರು ಕಾಲೇಜಿನ ಚಟುವಟಿಕೆಗಳ ಅವಲೋಕನ ಮಾಡಿದರು. 2017-18ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಮಾಧವ ಗೌಡ ಮತ್ತು ಉಪಾಧ್ಯಕ್ಷೆಯಾಗಿ ಜೆಸಿಂತಾ ಮೋನಿಸ್ ಆಯ್ಕೆಯಾದರು. ಸಂಘದ ಕಾರ್ಯದರ್ಶಿ ಪ್ರೊ| ಜೋನ್ ಬ್ಯಾಪಿಸ್ಟ್ ಡಿ’ಸೋಜಾ ಸ್ವಾಗತಿಸಿ, ವರದಿ ಮಂಡಿಸಿದರು. ಸಂಘದ ಖಜಾಂಚಿ ಪ್ರೊ| ಆ್ಯಗ್ನೆಸ್ ರೋಡ್ರಿಗಸ್ ಲೆಕ್ಕಪತ್ರ ಮಂಡಿಸಿದರು. ಕನ್ನಡ ವಿಭಾಗದ ಪ್ರೊ| ಬೇಬಿ ಎ. ಕಾರ್ಯಕ್ರಮ ನಿರ್ವಹಿಸಿ, ವಾಣಿಜ್ಯ ಉಪನ್ಯಾಸಕ ಪ್ರೊ| ಸ್ಯಾಮ್ ಜೋಯಲ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.