ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿ ಖಂಡನೀಯ: ನಳಿನ್ ಕುಮಾರ್
ಸಚಿವ ನಾಗೇಶ್ ನಿವಾಸದ ಮೇಲೆ ದಾಳಿ
Team Udayavani, Jun 2, 2022, 5:40 AM IST
ಮಂಗಳೂರು: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಯ ಮೇಲೆ ಕಾಂಗ್ರೆಸ್ ಹಾಗೂ ಎನ್‌ಎಸ್‌ಯುಐ ಕಾರ್ಯಕರ್ತರು ದಾಳಿ ನಡೆಸಿ ದಾಂಧಲೆ ನಡೆಸಿದ್ದು, ಕಾಂಗ್ರೆಸ್‌ನ ಗೂಂಡಾ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಸರಕಾರ ಮಾಡಿದ ಕೆಲಸವನ್ನು ವಿರೋಧಿಸುವ ಮತ್ತು ಆಂದೋಲನ ಮಾಡುವ ಅಧಿಕಾರ, ಹಕ್ಕು ಪ್ರತಿಯೊಬ್ಬರಿಗೂ ಇದೆ. ಆದರೆ ಆಂದೋಲನವನ್ನು ಮಾಡುವುದು ಬಿಟ್ಟು ಗೂಂಡಾ ವರ್ತನೆ ಮಾಡಿರುವುದು ಖಂಡನೀಯ. ಇದು ಆ ಪಕ್ಷದ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್‌ನ ಈ ರೀತಿಯ ಗೂಂಡಾ ಪ್ರವೃತ್ತಿಯನ್ನು ನೋಡಿದ ಜನರು ಕೇಂದ್ರ ಹಾಗೂ ರಾಜ್ಯದಲ್ಲಿ ಪಕ್ಷವನ್ನು ತಿರಸ್ಕಾರ ಮಾಡಿದ್ದಾರೆ ಎಂದರು.
ಸಚಿವರ ನಿವಾಸದ ಮೇಲೆ ನಡೆದ ದಾಳಿ ಒಂದು ವ್ಯವಸ್ಥಿತ ಷಡ್ಯಂತ್ರ. ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯೇ ಇದಕ್ಕೆ ಕಾರಣ. ಇಂತಹ ವರ್ತನೆ ಮುಂದುವರಿದರೆ ನಮ್ಮ ಕಾರ್ಯಕರ್ತರು ಸುಮ್ಮನೆ ಕೂರುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಸಮಗ್ರ ತನಿಖೆಗೆ ಸೂಚನೆ
ಸಚಿವರ ನಿವಾಸದ ಮೇಲಿನ ದಾಳಿ ಪ್ರಕರಣವನ್ನು ಸರಕಾರ ಸಮಗ್ರ ತನಿಖೆ ನಡೆಸಬೇಕು. ಈಗಾಗಲೇ 15 ಆರೋಪಿಗಳನ್ನು ಬಂಧಿಸಲಾಗಿದೆ. ಬಾಕಿ ಇರುವ ಆರೋಪಿಗಳನ್ನು ಬಂಧಿಸಿ ಕಠಿನ ಕ್ರಮ ಕೈಗೊಳ್ಳಬೇಕು ಎಂದು ನಳಿನ್‌ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.