ಹಳೇ ಆರೋಪಿಗಳ ಬಂಧನ
Team Udayavani, Mar 6, 2019, 1:00 AM IST
ಮಂಗಳೂರು: ಹಲವು ವರ್ಷ ಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಆದೇಶದಂತೆ ರೌಡಿ ನಿಗ್ರಹ ದಳದ ಸಿಬ್ಬಂದಿಯವರು ಬಂಧಿಸಿದ್ದಾರೆ. ಮೂಲ್ಕಿ ನಿವಾಸಿ ಕೆ.ಎ ಇಬ್ರಾಹಿಂ (62) ಹಾಗೂ ತಿರುವೈಲ್ ಗ್ರಾಮದ ಕೆತ್ತಿಕಲ್ ನಿವಾಸಿ ಹಬೀಬುಲ್ಲಾ (32) ಬಂಧಿತ ಆರೋಪಿಗಳು.
ಕೆ.ಎ ಇಬ್ರಾಹಿಂ ಮೇಲೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2002ರಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು, ನಂತರ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡು ವಿದೇಶದಲ್ಲಿದ್ದ. ಆರೋಪಿಯ ಪತ್ತೆಯ ನ್ಯಾಯಾಲಯವು ಈತನ ಮೇಲೆ ವಾರಂಟು ಹೊರಡಿಸಿತ್ತು. ಈತ ಮುಲ್ಕಿಗೆ ಬಂದ ಬಗ್ಗೆ ಮಾಹಿತಿ ಪಡೆದ ರೌಡಿ ನಿಗ್ರಹ ದಳದ ಸಿಬ್ಬಂದಿಯವರು ಕಾರ್ಯಾಚರಣೆ ನಡೆಸಿ ಬಂಧಿಸಿದರು.
ಹಬೀಬುಲ್ಲಾ ಮೇಲೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2007ರಲ್ಲಿ ದೊಂಬಿ ಪ್ರಕರಣ ದಾಖಲಾಗಿತ್ತು. ನಂತರ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಈತನ ಮೇಲೆ ವಾರಂಟ್ ಹೊರಡಿಸಲಾಗಿತ್ತು .ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ನಿರ್ದೇಶದಂತೆ, ಡಿಸಿಪಿಗಳಾದ ಹನುಮಂತರಾಯ ಹಾಗೂ ಉಮಾ ಪ್ರಶಾಂತ್ ಮಾರ್ಗದರ್ಶನದಲ್ಲಿ ದಕ್ಷಿಣ ರೌಡಿ ನಿಗ್ರಹ ದಳದ ಎ.ಸಿ.ಪಿ. ಮತ್ತು ಸಿಬಂದಿ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.