Ayodhya ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ ಸಂಭ್ರಮಕ್ಕೆ ಸಾಕ್ಷಿಯಾದ ದೇಗುಲಗಳು
Team Udayavani, Jan 22, 2024, 11:27 PM IST
ಮಂಗಳೂರು/ಉಡುಪಿ: ವಿವಿಧ ದೇವಾಲಯ ಗಳಲ್ಲಿ ಮುಂಜಾನೆಯಿಂದ ರಾತ್ರಿಯವರೆಗೂ ಹಬ್ಬದ ವಾತಾವರಣ ಮನೆ ಮಾಡಿತ್ತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ವಿವಿಧ ದೇವಳಗಳಿಗೆ ಭೇಟಿ ನೀಡಿ, ದೇವರ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ಪ್ರಮುಖ ದೇವಾಲಯಗಳಾದ ಕದ್ರಿ, ಮಂಗಳಾದೇವಿ, ಮರೋಳಿ ಸೂರ್ಯನಾರಾಯಣ, ಕುದ್ರೋಳಿ ಗೋಕರ್ಣನಾಥ ದೇವಸ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಬಪ್ಪನಾಡು, ಪೊಳಲಿ, ಕುಡುಪು ಸೇರಿದಂತೆ ಜಿಲ್ಲೆಯ ಎಲ್ಲ ದೇಗುಲಗಳಲ್ಲಿ ವಿಶೇಷ ಪೂಜೆಗಳು, ಅಭಿಷೇಕ, ರಾಮತಾರಕ ಮಂತ್ರ, ರಾಮ ರಕ್ಷಾ ಸ್ತೋತ್ರ ಪಠಣ, ಹವನ, ಲಕ್ಷ ತುಳಸಿ ಅರ್ಚನೆ ಮೊದಲಾದ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.
ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ರಾಮಪ್ರತಿಷ್ಠೆಯ ಲೈವ್ ವೀಕ್ಷಣೆ, ಪಾನಕ ವಿತರಣೆ ನಡೆಯಿತು.
ಬಿಗಿ ಬಂದೋಬಸ್ತ್
ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಬಂದೋಬಸ್ತ್ ಗೆ 3,000ಕ್ಕೂಅಧಿಕ ಪೊಲೀಸರನ್ನು ನಿಯೋಜಿಸಲಾಗಿತ್ತು. ಕಾರ್ಯಕ್ರಮ ಸ್ಥಳಗಳು, ಸೂಕ್ಷ್ಮ ಪ್ರದೇಶ ಸೇರಿದಂತೆ ವಿವಿಧೆಡೆ ಮೀಸಲು ಪೊಲೀಸ್ ಪಡೆ ಹಾಗೂ ಸ್ಥಳೀಯ ಪೊಲೀಸರು ನಿಗಾ ವಹಿಸಿ ದ್ದರು. ಹಿರಿಯ ಅಧಿಕಾರಿಗಳು ಕೂಡ ರೌಂಡ್ಸ್ ನಡೆಸಿದರು. ಗೊಂದಲ, ಅಡ್ಡಿ
ಗಳಿಲ್ಲದೆ ಕಾರ್ಯಕ್ರಮಗಳು ನಡೆದಿವೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಮತ್ತು ಎಸ್‌ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.