ದೇವಸ್ಥಾನ ಸದ್ಭಾವನೆ ಕೇಂದ್ರವಾಗಬೇಕು: ರಮಾನಾಥ ರೈ


Team Udayavani, Dec 23, 2017, 3:36 PM IST

23-Dec-14.jpg

ಕಬಕ: ದೇವಸ್ಥಾನ ಎಂದರೆ ಅದು ಸಮಾಜಕ್ಕೆ ಸದ್ಭಾವನೆ ನೀಡುವ ಕೇಂದ್ರವಾಗಬೇಕು. ದೇವಾಲಯಗಳಂತ ಶ್ರದ್ಧಾಕೇಂದ್ರಗಳಿಂದ ಸಮಾಜವನ್ನು ಸರಿದಾರಿಗೆ ತರಲು ಸಾಧ್ಯ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಹೇಳಿದರು. ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಒಳಾಂಗಣದ ಮೇಲ್ಛಾ ವಣಿಯನ್ನು ಶುಕ್ರವಾರ ದೀಪಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ದೇವಾಲಯಗಳನ್ನು ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು, ಅಭಿವೃದ್ಧಿಗೊಂಡಾಗ ನಮ್ಮ ಗ್ರಾಮವೂ ಅಭಿವೃದ್ಧಿಗೊಳ್ಳುತ್ತದೆ ಎನ್ನುವುದು ನಮ್ಮ ನಂಬಿಕೆಯಾಗಿದೆ. ದೇವಾಲಯದ ದುಡ್ಡು ದೇವಾಲಯಕ್ಕೆ ಸೇರಬೇಕು. “ಎ’ ಗ್ರೇಡ್‌ ದೇವಾಲಯದಲ್ಲಿ ಉಳಿತಾಯವಾದ ಹಣವನ್ನು ಆ ಗ್ರಾಮದಲ್ಲಿರುವ ‘ಸಿ’ ಗ್ರೇಡ್‌ ದೇವಾಲಯಗಳ ಅಭಿವೃದ್ಧಿಗೆ ಉಪಯೋಗಿಸುವಂತಾಗಬೇಕು ಎಂದರು.

ಸಮಾಜವನ್ನು ಒಂದು ಮಾಡೋಣ
ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಸಮಾಜವನ್ನು ಒಂದು ಮಾಡುವ ಕೆಲಸವನ್ನು ಮಾಡೋಣ. ಸಮಾಜವನ್ನು ಒಡೆಯುವ ಕೆಲಸಕ್ಕೆ ಕೈ ಹಾಕಬೇಡಿ. ಇಡ್ಕಿದು ಗ್ರಾಮದಲ್ಲಿ ಇದೀಗಾಗಲೇ ನಿರ್ಮಾಣವಾಗಿರುವ ಹಿಂದೂ ರುದ್ರಭೂಮಿಯನ್ನು ನೋಡಲು ಹೊರ ರಾಜ್ಯದಿಂದಲೂ ಅನೇಕ ಜನರು ಬರುತ್ತಿದ್ದಾರೆ. ಇದೇ ಗ್ರಾಮದ ಮಿತ್ತೂರು ಶಾಲೆಯ ಸುತ್ತ ಅಡಿಕೆ, ತರಕಾರಿ ಕೃಷಿಯನ್ನು ಮಾಡಲಾಗಿದ್ದು, ಅಲ್ಲಿ ಒಂದು ಸುಂದರ ವಾತಾವರಣ ನಿರ್ಮಾಣವಾಗಿದೆ ಎಂದರು.

ಸುತ್ತೋಲೆ ಹೊರಡಿಸಲಾಗಿದೆ
ರಾಜ್ಯ ಧಾರ್ಮಿಕ ಪರಿಷತ್‌ನ ಸದಸ್ಯ ಜಗನ್ನಿವಾಸ ರಾವ್‌ ಮಾತನಾಡಿ, ದೇವಸ್ಥಾನಗಳು ಕೇವಲ ಶ್ರದ್ಧಾಕೆಂದ್ರವಾಗಿರದೆ ಎಲ್ಲ ವಿಚಾರವನ್ನು ಕಲಿಸುವ ಕೇಂದ್ರವಾಗಬೇಕು. ‘ಎ’ ಗ್ರೇಡ್‌ ನಲ್ಲಿರುವ ದೇವಸ್ಥಾನಗಳು ತಮ್ಮ ಸುತ್ತಮುತ್ತಲಲ್ಲಿರುವ ‘ಸಿ’ ಗ್ರೇಡ್‌ ದೇವಾಲಯವನ್ನು ದತ್ತು ಪಡೆದು ಅಭಿವೃದ್ಧಿ ಮಾಡಬೇಕು ಎಂದು ಈಗಾಗಲೇ ಸುತ್ತೋಲೆಗಳನ್ನು ಹೊರಡಿಸಲಾಗಿದೆ. ಮುಜರಾಯಿ ಇಲಾಖೆಗೆ ಒಳಪಟ್ಟ ದೇವ ಸ್ಥಾನಗಳ ಆಡಳಿತ ಉತ್ತಮ ರೀತಿಯಲ್ಲಿ ನಡೆಯಬೇಕು ಎನ್ನುವುದು ನಮ್ಮ ಆಶಯ ಎಂದರು.

ಅಭಿವೃದ್ಧಿ ನಮ್ಮ ಗುರಿ
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕ.ಶಿ. ವಿಶ್ವನಾಥ ಉರಿಮಜಲು ಪ್ರಾಸ್ತಾವಿಸಿ, ಶಾಲೆ ದೇವಸ್ಥಾನಗಳಲ್ಲಿ ರಾಜಕೀಯ ತರಬೇಡಿ ಅದು ಒಳಿತಲ್ಲ. ಅಪಪ್ರಚಾರಗಳಿಗೆ ಯಾರೂ ಕಿವಿಕೊಡಬೇಡಿ, ಅಭಿವೃದ್ಧಿ ಒಂದೇ ನಮ್ಮ ಗುರಿಯಾಗಿದೆ ಎಂದು ಹೇಳಿದರು.

ದೇವಾಲಯದ ಒಳಾಂಗಣದ ಮೇಲ್ಛಾವಣಿಯ ಕೆಲಸ ನಿರ್ವಹಿಸಿದ ರಮೇಶ್‌ ಆಚಾರ್ಯ, ಬಳಗದವರನ್ನು ಸಚಿವರು ಹಾಗೂ ಶಾಸಕರು ಶಾಲು ಹೊದೆಸಿ ಗೌರವಿಸಿದರು. ಅಂಕಿತಾ ಮಿತ್ತೂರು ಪ್ರಾರ್ಥಿಸಿದರು. ವ್ಯವಸ್ಥಾಪನ ಸಮಿತಿ ಸದಸ್ಯ ಕೆ.ಎಸ್‌. ಪ್ರಕಾಶ್‌ ಉರಿಮಜಲು ಸ್ವಾಗತಿಸಿ.ವ್ಯವಾಸ್ಥಾಪನ ಸಮಿತಿ ಸದಸ್ಯೆ ಶ್ಯಾಮಲಾ ಮಿತ್ತೂರು ವಂದಿಸಿದರು. ಕೇಶವ ಮುಂಡ್ರುಬೈಲ್‌ ಕಾರ್ಯಕ್ರಮ ನಿರೂಪಿಸಿದರು.

10 ಲಕ್ಷ ರೂ. ವೆಚ್ಚದ ಮೇಲ್ಛಾವಣಿ
ಕೋಲ್ಪೆ ಶ್ರೀಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಒಳಾಂಗಣದ ಮೇಲ್ಛಾವಣಿ ಸುಮಾರು ಹತ್ತು ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿದೆ. ಕಳೆದ ಚಂಪಾಷಷ್ಠಿಯ ದಿನ ಮೇಲ್ಛಾವಣಿ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಲಾಗಿತ್ತು. ಅದಕ್ಕೆ ಜಿಲ್ಲಾ  ಉಸ್ತುವಾರಿ ಸಚಿವರು 3 ಲಕ್ಷ ರೂಪಾಯಿ ಅನುದಾನ ಒದಗಿಸಿದ್ದು, ಉಳಿದ ಮೊತ್ತವನ್ನು ಊರ ಪರವೂರ ಭಕ್ತರಲ್ಲಿ ಸಂಗ್ರಹಿಸಲು ಮನವಿ ಮಾಡಲಾಗಿದೆ ಎಂದು ಕೆ.ಎಸ್‌. ಪ್ರಕಾಶ್‌ ಉರಿಮಜಲು ಹೇಳಿದರು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.