ಇ-ಮಾರ್ಕೆಟ್‌ ಯೋಜನೆ ಜನರಿಗೆ ತಿಳಿಸಿ: ನಳಿನ್‌

Team Udayavani, Oct 27, 2017, 12:15 PM IST

27Mng–4.jpg

ಪಾಂಡೇಶ್ವರ: ಅಂಚೆ ಇಲಾಖೆಯಲ್ಲಿ ಇ-ಮಾರುಕಟ್ಟೆ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಿ ಅದನ್ನು ಜನತೆಗೆ ಪರಿಚಯಿಸಲು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅವರು ಮಂಗಳವಾರ ಇಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿ ಮಂಗಳೂರು ವಿಭಾಗ ವ್ಯಾಪ್ತಿಯ ಅಂಚೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಅಂಚೆ ಇಲಾಖೆಗೆ ನಾಗರಿಕರನ್ನು ಮತ್ತಷ್ಟು ಸೆಳೆಯುವ ಸಲುವಾಗಿ ಇ-ಮಾರುಕಟ್ಟೆ ಯೋಜನೆಯನ್ನು ಜಾರಿಗೊಳಿಸುವಂತೆ ಕೇಂದ್ರ ಸರಕಾರ ಸೂಚಿಸಿದೆ. ಆದರೆ ಅಂಚೆ ಇಲಾಖೆಯ ಅ ಧಿಕಾರಿಗಳು ಇದರಲ್ಲಿ ಯಾವುದೇ ಪ್ರಗತಿಯನ್ನು ತೋರಿಸಿಲ್ಲ. ಬೆಂಗಳೂರಿನಲ್ಲಿ ಇ-ಮಾರುಕಟ್ಟೆ ಯೋಜನೆ ಜಾರಿಯಾಗಿದ್ದರೂ ಜಿಲ್ಲೆಯಲ್ಲಿ ಇನ್ನೂ ಅನುಷ್ಠಾನಗೊಳ್ಳದಿರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದರು.

ಕೈಗಾರಿಕೆ ಜತೆಗೆ ಮಾತುಕತೆ ಒಳಿತು
ಕರಾವಳಿಯಲ್ಲಿ ಸಾಕಷ್ಟು ಸಣ್ಣ ಉದ್ದಿಮೆಗಳಿವೆ. ಬೈಕಂಪಾಡಿ, ಯೆಯ್ನಾಡಿ ಪ್ರದೇಶಗಳಿಗೆ ಭೇಟಿ ನೀಡಿ ಕೈಗಾರಿಕೆಗಳ ಜತೆಗೆ
ಮಾತುಕತೆ ನಡೆಸಿದರೆ, ಇ-ಮಾರುಕಟ್ಟೆ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಬಹುದು. ಈ ನಿಟ್ಟಿನಲ್ಲಿ ಜನತೆಗೂ ಸೌಲಭ್ಯದ ಬಗ್ಗೆ ಮಾಹಿತಿ ನೀಡುವ ಅಗತ್ಯವಿದೆ. ಆದ್ದರಿಂದ ಅಂಚೆ ಇಲಾಖೆಯಿಂದ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವಂತೆ ಅವರು ಸಲಹೆ ಮಾಡಿದರು.

ಅಧಿಕಾರಿಗಳ ಸಭೆ ನಡೆಸಿ
ಸುಕನ್ಯಾ ಸಮೃದ್ಧಿ ಹಾಗೂ ಪ್ರಧಾನ ಮಂತ್ರಿ ವಿಮಾ ಯೋಜನೆಗೆ ಆದಷ್ಟು ಹೆಚ್ಚಿನ ಜನರನ್ನು ಸೇರಿಸಬೇಕು. ಗ್ರಾಮೀಣ ಭಾಗಗಳ ಪ್ರತಿ ಬೂತ್‌ ಮಟ್ಟದಲ್ಲಿ ಅಂಚೆ ಕಚೇರಿಗಳು ಇರುತ್ತವೆ. ಅಲ್ಲದೆ ಪೋಸ್ಟ್‌ ಮ್ಯಾನ್‌ಗಳಿಗೆ ಪ್ರತಿಯೊಂದು ಮನೆಯ ಪರಿಚಯ ಇರುತ್ತದೆ. ಹಾಗಿರುವಾಗ ಈ ಯೋಜನೆಗಳು ಹೆಚ್ಚಿನ ಮನೆಗಳನ್ನು ಒಳಗೊಳ್ಳುವಂತೆ ಸುಲಭದಲ್ಲಿ ಮಾಡಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಪೋಸ್ಟ್‌ ಮ್ಯಾನ್‌ ಹಾಗೂ ಅಂಚೆ ಕಚೇರಿಗಳ ಅ ಧಿಕಾರಿ ಗಳಿಗೆ ಸಭೆ ನಡೆಸಿ ಗುರಿ ನಿಗದಿಪಡಿಸಲು ಸಂಸದರು ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿರಖು ಠೇವಣಿ ಹೊಂದುವಂತೆ ಮಾಡಬೇಕು. ಅಂಚೆ ಕಚೇರಿಯ ಪಿನ್‌ ಕೋಡ್‌ ಗಳು ಬದಲಾವಣೆಗೊಂಡಾಗ ಸೂಕ್ತ ಮಾಹಿತಿ ನೀಡಬೇಕು. ಇಲ್ಲದಿದ್ದರೆ ಸ್ಥಳೀಯ ಉದ್ದಿಮೆದಾರರಿಗೆ ತೊಂದರೆಯಾಗುತ್ತದೆ ಎಂದು ಹೇಳಿದರು.

ಅಂಚೆ ಕಚೇರಿಯಲ್ಲಿ ಇ-ಪಾವತಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಉಳಿತಾಯ ಖಾತೆಯನ್ನು ತೆರೆಯಲು ಶ್ರಮಿಸುವಂತೆ ನಳಿನ್‌ ಕುಮಾರ್‌ ಸೂಚನೆ ನೀಡಿದರು.

ಅಂಚೆಚೀಟಿ ರಹಿತ ವ್ಯವಸ್ಥೆ ಜನರಿಗೆ ತಿಳಿಸಿ
ಅಂಚೆ ಚೀಟಿಯನ್ನು  ಲಗತ್ತಿಸದೆ ಅಂಚೆ ಬಡವಾಟೆ ಮಾಡುವ ಹೊಸ ವಿಧಾನದ ಬಗ್ಗೆ ಜನತೆಗೆ ಹೆಚ್ಚಿನ ಪರಿಚಯ ಇಲ್ಲ. ಬ್ರಹ್ಮಕಲಶೋತ್ಸವ ಮುಂತಾದ ಧಾರ್ಮಿಕ ಸಂದರ್ಭಗಳಲ್ಲಿ ಅಂಚೆ ಇಲಾಖೆಯ ಈ ಸೌಲಭ್ಯವನ್ನು ಜನತೆಗೆ ಪರಿಚಯಿಸಲು ಅಂಚೆ ಅಧಿಕಾರಿಗಳು ಮುಂದಾಗಬೇಕು. ವಿಶೇಷ ಕಾರ್ಯಕ್ರಮಗಳ ವೇಳೆ  ಅಂಚೆ ಚೀಟಿ ಹಾಗೂ ವಿಶೇಷ ಅಂಚೆ ಕವರ್‌ಗಳನ್ನು ಹೊರತರುವ ಬಗ್ಗೆ ಆಸಕ್ತಿಯನ್ನು ತೋರಿಸಬೇಕು ಎಂದು ಸಂಸದರು ಸಲಹೆ ಮಾಡಿದರು.

ಟಾಪ್ ನ್ಯೂಸ್

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

5

Mangaluru: ಮಳೆ ನೀರು ಹರಿಯುವ ಕಾಲುವೆಗೆ ಪೈಪ್‌!

4

Kinnigoli: ಘನ ವಾಹನ ನಿರ್ಬಂಧ; ಜನ ಪರದಾಟ

3

Mangaluru: ಕೊಕ್ಕಡದ ʼಸಾಂತಾ ಕ್ಲಾಸ್‌ʼ ವಿನ್ಸೆಂಟ್‌ ಕ್ರಿಸ್ಮಸ್‌ ತಿರುಗಾಟಕ್ಕೆ 25 ವರ್ಷ!

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

7(1

Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

6

Gangolli-ಕುಂದಾಪುರ ಬಾರ್ಜ್‌ ಕನಸಿಗೆ ತಣ್ಣೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.