ಎತ್ತಿನಹೊಳೆ ವಿರುದ್ಧದ ಅರ್ಜಿ ಹಸಿರು ನ್ಯಾಯಪೀಠದಲ್ಲಿ ವಜಾ
Team Udayavani, May 25, 2019, 6:00 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ಎತ್ತಿನಹೊಳೆ ಯೋಜನೆಯ ವಿರುದ್ಧ ಪರಿಸರವಾದಿಗಳು ಸಲ್ಲಿಸಿದ್ದ ಎರಡು ಅರ್ಜಿಗಳನ್ನು ಹಸಿರು ನ್ಯಾಯ ಪೀಠ (ಎನ್‌ಜಿಟಿ) ಶುಕ್ರವಾರ ವಜಾಗೊಳಿಸಿ ತೀರ್ಪು ನೀಡಿದೆ. ಈ ಮೂಲಕ ಎತ್ತಿನಹೊಳೆ ಯೋಜನೆಯ ವಿರುದ್ಧದ ಹೋರಾಟಕ್ಕೆ ಹಿನ್ನಡೆಯಾಗಿದೆ.
ಎತ್ತಿನಹೊಳೆ ಕಾಮಗಾರಿಗೆ ಸಂಬಂಧಿಸಿದಂತೆ ಅರಣ್ಯ ತೆರವಿಗೆ ಅವಕಾಶ ನೀಡಿರುವುದನ್ನು ಪ್ರಶ್ನಿಸಿ ಎನ್‌ಜಿಟಿ ಮುಂದೆ ಕೆ.ಎನ್. ಸೋಮಶೇಖರ್ ಮತ್ತು ಸಕಲೇಶಪುರದ ವಕೀಲ ಕಿಶೋರ್ ಕುಮಾರ್ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಇದರ ಅಂತಿಮ ತೀರ್ಪು ಪ್ರಕಟವಾಗಿದೆ.
ಕುಡಿಯುವ ನೀರಿನ ಯೋಜನೆಯಾಗಿರುವ ಹಿನ್ನೆಲೆಯಲ್ಲಿ ಇತರ ಆಕ್ಷೇಪ ಗಳು ಪರಿಗಣನೆಗೆ ಬರುವುದಿಲ್ಲವಾದ್ದರಿಂದ ಅರ್ಜಿ ಮತ್ತು ಮೇಲ್ಮನವಿ ಅರ್ಜಿ ಯನ್ನು ತಿರಸ್ಕರಿಸುವುದಾಗಿ ನ್ಯಾಯಪೀಠ ಆದೇಶ ಹೊರಡಿಸಿದೆ. ಆದರೂ ಪರಿಸರಕ್ಕೆ ಧಕ್ಕೆ ಆಗುವುದಾದಲ್ಲಿ ಸಂಬಂಧಪಟ್ಟ ಇಲಾಖೆಗಳು ಮಧ್ಯಪ್ರವೇಶ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳಬಹುದು. ಜತೆಗೆ ಪೂರಕ ಅಧ್ಯಯನ ನಡೆಸಲು ಅವಕಾಶವಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಉಲ್ಲೇಖೀಸಿದೆ.
“ಉದಯವಾಣಿ’ ಜತೆಗೆ ಮಾತನಾಡಿದ ಅರ್ಜಿದಾರ ಕೆ.ಎನ್. ಸೋಮಶೇಖರ್, ತೀರ್ಪಿನ ಪೂರ್ಣ ವಿವರವನ್ನು ವಕೀಲರ ಮೂಲಕ ಅಧ್ಯಯನ ಮಾಡಲಾಗುತ್ತಿದೆ. ಪೂರಕ ತೀರ್ಪು ಬಾರದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧರಿಸಲಾಗಿದೆ. ಯೋಜನೆಯ ಮೂಲಕ ಪಶ್ಚಿಮ ಘಟ್ಟಕ್ಕೆ ಆಗುತ್ತಿರುವ ಹಾನಿ ಮತ್ತು ಯೋಜನೆಯ ನಿಗೂಢತೆಯ ವಿರುದ್ಧ ಹೋರಾಟ ನಿಲ್ಲುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.