ಕಾಂಗ್ರೆಸ್ ಗೆಲುವು: ಬಿ.ಸಿ.ರೋಡ್‌ನಲ್ಲಿ ವಿಜಯೋತ್ಸವ
Team Udayavani, Apr 14, 2017, 2:30 PM IST
ಬಂಟ್ವಾಳ : ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದಕ್ಕಾಗಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಿ.ಸಿ.ರೋಡ್‌ನಲ್ಲಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿತಿಂಡಿ ವಿತರಿಸಿ ವಿಜಯೋತ್ಸವ ಆಚರಿಸಿದರು.
ಸಚಿವರು ಮಾತನಾಡಿ, ಕಾಂಗ್ರೆಸ್ ಮಾತ್ರ ಬಡವರ ನಾಡಿಮಿಡಿತ ಅರಿತಿರುವ ಪಕ್ಷವಾಗಿದ್ದು, ಕಾಂಗ್ರೆಸ್ ಮುಕ್ತ ಮಾಡುವ ಬಿಜೆಪಿ ಆಸೆ ನುಚ್ಚುನೂರಾಗಲಿದೆ. ಬಿಜೆಪಿ ಮುಕ್ತ ಕರ್ನಾಟಕದತ್ತ ಕಾಂಗ್ರೆಸ್ ಹೆಜ್ಜೆ ಇರಿಸಿದೆ ಎಂದರು.ಕಾಂಗ್ರೆಸ್ ಪಕ್ಷ ಯಾವತ್ತೂ ಬಡವರ ಪರವಾಗಿ ಕೆಲಸ ಮಾಡಿಕೊಂಡು ಬಂದಿದೆ. ಜನರು ಅದನ್ನು ಮೆಚ್ಚಿದ್ದಾರೆ. ಯಾವ ಭರವಸೆಯನ್ನು ಕೊಟ್ಟಿದ್ದೇವೋ ಆ ಭರವಸೆಯನ್ನು ಈಡೇರಿಸುತ್ತದೆ ಎಂಬುದನ್ನು ಜನರು ಅರಿತಿದ್ದಾರೆ. ಬಿಜೆಪಿ ಮುಂದಿನ ದಿನಗಳಲ್ಲಿ ನೆಲಕಚ್ಚಲಿದೆ ಎಂದರು.
ಈ ಸಂದರ್ಭ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್. ಖಾದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ಟಾಸ್ ಆಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬುಡಾ ಮಾಜಿ ಅಧ್ಯಕ್ಷ ಪಿಯುಸ್‌ಎಲ್. ರೋಡ್ರಿಗಸ್, ಎಪಿಎಂಸಿ ಅಧ್ಯಕ್ಷ ಕೆ. ಪದ್ಮನಾಭ ರೈ, ಉಪಾಧ್ಯಕ್ಷ ಚಂದ್ರಶೇಖರ ಪೂಜಾರಿ, ಸದಸ್ಯ ಆಲೊ#àನ್ಸ್ ಮಿನೇಜಸ್, ಪಕ್ಷದ ನಾಯಕ ಮಾಧವ ಮಾವೆ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಲುಕಾ¾ನ್, ಪಾಣೆಮಂಗಳೂರು ಬ್ಲಾಕ್ ಕಾರ್ಯದರ್ಶಿ ಮಹಮ್ಮದ್ ನಂದಾವರ, ನಾಮನಿರ್ದೇಶಿತ ಸದಸ್ಯ ಸಿದ್ದೀಕ್ ಗುಡ್ಡೆಯಂಗಡಿ , ಅಲ್ಬರ್ಟ್ ಮಿನೇಜಸ್, ಪುರಸಭಾ ಮಾಜಿ ಸದಸ್ಯ ರಫೀಕ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.