ತಣ್ಣೀರುಪಂತ: 93 ವರ್ಷದ ಶಾಲೆ ಶಿಥಿಲ
Team Udayavani, Jul 27, 2018, 10:53 AM IST
ಉಪ್ಪಿನಂಗಡಿ : ಗ್ರಾಮೀಣ ಭಾಗದಲ್ಲಿ ಬರೋಬ್ಬರಿ 93 ವರ್ಷ ಹಳೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯೊಂದರ ಕಟ್ಟಡದಲ್ಲಿ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಮಣ್ಣಿನ ಗೋಡೆಯ ಕೋಣೆಯೊಳಗೆ ತಮಗರಿವಿಲ್ಲ ದೆಯೇ ಖುಷಿಯಿಂದ ಮಕ್ಕಳು ನಲಿದಾಡುತ್ತಿದ್ದಾರೆ. ಅಪಾಯದಲ್ಲಿರುವ ಶಾಲಾ ಕಟ್ಟಡದತ್ತ ಸಂಬಂಧಪಟ್ಟವರು ಗಮನ ಹರಿಸದೇ ಇದ್ದಲ್ಲಿ ಯಾವುದೇ ಕ್ಷಣದಲ್ಲಿ ಅವಘಡ ಸಂಭವಿಸುವ ಸಾಧ್ಯತೆ ಇದೆ.
ಈ ಶಾಲೆ ಇರುವುದು ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದಲ್ಲಿ. ಇಲ್ಲಿ 1ರಿಂದ 8ನೇ ತರಗತಿ ವರೆಗಿನ ಒಟ್ಟು 124 ವಿದ್ಯಾರ್ಥಿಗಳು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಕಟ್ಟಡದಲ್ಲಿ 8 ತರಗತಿ ಕೋಣೆಗಳಿದ್ದು, ಈ ಪೈಕಿ 2 ಕೋಣೆಗಳ ಛಾವಣಿ ಮುರಿದು ಬೀಳುವ ಸ್ಥಿತಿಯಲ್ಲಿದೆ. ಶಾಲೆಯ ಆವರಣ ಗೋಡೆ ಸಂಪೂರ್ಣ ಕುಸಿದಿದೆ. ಕೊಠಡಿಯ ಮೇಲೆ ಮರವೊಂದು ವಾಲಿಕೊಂಡಿದೆ.
ಮನವಿಗೂ ಸ್ಪಂದನೆ ಇಲ್ಲ
ಈ ಶಾಲೆಗೆ ಬರುವ ಶಿಕ್ಷಕರೂ ಇಲ್ಲಿರಲು ಹಿಂಜರಿಯುತ್ತಾರೆ. ವರ್ಗಾವಣೆಯಾಗಲಿ ಎಂದು ಬಯಸುತ್ತಾರೆ. ಆದರೆ ಯಾರೂ ಕೂಡ ಬಹಿರಂಗವಾಗಿ ಹೇಳಿಕೊಳ್ಳಲು ಮುಂದೆ ಬರುವುದಿಲ್ಲ. ಸಂಬಂಧಪಟ್ಟವರು ಕಳೆದೈದು ವರ್ಷಗಳಿಂದ ನೂತನ ಕಟ್ಟಡ ನಿರ್ಮಿಸುವಂತೆ ಹತ್ತಾರು ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಗತಿಯಾಗಿಲ್ಲ.
2 ಕೊಠಡಿಗಳಿಗೆ ಬೀಗ!
ಈ ಶಾಲಾ ಕಟ್ಟಡಕ್ಕೆ ಸಂಬಂಧಿಸಿದಂತೆ 2 ವರ್ಷಗಳ ಹಿಂದೆಯೇ ಗ್ರಾಮಸ್ಥರು ಶಿಕ್ಷಣ ಇಲಾಖೆಯನ್ನು ತರಾಟೆ ತೆಗೆದುಕೊಂಡಿದ್ದರು. ಆನಂತರದಲ್ಲಿ ಆಗಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಣ ಸಂಯೋಜಕರನ್ನು ಕಳುಹಿಸಿದ್ದರು. ಅವರು ಪರಿಶೀಲನೆ ನಡೆಸಿ ಕಟ್ಟಡದ 2 ಕೊಠಡಿಗಳಿಗೆ ಬೀಗ ಹಾಕಿ ಸಿದ್ದು, ಉಳಿದ 6 ಕೊಠಡಿಗಳಲ್ಲಿ ಮಾತ್ರ ಪಾಠ ಮಾಡುವಂತೆ ಸೂಚಿಸಿದ್ದರು. ಆದರೆ ಇಲ್ಲಿ ತೀರಾ ಅಪಾಯದಲ್ಲಿರುವ 2 ಕೊಠಡಿಗಳಿಗೆ ಹೊಂದಿಕೊಂಡೇ ಇತರ ಕೊಠಡಿಗಳಿದೆ. ಆ ಕೋಣೆಗಳ ಛಾವಣಿ ಮುರಿದರೆ ಇತರ 6 ಕೋಣೆಗಳಿಗೂ ಅದರ ಪರಿಣಾಮ ಬೀರುತ್ತದೆ.
ಬಂದ ಅನುದಾನ ವರ್ಗಾವಣೆ
ಎರಡು ವರ್ಷಗಳ ಹಿಂದೆ ಮಾಜಿ ಶಾಸಕ ವಸಂತ ಬಂಗೇರ ಅವರು ಮಕ್ಕಳಿಗೆ ಸೈಕಲ್ ವಿತರಣೆಗೆಂದು ಈ ಶಾಲೆಗೆ ಬಂದವರು ಕೋಣೆಗಳ ದುಃಸ್ಥಿತಿಯನ್ನು ಕಂಡಿ ದ್ದಾರೆ. ತತ್ ಕ್ಷಣವೇ ಜಿ.ಪಂ. ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲನೆ ಮಾಡಿಸಿದ್ದಾರೆ. 12 ಲಕ್ಷ ರೂ. ವೆಚ್ಚದಲ್ಲಿ ಶಾಲೆಗೆ ನೂತನ ಕಟ್ಟಡ ನಿರ್ಮಿಸುವ ಭರವಸೆಯನ್ನೂ ಶಾಸಕರು ನೀಡಿದ್ದರು. ಕಟ್ಟಡದ ರಿಪೇರಿಗೆ 4 ಲಕ್ಷ ರೂ. ಅನುದಾನ ಒದಗಿಸಿಕೊಡುವಂತೆ ಶಾಲಾ ಮುಖ್ಯ ಶಿಕ್ಷಕರು ಬೇಡಿಕೆ ಇಟ್ಟಿದ್ದರು. ಆನಂತರದಲ್ಲಿ 12 ಲಕ್ಷ ರೂ. ಅನುದಾನ ಮಂಜೂರಾಗಿದ್ದರೂ, ಅದು ಪುತ್ತಿಲ ಗ್ರಾಮದ ಹೇರಾಜೆ ಶಾಲೆಗೆ ವರ್ಗಾವಣೆಗೊಂಡಿತ್ತು. ಶಾಲೆಯ ಸ್ಥಿತಿ ಗಂಭೀರವಾಗಿದ್ದರೂ, ಕ್ಷೇತ್ರ ಶಿಕ್ಷಣಾಕಾರಿಗಳು ಖುದ್ದು ಪರಿಶೀಲನೆ ನಡೆಸಿಲ್ಲದಿರುವುದು ಖೇದಕರ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಮಾಹಿತಿ ಬಂದಿಲ್ಲ
ತಣ್ಣೀರುಪಂತ ಸರಕಾರಿ ಶಾಲೆ ಅಪಾಯದ ಸ್ಥಿತಿಯಲ್ಲಿರುವ ಕುರಿತು ಯಾವುದೇ ಮಾಹಿತಿ ಈವರೆಗೆ ಬಂದಿಲ್ಲ. ಒಂದೊಮ್ಮೆ ಮನವಿ ಬಂದರೆ ಮೇಲಧಿಕಾರಿಗಳ ಮೂಲಕ ಸರಕಾರದ ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗುವುದು.
– ಗುರುಪ್ರಸಾದ್
ಕ್ಷೇತ್ರ ಶಿಕ್ಷಣಾಧಿಕಾರಿ, ಬೆಳ್ತಂಗಡಿ
ಎಂ.ಎಸ್. ಭಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.