ಇರಾನಿನ 15 ಮೀನುಗಾರರ ಬಂಧನ

ಅಕ್ರಮ ಮೀನುಗಾರಿಕೆ: ದೋಣಿ ಮುಳುಗಡೆ

Team Udayavani, Nov 2, 2019, 3:16 AM IST

nov-38

ಸಾಂದರ್ಭಿಕ ಚಿತ್ರ

ಸುರತ್ಕಲ್‌: ಅಗತ್ತಿ ಲಕ್ಷದ್ವೀಪದಿಂದ ಸುಮಾರು 165 ನಾಟಿಕಲ್‌ ಮೈಲು ದೂರದಲ್ಲಿ ಭಾರತೀಯ ಜಲ ಸೀಮೆಯ ಒಳಗಡೆ ಪ್ರವೇಶಿಸಿ ಮೀನುಗಾರಿಕೆಯಲ್ಲಿ ತೊಡಗಿದ್ದ ಇರಾನಿನ ಅವಿ ಮತ್ತು ಇಶಾನ್‌ ಎಂಬ ಎರಡು ಮೀನುಗಾರಿಕೆ ಬೋಟುಗಳ ಸಹಿತ 15 ಮೀನುಗಾರರನ್ನು ಕೋಸ್ಟ್‌ ಗಾರ್ಡ್‌ ಬಂಧಿಸಿದೆ.

ಅಬೂಬಕರ್‌ ಅನ್ಸಾರಿ ಮೀಯಾವ, ಮೂಸಾ ದೆಹದಾನಿ, ಅಜಂ ಅನ್ಸಾರಿ, ಶಿದ್‌ ಬಾಚೂ, ಅಬ್ದುಲ್‌ ಮಜೀದ್‌, ಮಜೀದ್‌ ರೆಹಮಾನಿ ದಾವೂದ್‌, ಮಹಮ್ಮದ್‌ ಇಸಾಕ್‌, ಕರೀಂ ಬಕ್ಸ್‌ ದೂರ್‌ಜಾದೆ, ಮಹಮ್ಮದ್‌ ಬಲೂಚ್‌, ಬಮನ್‌, ಅಬ್ದುಲ್‌ ಗನಿ ಬಾಪೂರ್‌, ನಸೀರ್‌ ಭದ್ರುಜ್‌, ಅನ್ವರ್‌ ಬಲೂಚ್‌, ನಭೀ ಬಕ್ಸ್, ಯೂಸೂಫ್‌ ಜಹಾನಿ ಬಂ ತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಭಾರತೀಯ ಕೋಸ್ಟ್‌ಗಾರ್ಡ್‌ನ ವಿಕ್ರಮ್‌ ನೌಕೆ ಭಾರತೀಯ ಜಲಸೀಮೆಯಲ್ಲಿ ಗಸ್ತು ನಡೆಸುತ್ತಿದ್ದಾಗ ಅ.21ರಂದು ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ಈ ಮೀನುಗಾರಿಕೆ ಬೋಟುಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿತ್ತು. ಆದರೆ ಬೋಟುಗಳನ್ನು ನಿಲ್ಲಿಸದೆ ಮುಂದಕ್ಕೆ ಚಲಾಯಿಸಿಕೊಂಡು ಹೋಗಿದ್ದು, ಇದರಿಂದ ಸಂಶಯಗೊಂಡು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ಯಾವುದೇ ದಾಖಲೆಗಳಿರಲಿಲ್ಲ.

ಮಾತ್ರವಲ್ಲದೆ ಬೇಜವಾಬ್ದಾರಿಯಾಗಿ ವರ್ತಿಸಿದ್ದಾರೆ. ತತ್‌ಕ್ಷಣ ಬೋಟುಗಳನ್ನು ವಶಕ್ಕೆ ಪಡೆದು ನವಮಂಗಳೂರು ಬಂದರಿಗೆ ಕರೆತರುತ್ತಿರುವ ಬರುವ ಸಂದರ್ಭ ಅವಿ ಬೋಟ್‌ ತಾಂತ್ರಿಕ ತೊಂದರೆಯಿಂದ ಅಗತಿ ಲಕ್ಷದ್ವೀಪದ ಬಳಿ ಸಮುದ್ರದಲ್ಲಿ ಮುಳುಗಡೆ ಆಯಿತು. ಅದರಲ್ಲಿದ್ದ ಸಿಬಂದಿಯನ್ನು ಇಶಾನ್‌ ಬೋಟಿನಲ್ಲಿ ನವಮಂಗಳೂರು ಬಂದರಿಗೆ ಕರೆತರಲಾಯಿತು.
ಬಂಧಿತರು ಇರಾನಿ ಪ್ರಜೆಗಳಾಗಿದ್ದು, ಅವರ ವಿರುದ್ಧ ಭಾರತೀಯ ಜಲಸೀಮೆಯೊಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಪರವಾನಿಗೆ ಇಲ್ಲದೆ ಮೀನುಗಾರಿಕೆಯಲ್ಲಿ ತೊಡಗಿದ್ದು ಮತ್ತು ನೌಕಾಪಡೆಯ ಅ ಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ್ದು ಮತ್ತು ಭಾರತೀಯ ಜಲಸಂಪತ್ತನ್ನು ಕಾನೂನುಬಾಹಿರವಾಗಿ ಸಂಗ್ರಹಿಸಿ ಅಪರಾಧವೆಸಗಿದ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು ಕರಾವಳಿ ಕಾವಲು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸೂಪರಿಂಡೆಂಟ್‌ ಆಫ್‌ ಪೊಲೀಸ್‌ ಮಾರ್ಗದರ್ಶನದಲ್ಲಿ ಮಂಗಳೂರು ಡಿವೈಎಸ್‌ಪಿ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ

Naxal-Vikram-Sister

Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

Russia-Putin

‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅಣ್ವಸ್ತ್ರ ದಾಳಿ ಎಚ್ಚರಿಕೆ!

Peetabail-Naxal-encounter-Vikram

Encounter: ನಕ್ಸಲ್‌ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್‌ ಮಾರುವೇಷ’!

Frud

Mangaluru: “ಡ್ರೀಮ್‌ ಡೀಲ್‌’ ಲಕ್ಕಿ ಡ್ರಾ: ವಂಚನೆ ಜಾಲತಾಣದಲ್ಲಿ ವೀಡಿಯೋ ವೈರಲ್‌

Naxal-Subramanya

Subhramanya: 9 ತಿಂಗಳ ಹಿಂದೆ ಪೊಲೀಸರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದನೇ ವಿಕ್ರಂ ಗೌಡ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Frud

Mangaluru: “ಡ್ರೀಮ್‌ ಡೀಲ್‌’ ಲಕ್ಕಿ ಡ್ರಾ: ವಂಚನೆ ಜಾಲತಾಣದಲ್ಲಿ ವೀಡಿಯೋ ವೈರಲ್‌

Naxal-Subramanya

Subhramanya: 9 ತಿಂಗಳ ಹಿಂದೆ ಪೊಲೀಸರಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದನೇ ವಿಕ್ರಂ ಗೌಡ?

courts

Mangaluru: ಅಪ್ರಾಪ್ತೆಯ ಗರ್ಭಪಾತ ಆರೋಪ; ವೈದ್ಯರು ದೋಷಮುಕ್ತ

Yakahagana-Academy

Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ

Brahmavar

Mangaluru: ಕಾರು ಢಿಕ್ಕಿ; ಕಾರ್ಮಿಕ ಮೃತ್ಯು

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Naxal-Postmartam

Naxal Vikram Gowda: ಮೂರು ಬಾರಿ ತಪ್ಪಿಸಿಕೊಂಡವ ಹುಟ್ಟೂರಲ್ಲೇ ಪ್ರಾಣ ತೆತ್ತ

Naxal-Vikram-Sister

Naxal Vikram Encounter: ಟಿವಿ ನೋಡಿ ವಿಷಯ ತಿಳಿಯಿತು, ನಮಗೆ ಯಾರೂ ಹೇಳಿಲ್ಲ: ಸಹೋದರಿ

Himachal-Bhavan

Order: ಬಾಕಿ ಹಣ ಕೊಡದ್ದಕ್ಕೆ ದಿಲ್ಲಿಯ ಹಿಮಾಚಲ ಭವನ ಹರಾಜು: ʼಕೈʼ ಸರಕಾರಕ್ಕೆ ಹಿನ್ನಡೆ

Russia-Putin

‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುತಿನ್‌ ಅಣ್ವಸ್ತ್ರ ದಾಳಿ ಎಚ್ಚರಿಕೆ!

Peetabail-Naxal-encounter-Vikram

Encounter: ನಕ್ಸಲ್‌ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್‌ ಮಾರುವೇಷ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.