ವಿದ್ಯಾರ್ಥಿಗಳ ಪಾಲಕರಿಗೆ ಬೆದರಿಕೆ ಕರೆ ಪ್ರಕರಣ;ಪೋಲಂಡ್,ಪಾಕಿಸ್ಥಾನದ ಕೋಡ್ ಸಂಖ್ಯೆ ಬಳಕೆ !
Team Udayavani, Jun 13, 2024, 7:25 AM IST
ಮಂಗಳೂರು: ಕಳೆದ ಎರಡು ದಿನಗಳಲ್ಲಿ ಮಂಗಳೂರು ನಗರ ಮತ್ತು ಸುರತ್ಕಲ್ ಭಾಗದ ಕಾಲೇಜು ವಿದ್ಯಾರ್ಥಿಗಳ ಹೆತ್ತವರಿಗೆ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಅವರು, ಜೂ. 11 ಮತ್ತು 12ರಂದು ಹಲವಾರು ವಿದ್ಯಾರ್ಥಿಗಳ ಹೆತ್ತವರಿಗೆ ಅಪರಿಚಿತರು ಪೊಲೀಸ್ ಅಧಿಕಾರಿಗಳಂತೆ ಬಿಂಬಿಸಿಕೊಂಡು ವಾಟ್ಸ್‌ಆ್ಯಪ್ ಮೂಲಕ ಕರೆ ಮಾಡಿ ಮಗ/ಮಗಳನ್ನು ಬಂಧಿಸಿದ್ದೇವೆ. ಅವರ ಬಿಡುಗಡೆಗೆ ಕೂಡಲೇ ಹಣ ನೀಡಿ ಎಂದಿದ್ದಾರೆ. ಹೆತ್ತವರು ಆತಂಕಿತರಾಗಿ ಶಾಲೆಗಳಲ್ಲಿ ವಿಚಾರಿಸಿದಾಗ ಅವರ ಮಕ್ಕಳು ಶಾಲೆಯಲ್ಲಿ ಸುರಕ್ಷಿತರಾಗಿರುವುದು ಗೊತ್ತಾಗಿದೆ. ಕರೆ ಬಂದಿರುವ ಸಂಖ್ಯೆಗಳನ್ನು ಪರಿಶೀಲಿಸಿದಾಗ ಪೋಲಂಡ್, ಪಾಕಿಸ್ಥಾನ ದೇಶಗಳ ಕೋಡ್ ಸಂಖ್ಯೆಯನ್ನು ಹೊಂದಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ.
ನಕಲಿ ಅಧಿಕಾರಿಗಳು ಹಣ ದೋಚಲು ನಡೆಸಿರುವ ತಂತ್ರ ಇದು. ಈ ರೀತಿ ವಾಟ್ಸ್‌ಆ್ಯಪ್‌ನಲ್ಲಿ ವಿದೇಶಗಳಿಂದ ಬರುವ ಯಾವುದೇ ಅಪರಿಚಿತ ವ್ಯಕ್ತಿಗಳ ಕರೆಗಳನ್ನು ಸ್ವೀಕರಿಸಬಾರದು. ಒಂದು ವೇಳೆ ಇಂತಹ ಕರೆಗಳನ್ನು ಸ್ವೀಕರಿಸಿದರೆ ಕೂಡಲೇ ಪಕ್ಕದ ಪೊಲೀಸ್ ಠಾಣೆಗೆ ತಿಳಿಸಬೇಕು. ಶಾಲಾ ಕಾಲೇಜುಗಳು ಕೂಡ ಇಂತಹ ನಕಲಿ ಕರೆಗಳ ಕುರಿತು ಹೆತ್ತವರು, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಆಯುಕ್ತರು ತಿಳಿಸಿದ್ದಾರೆ.
ಡಾಟಾ ಬೇಸ್ ಕಳವು ಜಾಲ
ವಿದ್ಯಾರ್ಥಿಗಳ ಹೆತ್ತವರ ಮೊಬೈಲ್ ನಂಬರ್‌ನ್ನು ವಂಚಕರು “ಡಾಟಾ ಬೇಸ್ ಸೈಟ್’ಗಳಿಂದ ಖರೀದಿ ಮಾಡಿರುವ ಸಾಧ್ಯತೆ ಇದೆ. ನಮ್ಮ ದೇಶದಲ್ಲಿ ಇಂತಹ ಅನೇಕ ವೆಬ್‌ಸೈಟ್‌ಗಳು ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿವೆ. ಇದರಿಂದ ಅನೇಕ ಸಂಸ್ಥೆಗಳು ಕೂಡ ಅನಧಿಕೃತವಾಗಿ ಮೊಬೈಲ್ ಸಂಖ್ಯೆ, ಮತ್ತಿತರ ಮಾಹಿತಿಯನ್ನು ಪಡೆದುಕೊಳ್ಳುತ್ತವೆ. ಪರೀಕ್ಷಾ ಮಂಡಳಿಗಳಿಂದ ಸೈಬರ್ ವಂಚಕರು ಈ ರೀತಿಯ ಡಾಟಾ ಬೇಸ್‌ಗಳನ್ನು ಪಡೆದು ಅವುಗಳನ್ನು ಇತರ ವಂಚಕರಿಗೆ ಮಾರಾಟ ಮಾಡಿರುವ ಸಾಧ್ಯತೆ ಅಲ್ಲಗಳೆಯಲಾಗದು. ಹಾಗಾಗಿ ಪರೀಕ್ಷಾ ಮಂಡಳಿಗಳ ಬಗ್ಗೆಯೂ ತನಿಖೆ ನಡೆಸುವುದು ಸೂಕ್ತ. ಈ ರೀತಿಯಾಗಿ ಮಾಹಿತಿಯನ್ನು ಮಾರಾಟ ಮಾಡುವುದು “ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆ್ಯಕ್ಟ್’ ಪ್ರಕಾರ ಅಪರಾಧ. ಆದರೆ ಈ ಕಾಯಿದೆ ನಮ್ಮ ದೇಶದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎನ್ನುತ್ತಾರೆ ಮಂಗಳೂರಿನ ಸೈಬರ್ ಭದ್ರತಾ ತಜ್ಞ ಡಾ| ಅನಂತಪ್ರಭು ಜಿ. ಅವರು.
ಮತ್ತೆ ಇಬ್ಬರಿಗೆ ಕರೆ
ಬುಧವಾರ ಮತ್ತೆ ಇಬ್ಬರು ಹೆತ್ತವರಿಗೆ ಇದೇ ರೀತಿಯ ಕರೆಗಳು ಬಂದಿರುವುದಾಗಿ ತಿಳಿದು ಬಂದಿದೆ. ನಗರದ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೋರ್ವರ ಹೆತ್ತವರಿಗೆ ಕರೆ ಮಾಡಿದ ಅಪರಿಚಿತರು “ನಿಮ್ಮ ಮಗನ ಮೇಲೆ ಡ್ರಗ್ಸ್ ಕೇಸ್ ಹಾಕಿದ್ದೇವೆ. ಈತನನ್ನು ಬಿಡಿಸಿಕೊಂಡು ಹೋಗಬೇಕಾದರೆ ಕೂಡಲೇ ಹಣ ನೀಡಿ’ ಎಂಬುದಾಗಿ ಹೇಳಿದ್ದಾರೆ. ಮತ್ತೋರ್ವರಿಗೆ ಮಗಳನ್ನು ಅಪಹರಣ ಮಾಡಲಾಗಿದೆ ಎಂಬುದಾಗಿ ಹೇಳಿ ಹಣಕ್ಕೆ ಒತ್ತಾಯಿಸಿದ್ದಾರೆ. ಹೆತ್ತವರು ಕೂಡಲೇ ಕಾಲೇಜಿಗೆ ಕರೆ ಮಾಡಿ ಕೇಳಿದಾಗ ಇದೊಂದು ನಕಲಿ ಬೆದರಿಕೆ ಕರೆ ಎಂಬುದಾಗಿ ಗೊತ್ತಾಗಿದೆ.
ನಂಬರ್ ಸಿಕ್ಕಿದ್ಹೇಗೆ: ಇನ್ನೂ ನಿಗೂಢ
ಪ್ರಥಮ ಪಿಯುಸಿಯ ಮಕ್ಕಳ ಹೆತ್ತವರ ನಂಬರ್ ವಂಚಕರ ಕೈಗೆ ಸಿಕ್ಕಿದ್ದು ಹೇಗೆ ಎಂಬುದು ಇನ್ನೂ ನಿಗೂಢವಾಗಿದೆ. ಇದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹೆತ್ತವರು ಹೀಗೆ ಮಾಡಿ
ತಮ್ಮ ಮಕ್ಕಳು ಶಿಕ್ಷಣ ಪಡೆಯುತ್ತಿರುವ ಸಂಸ್ಥೆಯ ಲ್ಯಾಂಡ್‌ಲೈನ್ ದೂರವಾಣಿ ಸಂಖ್ಯೆ ಮಾತ್ರವಲ್ಲದೆ ಮೊಬೈಲ್ ಸಂಖ್ಯೆ, ಕ್ಲಾಸ್ ಟೀಚರ್ ಮೊಬೈಲ್ ಸಂಖ್ಯೆಯನ್ನು ತೆಗೆದಿಟ್ಟುಕೊಂಡಿರಬೇಕು. ಸಂಶಯ ಬಂದಾಗ ಕೂಡಲೇ ಅವರಿಗೆ ಕರೆ ಮಾಡಿ ತಮ್ಮ ಮಕ್ಕಳ ಸುರಕ್ಷತೆ ಬಗ್ಗೆ ತಿಳಿದುಕೊಳ್ಳಬೇಕು ಎಂದು ಸೈಬರ್ ಭದ್ರತಾ ತಜ್ಞರು, ಪೊಲೀಸರು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.