ಬೋಟ್‌ ಆ್ಯಂಬುಲೆನ್ಸ್‌ ಪ್ರಸ್ತಾವನೆಯಲ್ಲೇ ಬಾಕಿ

ಕೇರಳದ "ಮರೈನ್‌ ಆ್ಯಂಬುಲೆನ್ಸ್‌'ನಿಂದ ಪ್ರೇರಿತವಾದ ಯೋಜನೆ

Team Udayavani, May 26, 2022, 7:25 AM IST

ಬೋಟ್‌ ಆ್ಯಂಬುಲೆನ್ಸ್‌ ಪ್ರಸ್ತಾವನೆಯಲ್ಲೇ ಬಾಕಿ

ಮಂಗಳೂರು: ಸಮುದ್ರದಲ್ಲಿ ಮೀನುಗಾರಿಕೆ ಸಂದರ್ಭ ಅವಘಡಗಳುಂಟಾದರೆ ಜೀವರಕ್ಷಣೆಗೆ ನೆರವಾಗುವ “ಬೋಟ್‌ (ಸೀ) ಆ್ಯಂಬುಲೆನ್ಸ್‌’ ಪ್ರಸ್ತಾವನೆ ಇನ್ನೂ ಕಡತದಲ್ಲೇ ಬಾಕಿಯಾಗಿದೆ.

ಎರಡು ವರ್ಷಗಳ ಹಿಂದೆ ಕೇರಳ ಸರಕಾರವು ಬಿಪಿಸಿಎಲ್‌ ಜತೆ ಸೇರಿ “ಮರೈನ್‌ ಆ್ಯಂಬುಲೆನ್ಸ್‌’ ಸೇವೆ ಆರಂಭಿಸಿದ ಬಳಿಕ ರಾಜ್ಯದಲ್ಲೂ ಬೋಟ್‌ ಆ್ಯಂಬುಲೆನ್ಸ್‌ಗೆ ಬೇಡಿಕೆ ವ್ಯಕ್ತವಾಗಿತ್ತು. ಅಧಿಕಾರಿಗಳು ಅಗತ್ಯ ಮಾಹಿತಿ ಸಂಗ್ರಹಿಸಿ ಯೋಜನೆ ಸಿದ್ಧಪಡಿಸಿ, ಕೇರಳದಲ್ಲಿರುವುದಕ್ಕಿಂತಲೂ ಹೆಚ್ಚಿನ ಸಂಖ್ಯೆಯ ಬೋಟ್‌ ಆ್ಯಂಬುಲೆನ್ಸ್‌ಗಳನ್ನು ಆರಂಭಿಸಲು ನಿರ್ಧರಿಸಿದ್ದರು. ಆದರೆ ಈ ಯೋಜನೆ ಬಜೆಟ್‌ನಲ್ಲಿ ಸೇರ್ಪಡೆಯಾಗಿರದ ಕಾರಣ ಕಾರ್ಯಗತಗೊಂಡಿಲ್ಲ ಎಂದು ತಿಳಿದುಬಂದಿದೆ.

ಏನಿದು ಬೋಟ್‌ ಆ್ಯಂಬುಲೆನ್ಸ್‌?
ಇದು ಸಮುದ್ರದಲ್ಲಿ ತುರ್ತಾಗಿ ಜೀವ ಉಳಿಸಲು ಅಗತ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ಒಳ ಗೊಂಡಿರುವ ನೌಕೆ. ಗಂಟೆಗೆ ಸುಮಾರು 14 ನಾಟಿಕಲ್‌ ಮೈಲು ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ವಿದ್ದು, ಏಕಕಾಲದಲ್ಲಿ ಸುಮಾರು 10 ಮಂದಿಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಇದ ರಲ್ಲಿರುತ್ತದೆ. ಈಜು ಗಾರರು, ತಜ್ಞ ವೈದ್ಯರು, ಆರೋಗ್ಯ ಸಿಬಂದಿ ಮೊದಲಾದವುಗಳನ್ನು ಒಳಗೊಂಡಿರುತ್ತದೆ.

ಕಡಲಿನಲ್ಲಿ ಬೇರೆ ವ್ಯವಸ್ಥೆ ಇಲ್ಲ
ಈಗ ಮೀನುಗಾರಿಕಾ ದೋಣಿ ಗಳು ಅವಘಡಕ್ಕೀಡಾದರೆ ರಕ್ಷಣೆಗೆ ಬೇರೊಂದು ಬೋಟ್‌ನವರೇ ಧಾವಿಸಬೇಕಾಗಿದೆ. ಅನೇಕ ಬಾರಿ ರಕ್ಷಿಸಿ ದರೂ ಪ್ರಥಮ ಚಿಕಿತ್ಸೆ ಸಾಧ್ಯ ವಾಗುತ್ತಿಲ್ಲ. ತುರ್ತಾಗಿ ದಡಕ್ಕೆ ಸಾಗಿ ಸು ವುದೂ ಕಷ್ಟವಾಗಿದೆ. ಕರಾವಳಿ ಕಾವಲು ಪೊಲೀಸ್‌ ಪಡೆ ಅಥವಾ ಕೋಸ್ಟ್‌ ಗಾರ್ಡ್‌ನವರಲ್ಲಿ ಸೀಮಿತ ಸಂಖ್ಯೆಯ ಬೋಟ್‌ಗಳಿದ್ದು, ಅವು ಬೋಟ್‌ ಆ್ಯಂಬುಲೆನ್ಸ್‌ನಂತಹ ವ್ಯವಸ್ಥೆಗಳನ್ನೂ ಹೊಂದಿಲ್ಲ.

ಅವಘಡ ಹೆಚ್ಚಳ
ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ 2018ರಿಂದ ಮೇ 23ರ ವರೆಗೆ ಬೋಟ್‌ ಅವಘಡಗಳಲ್ಲಿ 9 ಮಂದಿ ಮೃತಪಟ್ಟಿದ್ದು, ಓರ್ವ ನಾಪತ್ತೆಯಾಗಿದ್ದಾರೆ. ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 2019-20ರ ಸಾಲಿನಲ್ಲಿ 32 ಮಂದಿ, 2020-21ರಲ್ಲಿ 29 ಮಂದಿ, 2021-22ರಲ್ಲಿ (ಮೇ 24ರ ವರೆಗೆ) 20 ಮಂದಿ ಮೃತಪಟ್ಟಿದ್ದಾರೆ.

ಮೀನುಗಾರರ ಜೀವರಕ್ಷಣೆಗೆ ನೆರವಾಗುವ ಉದ್ದೇಶದಿಂದ ಬೋಟ್‌ ಆ್ಯಂಬುಲೆನ್ಸ್‌ ಸೇವೆಗಾಗಿ ಪ್ರಸ್ತಾವನೆ ಸಿದ್ಧವಾಗಿದೆ. 3 ಬೋಟ್‌ ಆ್ಯಂಬುಲೆನ್ಸ್‌ಗಳನ್ನು ಒದಗಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲಿ ಮುಖ್ಯಮಂತ್ರಿ ಜತೆಗೆ ಮಾತುಕತೆ ನಡೆಸುತ್ತೇನೆ.
– ಎಸ್‌. ಅಂಗಾರ, ಮೀನುಗಾರಿಕಾ ಸಚಿವ

 

-  ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.