ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ವರದಿ ಆಧರಿಸಿ ಕ್ರಮ: ಸಿಎಂ ಬೊಮ್ಮಾಯಿ
Team Udayavani, Jun 1, 2022, 7:20 AM IST
ಮಂಗಳೂರು / ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿ ಎಲ್ಲ ಆಯಾಮ ಗಳಿಂದಲೂ ಪರಿಶೀಲಿಸಿ ಶಿಕ್ಷಣ ಸಚಿವರು ವರದಿ ನೀಡಲಿದ್ದಾರೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಂಗಳ ವಾರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಟೀಕೆಗಳಿಗೆ ಸಂಬಂಧಿಸಿ ಆದಿಚುಂಚನಗಿರಿ ಸ್ವಾಮೀಜಿಗಳನ್ನು ಭೇಟಿ ಮಾಡಿ ಸತ್ಯಾಂಶವನ್ನು ದಾಖಲೆ ಸಮೇತ ವಿವರಿಸುವುದಾಗಿ ಸಚಿವರು ತಿಳಿಸಿದ್ದು, ಅವರ ವರದಿ ಬಂದ ಅನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗು ವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೇಳಿದರು.
ನಮ್ಮ ಬರಹ ಬೇಡ: ಲೇಖಕರ ಒತ್ತಾಯ
ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಮತ್ತಷ್ಟು ತಾರಕಕ್ಕೆ ಏರಿದೆ. ಹೊಸ ಬೆಳವಣಿಗೆ ಯಲ್ಲಿ 9ನೇ ತರಗತಿ ಪಠ್ಯ ಪುಸ್ತಕ ರಚನೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪ್ರೊ| ಕೆ.ಎಸ್. ಮಧುಸೂದನ ರಾಜೀನಾಮೆ ನೀಡಿದ್ದಾರೆ.
ಹಿರಿಯ ಸಾಹಿತಿಗಳಾದ ಬೊಳುವಾರು ಮೊಹಮ್ಮದ್ ಕುಂಞ, ಲೇಖಕಿ ರೂಪಾ ಹಾಸನ ಸೇರಿದಂತೆ ಹಲವರು ಲೇಖಕರು ತಮ್ಮ ಬರಹಗಳನ್ನು ಸೇರ್ಪಡೆ ಮಾಡುವುದು ಬೇಡ ಎಂದು ಸರಕಾರಕ್ಕೆ ಮನವಿ ಮಾಡಿದ್ದಾರೆ.
ಮಳಲಿ ಮಸೀದಿ
ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಂತೆ ಮಳಲಿ ಮಸೀದಿಯ ಸರ್ವೇ ಆಗಬೇಕು ಎಂಬ ಕೂಗು ಕೇಳಿ ಬರುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಕರಣವು ನ್ಯಾಯಾಲಯದಲ್ಲಿದ್ದು, ಜೂನ್ 3ಕ್ಕೆ ವಿಚಾರಣೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವುದು ಉಚಿತವಲ್ಲ ಎಂದರು.
ದ.ಕ. ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಬೊಮ್ಮಾಯಿ ಅವರು ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಆಗಮಿಸಿದರು.
ಸಚಿವರಾದ ವಿ. ಸುನಿಲ್ ಕುಮಾರ್, ಎಸ್. ಅಂಗಾರ, ಶಾಸಕರಾದ ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪೊಲೀಸ್ ಆಯುಕ್ತ ಶಶಿಕುಮಾರ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.