ಶ್ರೀಲಂಕಾದಲ್ಲಿ ಉಗ್ರರ ದಾಳಿ: ಸಂತಾಪ ಸಭೆ
Team Udayavani, Apr 28, 2019, 6:00 AM IST
ಉಳ್ಳಾಲ: ಶ್ರೀಲಂಕಾದಲ್ಲಿ ಉಗ್ರರ ಹೀನಾಯ ಕೃತ್ಯವನ್ನು ಎಲ್ಲ ದೇಶಗಳು ಒಗ್ಗೂಡಿ ಖಂಡಿಸಬೇಕಿದೆ. ಮೃತರ ಕುಟುಂಬಗಳಿಗೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ. ಬಡ ಕುಟುಂಬದವರೂ ಸಾವನ್ನಪ್ಪಿರುವುದು ದುರಾದೃಷ್ಟಕರ ವಾ ಗಿದ್ದು, ಸರಕಾರ ಸಹಾಯಹಸ್ತವನ್ನು ನೀಡಬೇಕು ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಈಶ್ವರ್ ಉಳ್ಳಾಲ್ ಅಭಿಪ್ರಾಯಪಟ್ಟರು.
ಇತ್ತೀಚೆಗೆ ಶ್ರೀಲಂಕಾದಲ್ಲಿ ನಡೆದ ಚರ್ಚ್ ದಾಳಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾಕ ಘಟಕ ಮತ್ತು ಯುವ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ಜರಗಿದ ಬೃಹತ್ ಸಂತಾಪ ಮತ್ತು ಖಂಡನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಜಿಲ್ಲಾ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಎನ್.ಎಸ್. ಕರೀಂ ಮಾತನಾಡಿದರು.
ತಾ.ಪಂ. ಅಧ್ಯಕ್ಷ ಮಹಮ್ಮದ್ ಮೋನು, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾಕ ಘಟಕ ಅಧ್ಯಕ್ಷ ಆಲ್ವಿನ್ ಡಿ’ಸೋಜಾ, ಪ್ರ. ಕಾರ್ಯದರ್ಶಿ ಬಾತಿಸ್, ಹಿಂದುಳಿದ ವರ್ಗಗಳ ಅಧ್ಯಕ್ಷ ದಿನೇಶ್ ಕುಂಪಲ, ನಗರಸಭೆ ಮಾಜಿ ಅಧ್ಯಕ್ಷರಾದ ಬಾಝಿಲ್ ಡಿ’ಸೋಜಾ, ಹುಸೈನ್ ಕುಂಞಿ ಮೋನು ಯು.ಎ. ಇಸ್ಮಾಯಿಲ್, ಶಶಿಕಲಾ, ವೀಣಾ ಡಿ’ಸೋಜಾ ಮತ್ತು ಅಜೀಜ್ ಮಾಡೂರು, ವಿಲ್ಮಾ, ಮನ್ಸೂರು, ಜಾನ್, ಕೋಟೆಕಾರು ಪ. ಪಂ. ಸದಸ್ಯ ಹಮೀದ್ ಹಸನ್ ಮಾಡೂರು, ಪುಷ್ಠಿ ಮಹ ಮ್ಮದ್, ಡೇನಿಸ್ ಡಿ’ಸೋಜಾ, ಕಾಂಗ್ರೆಸ್ ಜಿ.ಉ.ಪಿ.ಎಚ್. ಇಸ್ಮಾಯಿಲ್, ಝಕಾ ರಿ ಯಾ, ಅಹಮ್ಮದ್ ಅಜ್ಜಿನಡ್ಕ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.